2020ರಲ್ಲಿ ಇಸ್ರೋದಿಂದ ಚಂದ್ರಯಾನ -3 ಹಾಗೂ ಗಗನ್ ಯಾನ ತಯಾರಿ
Team Udayavani, Jan 1, 2020, 12:41 PM IST
ಬೆಂಗಳೂರು: ಇಸ್ರೋ 2020ರಲ್ಲಿ ಚಂದ್ರಯಾನ -3 ಹಾಗೂ ಗಗನ್ ಯಾನಕ್ಕೆ ಅಗತ್ಯ ತಯಾರಿ ಕೈಗೊಳ್ಳಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.
ನಗರ ಅಂತರಿಕ್ಷ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಚಂದ್ರಯಾನ -2 ಬಹುತೇಕ ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ಅದೇ ಗುರಿ, ಉದ್ದೇಶಗಳೊಂದಿಗೆ ಚಂದ್ರಯಾನ 3 ಕೈಗೊಳ್ಳಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ಈಗಾಗಲೇ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಉಡಾವಣೆ ವಾಹನ, ಲ್ಯಾಂಡರ್ ತಯಾರಿ ಸೇರಿ 600 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.
ಚಂದ್ರಯಾನ 3 ರಲ್ಲಿ ಲ್ಯಾಂಡರ್, ರೋವರ್ ಮಾತ್ರ ಇರಲಿವೆ. ಚಂದ್ರಯಾನ 2ರ ಆರ್ಬಿಟ್ ಈಗಾಗಲೇ ಚಂದ್ರನಂಗಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರೊಂದಿಗೆ ಚಂದ್ರಯಾನ – 3 ರ ಲ್ಯಾಂಡರ್ , ರೋವರ್ ಅನ್ನು ಸಂಪರ್ಕ ಮಾಡಲಾಗುತ್ತದೆ. ಅಂದಾಜು 2021 ಆರಂಭದಲ್ಲಿಯೇ ಚಂದ್ರಯಾನ -3 ಜರುಗಲಿದೆ ಎಂದು ತಿಳಿಸಿದರು.
ಮಾನವ ಸಹಿತ ಬಾಹ್ಯಾಕಾಶ ಯಾತ್ರೆಯ ಯೋಜನೆಯಾಗಿರುವ ಗಗನಯಾನಗೆ ಇಸ್ರೋ ಸಿದ್ಧಗೊಂಡಿದ್ದು, ತರಬೇತಿ ಪಡೆದ ನಾಲ್ಕು ಮಂದಿಯು ಯಾನದಲ್ಲಿ ಇರಲಿದ್ದಾರೆ. ವರ್ಷಾಂತ್ಯ ಅಥವಾ ಮುಂದಿನ ವರ್ಷ ಮೊದಲ ತಿಂಗಳಲ್ಲಿ ಗಗನ್ ಯಾನ ಕೈಗೊಳ್ಳಲಾಗುತ್ತದೆ. ಅಲ್ಲದೆ ಈ ವರ್ಷ ವಿವಿಧ ನೂತನ ಯೋಜನೆಗಳನ್ನು ಇಸ್ರೋ ನಡೆಸಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.