ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್‌ ಆಗಲಿ

ಕೊಟೆಗಂಗೂರಿಗೆ ಟರ್ಮಿನಲ್‌ ಸ್ಥಳಾಂತರ ನಿರ್ಧಾರದ ವಿರುದ್ಧ ಪ್ರತಿಭಟನೆ: ಕಾಗೋಡು

Team Udayavani, Jan 1, 2020, 3:50 PM IST

1–January-18

ಸಾಗರ: ರೈಲ್ವೆ ತಾಂತ್ರಿಕ ವರದಿಯ ಅನ್ವಯ ತಾಳಗುಪ್ಪದಲ್ಲಿ ಆಗಬೇಕಿದ್ದ ರೈಲ್ವೆ ಟರ್ಮಿನಲ್‌ ಹಿತಾಸಕ್ತಿಗಳ ಕಾರಣ ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ಆಗುವುದನ್ನು ಸಮರ್ಥಿಸಲಾಗುವುದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಹೋರಾಟವೇ ಗತಿ ಎಂಬ ವಾತಾವರಣವಿದೆ. ಟರ್ಮಿನಲ್‌ಗೆ ಕೋಟೆಗಂಗೂರನ್ನೇ ಆಯ್ಕೆ ಮಾಡಿ, ಶಂಕುಸ್ಥಾಪನೆಗೆ ಮುಂದಾದರೆ ಆ ದಿನ ಹತ್ತು ಜನ ಸಾವನ್ನಪ್ಪಿದರೂ ಹೆದರದೆ ಆ ಸ್ಥಳದಲ್ಲಿ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಎಚ್ಚರಿಸಿದರು.

ನಗರದ ಸಾಗರ ಜಂಬಗಾರು ರೈಲ್ವೆ ನಿಲ್ದಾಣದ ಬಳಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ವತಿಯಿಂದ ತಾಳಗುಪ್ಪದಿಂದ ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್‌ ಸ್ಥಳಾಂತರಿಸಿರುವುದನ್ನು ಖಂಡಿಸಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಭಾಷಣದಿಂದ ಬದಲಾವಣೆ ಸಾಧ್ಯವಿಲ್ಲ. ನಮ್ಮ ಹಕ್ಕುಗಳನ್ನು ಕಿತ್ತುಕೊಂಡಾಗ ಅವಿರತ ಹೋರಾಟ ಮಾಡುವ ಮೂಲಕ ತಪ್ಪಿ ಹೋಗಿದ್ದನ್ನು ಮರಳಿ ತರಿಸಿಕೊಳ್ಳುವ ಪ್ರಯತ್ನ ಮಾಡಬೇಕು. ತಾಳಗುಪ್ಪಕ್ಕೆ ಮಂಜೂರಾದ ರೈಲ್ವೆ ಟರ್ಮಿನಲ್‌ ಶಿವಮೊಗ್ಗದ ಕೋಟೆಗಂಗೂರಿಗೆ ವರ್ಗಾವಣೆ ಮಾಡಲಾಗಿದೆ. ಅದನ್ನು ವಾಪಸ್‌ ತಾಳಗುಪ್ಪಕ್ಕೆ ತರಲು ಹೋರಾಟ ಮಾತ್ರ ದಾರಿಯಾಗಿದೆ ಎಂದರು.

ಕಾಂಗ್ರೆಸ್‌ನ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್‌ ಮಾತನಾಡಿ, ಕ್ಷೇತ್ರದ ಶಾಸಕರು, ಸಂಸದರಿಗೆ ಕನಿಷ್ಟ ಜವಾಬ್ದಾರಿಗಳಿಲ್ಲದಾಗ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತವೆ. ಟರ್ಮಿನಲ್‌ ತಾಳಗುಪ್ಪಕ್ಕೆ ಬರದಿರುವುದನ್ನು ವಿರೋ ಧಿಸುವುದಕ್ಕೂ ಬೆದರುವ ಶಾಸಕರನ್ನು ನಾಲಾಯಕ್‌ ಎನ್ನಬೇಕಾಗಿದೆ. ಸಾವಿರಾರು ಎಕರೆ ಬೇನಾಮಿ ಆಸ್ತಿಯನ್ನು ಶಿವಮೊಗ್ಗದಲ್ಲಿ ಹೊಂದಿರುವ ಕುಟುಂಬ ಕೋಟೆಗಂಗೂರಿನ ಸುತ್ತಮುತ್ತ ಇರುವ ತಮ್ಮ ಜಮೀನಿನ ಬೆಲೆ ಹೆಚ್ಚಿಸಿಕೊಳ್ಳಲು ಟರ್ಮಿನಲ್‌ನ್ನು ಅಲ್ಲಿ ಸ್ಥಾಪಿಸಲು ಮುಂದಾಗಿದ್ದಾರೆ. ಬೇನಾಮಿ ಆಸ್ತಿ ಕುರಿತು ನಮಗೆ ಮಾಹಿತಿ ಸಿಕ್ಕಿದೆ ಎಂದರು.

ಸಂಸದರ ನಿರ್ಲಕ್ಷ್ಯದಿಂದ ಸಾಗರ ಕ್ಷೇತ್ರಕ್ಕೆ ಬಂದ ಅವಕಾಶವನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಅಧಿಕಾರಿಗಳು ಪಕ್ಷದ ಏಜೆಂಟರಂತೆ ಕೆಲಸ ಮಾಡಬಾರದು. ಹಿಂದೆ ಸ್ಥಳೀಯ ಶಾಸಕ ಎಚ್‌. ಹಾಲಪ್ಪ ರೈಲ್ವೆ ಟರ್ಮಿನಲ್‌ ತಾಳಗುಪ್ಪದಲ್ಲಿಯೇ ಮಾಡಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಸೊರಬದ ಶಾಸಕ ಕುಮಾರ್‌ ಬಂಗಾರಪ್ಪ ತಮ್ಮ ತಂದೆಯ ಹೆಸರಿಗೆ ಕಳಂಕ ತರುವಂತೆ ವರ್ತಿಸುತ್ತಿದ್ದಾರೆ. ಎಲ್ಲರಿಗೂ ಶಿಕಾರಿಪುರ ಮಾದರಿಯ ಅಭಿವೃದ್ಧಿ ಎಂದು ಹೇಳಲಾಗುತ್ತಿದೆಯೇ ವಿನಃ ಸಾಗರ ಮಾದರಿ, ಸೊರಬ ಮಾದರಿ ಇಲ್ಲ ಎಂದು ವ್ಯಂಗ್ಯವಾಡಿದರು.

ರೈಲ್ವೆ ಹೋರಾಟ ಸಮಿತಿ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ|ನಾ.ಡಿಸೋಜಾ ಮಾತನಾಡಿ, ಕೇಂದ್ರ ರೈಲ್ವೆ ಇಲಾಖೆ ತಾಳಗುಪ್ಪದಲ್ಲಿ ಟರ್ಮಿನಲ್‌ ಮಾಡಲು ಸೂಕ್ತ ಜಾಗವಿದೆ ಎಂದು ತೀರ್ಮಾನಿಸಿದಾಗ ರೈಲ್ವೆ ಹೋರಾಟ ಸಮಿತಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ನಡೆಸಿದೆ. ಹೋರಾಟ ಸುದೀರ್ಘ‌ವಾದದ್ದು. ನಿರಂತರವಾದ ಹೋರಾಟ ಇರಲಿ. ಯಾವುದೇ ಕಾರಣಕ್ಕೂ ನಿರಾಶೆ ಹೊಂದುವುದು ಬೇಡ ಎಂದು ತಿಳಿಸಿದರು.

ತಾಪಂ ಅಧ್ಯಕ್ಷ ಬಿ.ಎಚ್‌.ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಸಂಸದರ ಮಾತುಗಳು ನಂಬಿಕೆಗೆ ಅರ್ಹವಲ್ಲ. ಶಿವಮೊಗ್ಗದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ನಾನು ವಿಷಯ ಪ್ರಸ್ತಾಪಿಸಿದಾಗ, ಇನ್ನೂ ನಿರ್ಧಾರ ಆಗಿಲ್ಲ ಎಂದು ಹೇಳುತ್ತಾರೆ. ನೂರಾರು ರೈಲ್ವೆ ಅಧಿಕಾರಿಗಳು ಟರ್ಮಿನಲ್‌ನಲ್ಲಿ ಕೆಲಸ ಮಾಡಬೇಕಾಗಿದ್ದು, ಅವರು ತಾಳಗುಪ್ಪದಲ್ಲಿ ಕೆಲಸ ಮಾಡಲು ಹಿಂಜರಿಯುತ್ತಾರೆ. ಹಾಗಾಗಿ ಟರ್ಮಿನಲ್‌ ಅಲ್ಲಿ ಆಗುವುದು ಕಷ್ಟ ಎಂದು ತಿಳಿಸುತ್ತಾರೆ. ಜನಪರವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕೇ ವಿನಃ ಅಧಿಕಾರಿಗಳ ಅನುಕೂಲಕ್ಕಾಗಿ ಅಲ್ಲ ಎಂಬುದೇ ಇವರಿಗೆ ಅರಿವಿದ್ದಂತಿಲ್ಲ ಎಂದು ಟೀಕಿಸಿದರು.

ಜಿಪಂ ಮಾಜಿ ಸದಸ್ಯ ರವಿ ಕುಗ್ವೆ, ಉತ್ತರ ಕನ್ನಡ ರೈತ ಸಂಘದ ಅಧ್ಯಕ್ಷ ವೀರಭದ್ರಪ್ಪ, ಜಿಪಂ ಸದಸ್ಯೆ ಅನಿತಾಕುಮಾರಿ ಇತರರು ಮಾತನಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್‌, ಎಪಿಎಂಸಿ ಅಧ್ಯಕ್ಷ ರವಿಕುಮಾರ್‌ ಹುಣಾಲಮಡಿಕೆ, ಬಳಕೆದಾರರ ವೇದಿಕೆ ಕಾರ್ಯದರ್ಶಿ ಜನಾರ್ದನ ರಾವ್‌ ಹಕ್ರೆ, ಬಿ.ಆರ್‌. ಜಯಂತ್‌, ನಂದಾ ಗೊಜನೂರು, ಶಿವಾನಂದ ಕುಗ್ವೆ, ಜಯಲಕ್ಷ್ಮೀ ನಾರಾಯಣಪ್ಪ, ಕುಮಾರಸ್ವಾಮಿ, ಚೂಡಾಮಣಿ ರಾಮಚಂದ್ರ, ಮಹಾಬಲೇಶ್ವರ ಕುಗ್ವೆ, ಸುಳಗೋಡು ಗಣಪತಿ, ದಳವಾಯಿ ದಾನಪ್ಪ ಇನ್ನಿತರರು ಇದ್ದರು.

ಹೋರಾಟ ಸಮಿತಿಯ ಪರಮೇಶ್ವರ ದೂಗೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ.ಎನ್‌. ಹುಬ್ಬಳ್ಳಿ ಹಾಗೂ ವಸಂತ್‌ ಕುಗ್ವೆ ಕ್ರಾಂತಿಗೀತೆ ಹಾಡಿದರು. ಎ.ಎಸ್‌. ಶೇಟ್‌ ಸ್ವಾಗತಿಸಿದರು. ಕೆ.ಎನ್‌. ವೆಂಕಟಗಿರಿ ಹಕ್ಕೊತ್ತಾಯ ಪತ್ರ ವಾಚಿಸಿದರು. ಸುಧಾಕರ ಕುಗ್ವೆ ನಿರೂಪಿಸಿದರು. ಈ ಸಂದರ್ಭದಲ್ಲಿ ಇದಕ್ಕೂ ಮೊದಲು ಮಹಾಗಣಪತಿ ದೇವಸ್ಥಾನದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.