ಅಪರಾಧ ತಡೆಗೆ ಸಹಕಾರ ಅಗತ್ಯ: ರಂಗಪ್ಪ
Team Udayavani, Jan 1, 2020, 4:54 PM IST
ಮಾನ್ವಿ: ಸಮಾಜದಲ್ಲಿ ಹೆಚ್ಚುತ್ತಿರುವ ಅಪರಾಧ ತಡೆಗೆ ಸಾರ್ವಜನಿಕರು ಪೊಲೀಸ್ ಇಲಾಖೆ ಜತೆಗೆ ಕೈಜೋಡಿಸಬೇಕು ಎಂದು ಪಿಎಸ್‌ಐ ರಂಗಪ್ಪ ದೊಡ್ಡಮನಿ ಹೇಳಿದರು.
ಪಟ್ಟಣದ ಬಸವ ವೃತ್ತದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ತಿಳಿಯುವ ಅಪರಾಧ ಕೃತ್ಯಗಳ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿದಾರರ ಹೆಸರು ಬಹಿರಂಗಪಡಿಸುವುದಿಲ್ಲ. ಕೂಡಲೇ ಮಾಹಿತಿ ನೀಡುವುದರಿಂದ ಆಗುವ ಅನಾಹುತಗಳನ್ನು ತಡೆಯಬಹುದು ಎಂದರು.
ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಗಮನವಿರಲಿ. ಮನೆಗಲ್ಲಿ ಬೆಲೆಬಾಳುವ ಆಭರಣಗಳನ್ನು ಇಡಬೇಡಿ. ಕೆಲವರು ಕೆಳ ಮನೆಯಲ್ಲಿ ಆಭರಣಗಳನ್ನಿಟ್ಟು ಮಹಡಿ ಮೇಲೆ ಮಲಗಿಕೊಳ್ಳುತ್ತಾರೆ. ಇದನ್ನು ಮುಂಚಿತವಾಗಿಯೇ ತಿಳಿದುಕೊಳ್ಳುವ ಕಳ್ಳರು ಕಳ್ಳತನ ಮಾಡುತ್ತಾರೆ. ಆದ್ದರಿಂದ ಆಭರಣಗಳನ್ನು ಬ್ಯಾಂಕ್ ಗಳಲ್ಲಿ ಸೇಫ್‌ಲಾಕರ್‌ನಲ್ಲಿ ಇಡುವುದು ಉತ್ತಮ ಎಂದರು.
ಪ್ರತಿ ವರ್ಷ ಡಿಸೆಂಬರ್‌ನಲ್ಲಿ ಪೊಲೀಸ್ ಇಲಾಖೆ ಅಪರಾಧ ತಡೆ ಮಾಸ ಆಚರಿಸುತ್ತದೆ. ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಪಟ್ಟಣದ ವಿವಿಧೆಡೆ ಬ್ಯಾನರ್‌ಗಳನ್ನು ಹಾಕಿದ್ದು, ಅದರಲ್ಲಿ ಪೊಲೀಸ್ ಅಧಿಕಾರಿಗಳ ಮೊಬೈಲ್ ನಂಬರ್ ನೀಡಲಾಗಿದೆ. ಸಾರ್ವಜನಿಕರು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದರು. ಮುಖ್ಯಪೇದೆ ರಾಮಪ್ಪ, ಸಿಬ್ಬಂದಿ ಶಾಂತಕುಮಾರ, ಖಾಸಗಿ ವಾಹನ ಚಾಲಕರು, ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.