ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ಲಗ್ಗೆ

ಆಡುಮಲ್ಲೇಶ್ವರ ಕಿರು ಮೃಗಾಲಯ-ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಜನಸಾಗರ

Team Udayavani, Jan 2, 2020, 1:19 PM IST

2-January-12

ಚಿತ್ರದುರ್ಗ: ಹೊಸ ವರ್ಷ 2020ರ ಆರಂಭದ ದಿನದಂದು ಕೋಟೆ ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರು ಬಹು ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಅದರಲ್ಲೂ ಒಂದೇ ದಿನ ಅತಿ ಹೆಚ್ಚು ಪ್ರವಾಸಿಗರು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಭೇಟಿ ನೀಡಿದ್ದು ವಿಶೇಷ.

ಇಲ್ಲಿನ ಕಿರು ಮೃಗಾಲಯ ಸ್ಥಾಪನೆಯಾದ ದಿನದಿಂದ ಇದುವರೆಗೆ ಆಡುಮಲ್ಲೇಶ್ವರದ ಟಿಕೆಟ್‌ ಕೌಂಟರ್‌ ಕಲೆಕ್ಷನ್‌ 1 ಲಕ್ಷ ರೂ. ದಾಟಿರಲಿಲ್ಲ. ಆದರೆ ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ 1.40 ಲಕ್ಷ ರೂ. ಸಂಗ್ರಹವಾಗಿದ್ದು, 3700 ಜನ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಹೊಸ ವರ್ಷದ ಜತೆಗೆ ಮಳೆಯಿಂದ ಹಚ್ಚ ಹಸಿರಾಗಿರುವ ಪರಿಸರ, ಅಭಿವೃದ್ಧಿ ಹೊಂದುತ್ತಿರುವ ಮೃಗಾಲಯ ಇದಕ್ಕೆ ಕಾರಣವಿರಬಹುದು. ಮೈಸೂರು ಪ್ರಾಣಿ ಸಂಗ್ರಹಾಲಯದಿಂದ ವಿಶೇಷ ಅತಿಥಿಗಳಾಗಿ ಆಗಮಿಸಿರುವ ವಿಧ ವಿಧದ ಪಕ್ಷಿಗಳು, ಪ್ರಾಣಿಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಕೋಟೆಗೂ ಲಗ್ಗೆ ಇಟ್ಟ ಪ್ರವಾಸಿಗರ ದಂಡು: ಐತಿಹಾಸಿಕ ನಗರಿ ಚಿತ್ರದುರ್ಗದ ಏಳು ಸುತ್ತಿನ ಕೋಟೆಗೆ ಹೊಸ ವರ್ಷದ ಮೊದಲ ದಿನದಂದು ದಾಖಲೆ ಪ್ರಮಾಣದಲ್ಲೆ ಪ್ರವಾಸಿಗರು ಆಗಮಿಸಿದ್ದಾರೆ.
ಪ್ರತಿ ವರ್ಷ ಈ ದಿನದಂದು ವ್ಯಾಪಕ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಆದರೂ ನಿರೀಕ್ಷೆ ಮೀರಿ ಜನ ಬಂದಿದ್ದರಿಂದ ಪೊಲೀಸರು ಹಾಗೂ ಪುರಾತತ್ವ ಇಲಾಖೆ ಸಿಬ್ಬಂದಿ ಪ್ರವಾಸಿಗರನ್ನು ನಿಯಂತ್ರಿಸಲು ಹರಸಾಹಸಪಡಬೇಕಾಯಿತು.

ಸಾಮಾನ್ಯ ದಿನಗಳಲ್ಲಿ ಸುಮಾರು ಒಂದೂವರೆ ಸಾವಿರ ಪ್ರವಾಸಿಗರು ಬಂದು ಹೋಗುವ ಕೋಟೆಗೆ ಇಂದು 6134 ಪ್ರವಾಸಿಗರು ಬಂದಿದ್ದಾರೆ. ಇದು ಕೌಂಟರ್‌ನಲ್ಲಿ ಮಾರಾಟವಾಗಿರುವ ಟಿಕೆಟ್‌ ಗಳ ಲೆಕ್ಕ ಮಾತ್ರ. ಆದರೆ ವಿಪರೀತ ಜನಸಂದಣಿ ಶುರುವಾಗಿದ್ದರಿಂದ 10 ಟಿಕೆಟ್‌ ತೆಗೆದುಕೊಂಡು 15
ಮಂದಿ ಪ್ರವೇಶಿಸುವುದು, ನೂಕುನುಗ್ಗಲಾಗಿ ಟಿಕೆಟ್‌ ಇಲ್ಲದೆ ಒಳ ಹೋದವರ ಸಂಖ್ಯೆ ಮಾರಾಟವಾದ ಟಿಕೆಟ್‌ಗಿಂತ ಹೆಚ್ಚೇ ಆಗಬಹುದು. ಒಂದು ದಿನದ ಕೌಂಟರ್‌ ಕಲೆಕ್ಷನ್‌ 1.53 ಲಕ್ಷ ರೂ. ಆಗಿದೆ.

ಮಧ್ಯರಾತ್ರಿ 12ಕ್ಕೆ ಮುಗಿಲು ಮುಟ್ಟಿದ ಸಂಭ್ರಮ: ಹೊಸ ವರ್ಷದ ಹಿಂದಿನ ದಿನ ಅಂದರೆ ಡಿಸೆಂಬರ್‌ 31ರಂದು ಮಧ್ಯರಾತ್ರಿ ಸ್ನೇಹಿತರು, ಕುಟುಂಬದವರು ಸೇರಿ ಹೊಸ ವರ್ಷದ ಮೊದಲ ದಿನವನ್ನು ಸ್ವಾಗತಿಸುವುದು ವಾಡಿಕೆ. ಅದರಂತೆ ಮಂಗಳವಾರ ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಆಗಸದಲ್ಲಿ ಚಿತ್ತಾರ ಮೂಡಿಸುವ ಪಟಾಕಿ ಸಿಡಿಸಿ ಕೇಕೆ ಹಾಕುವ ದೃಶ್ಯಗಳು ಕಂಡು ಬಂದವು. ಜತೆಗೆ ಕೇಕ್‌ ಕತ್ತರಿಸಿ ತಿನ್ನಿಸುವ ದೃಶ್ಯಗಳು ಸಾಮಾನ್ಯವಾಗಿದ್ದವು. ಹೊಸ ವರ್ಷದ ಹಿನ್ನೆಲೆಯಲ್ಲಿ ಎಲ್ಲ ಬೇಕರಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಕ್‌ ತಯಾರಿಸಿ ಇಟ್ಟುಕೊಳ್ಳಲಾಗಿತ್ತು.

ಇದರ ನಡುವೆ ನಮ್ಮ ಹೊಸ ವರ್ಷ ಯುಗಾದಿಗೆ. ನಾನು ಆಗಲೇ ಸಂಭ್ರಮಿಸುವುದು ಎಂದು ಹೇಳುವ ಒಂದು ವರ್ಗವೂ ಎಲ್ಲವನ್ನೂ ನೋಡುತ್ತಾ ಓಡಾಡುತ್ತಿತ್ತು. ಅನೇಕರು ಸೋಷಿಯಲ್‌ ಮೀಡಿಯಾಗಳಲ್ಲಿ ಕ್ಯಾಲೆಂಡರ್‌ ಬದಲಾಯಿಸುವ ಹೊಸ ವರ್ಷದ ಬಗ್ಗೆ ಆಕ್ಷೇಪ ಎತ್ತಿದ ಪ್ರಸಂಗಗಳೂ ನಡೆದವು.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.