ವೃತ್ತಿ ನೈಪುಣ್ಯತೆ ಸಾಧಿಸಲು ಧನಾತ್ಮಕ ಚಿಂತನೆ ಸಹಕಾರಿ


Team Udayavani, Jan 2, 2020, 3:04 PM IST

HV-TDY-3

ಹಾವೇರಿ: ಇಂದಿನ ಆಧುನಿಕ ಯುಗದಲ್ಲಿ ಅತ್ಯಂತ ಒತ್ತಡದಲ್ಲಿ ಬದುಕಬೇಕಾಗಿದೆ. ನಮ್ಮ ವೃತ್ತಿಯಲ್ಲಿ, ಪರಿಸರದಲ್ಲಿ ಒತ್ತಡವನ್ನು ನಿಭಾಯಿಸಿ ವೃತ್ತಿ ನೈಪುಣ್ಯ ಸಾಧಿಸಬೇಕಾಗಿದ್ದು, ಅದಕ್ಕಾಗಿ ನಾವು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದು ಡಯಟ್‌ನ ಹಿರಿಯ ಉಪನ್ಯಾಸಕ ಎಂ.ಬಿ.ಅಂಬಿಗೇರ ಹೇಳಿದರು.

ನಗರದ ಮುನ್ಸಿಪಲ್‌ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಪ್ರೌಢಶಾಲಾ ಶಿಕ್ಷಕರಿಗೆ ಹಮ್ಮಿಕೊಂಡಿರುವ ಜೀವನ ಕೌಶಲ್ಯ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಚಿಂತನೆಗಳು ನಮ್ಮಲ್ಲಿ ಆತ್ಮ ವಿಶ್ವಾಸ ಬೆಳೆಸುವುದರ ಜತೆಗೆ ನಾಯಕತ್ವ ಗುಣ, ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಬೆಳವಣಿಗೆಯಾಗುತ್ತದೆ. ಶಿಕ್ಷಕರ ಮಾನಸಿಕ ಸ್ವಾಸ್ಥ್ಯ ಉತ್ತಮವಾದಷ್ಟು ದೈಹಿಕ ಸ್ವಾಸ್ಥ್ಯವೂ ಉತ್ತಮವಾದಾಗ ಅದು ವರ್ಗ ಕೋಣೆಯಲ್ಲಿ ಪ್ರತಿಫಲನಗೊಂಡು ಗುಣಮಟ್ಟದ ಶಿಕ್ಷಣ ಮತ್ತು ಗುಣಮಟ್ಟದ ವಿದ್ಯಾರ್ಥಿ ಹೊರಬರುತ್ತಾನೆ ಎಂದರು.

ಇಂದು ಸಮಾಜದಲ್ಲಿ ಅನೈತಿಕ ಚಟುವಟಿಕೆ ಹೆಚ್ಚಾಗುತ್ತಿದ್ದರೆ ಅದಕ್ಕೆ ಮುಖ್ಯ ಕಾರಣ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳ ಅಧಃಪತನ ಕಾರಣವಾಗಿದೆ. ಜೀವನ ಕೌಶಲ್ಯ ಶಿಕ್ಷಣದ ಮೂಲಕ ಮಕ್ಕಳಲ್ಲಿ ಕಠಿಣ ಪರಿಸ್ಥಿತಿಯಲ್ಲೂ ಸ್ಥಿತಪ್ರಜ್ಞರಂತೆ ಸ್ಪಂದಿಸುವ ಗುಣವನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರದ್ದು ಎಂದರು.

ಇದೇ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಹಲವಾರು ಸಂಚಾರಿ ನಿಯಮಗಳನ್ನು, ಕಾಯ್ದೆಗಳನ್ನು ಪ್ರಾತ್ಯಕ್ಷತೆ ಮೂಲಕ ತಿಳಿಸಿದರು. ವೇದಿಕೆಯಲ್ಲಿ ನೋಡಲ್‌ ಅಧಿಕಾರಿ ಎಂ.ಎಸ್‌. ಗುಂಡಪಲ್ಲಿ ಸೇರಿದಂತೆ ಸಂಪನ್ಮೂಲ ಶಿಕ್ಷಕರು ಮತ್ತಿತರರು ಇದ್ದರು.

ಬಸವರಾಜ ಸ್ವಾಗತಿಸಿದರು. ಶಿಕ್ಷಕಿ ಕಮಲಾ ನಾಯಕ ಕಾರ್ಯಕ್ರಮ ನಿರೂಪಿಸಿದರು. ಕುಮಾರಸ್ವಾಮಿ ವಂದಿಸಿದರು

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.