ಶಾಶ್ವತ ಪರಿಹಾರ ಸಿಗುವುದೇ?

ಅಧಿಕಾರಿಗಳ ಭೇಟಿಕರ್ನಾಟಕ ವಿದ್ಯುತ್‌ ನಿಗಮದಿಂದ 60 ಎಕರೆ ಜಮೀನು ಖರೀದಿಗೆ ನಿರ್ಧಾರ

Team Udayavani, Jan 2, 2020, 3:14 PM IST

2-January-17

ಯಾದಗಿರಿ: ರಾಯಚೂರಿನ ಶಕ್ತಿನಗರ ವಿದ್ಯುತ್‌ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಸಂಗ್ರಹಿಸುವ ಸೇತುವೆಯಿಂದ ಜಮೀನುಗಳಿಗೆ ಹಾನಿಯಾಗುತ್ತಿರುವುದನ್ನು ಮನಗಂಡ ಕರ್ನಾಟಕ ವಿದ್ಯುತ್‌ ನಿಗಮ ಜಿಲ್ಲೆಯ ವಡಗೇರಾ ತಾಲೂಕಿನ ಗುರ್ಜಾಪುರ-ಶಿವಪೂರ ಗ್ರಾಮಗಳ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಾಗಿದೆ.

ರೈತರಿಗೆ ಪದೇ ಪದೇ ಪರಿಹಾರ ನೀಡುವುದು ಅಸಾಧ್ಯ. ಹೀಗಾಗಿ ರೈತರ 60 ಎಕರೆ ಜಮೀನು ಖರೀದಿಸಲು ನಿರ್ಧರಿಸಿರುವುದಾಗಿ ಯಾದಗಿರಿ ಜಿಲ್ಲಾ ಧಿಕಾರಿಗಳಿಗೆ ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ಡಿ.23ರಂದು ಪತ್ರ ಬರೆದಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಯಾದಗಿರಿ ಸಹಾಯಕ ಆಯುಕ್ತ, ವಡಗೇರಾ ತಹಶೀಲ್ದಾರ್‌ ಹಾಗೂ ಆರ್‌ಟಿಪಿಎಸ್‌ ಅಧಿಕಾರಿಗಳು ಶಿವಪೂರ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ್ದಾರೆ.

ಸೇತುವೆ ಗೇಟ್‌ ತೆರೆದಿರುವುದರಿಂದ ನೀರು ಸಂಗ್ರಹಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಗೇಟ್‌ ಮುಚ್ಚಿ ನೀರು ಸಂಗ್ರಹಕ್ಕೆ ಅನುಕೂಲ ಮಾಡಿಕೊಡಬೇಕೆಂದು ರೈತರಲ್ಲಿ ಮನವಿ ಮಾಡಿದ್ದಾರೆ. ಪರಿಹಾರ ವಿತರಿಸುವ ಕುರಿತು ಶೀಘ್ರವೇ ನಿರ್ಧರಿಸುವುದಾಗಿ ತಿಳಿಸಿದ್ದಾರೆಂದು ಗ್ರಾಮಸ್ಥರು ತಿಳಿಸಿದ್ದಾರೆ.

ಶಾಖೋತ್ಪನ್ನ ಕೇಂದ್ರಕ್ಕಾಗಿ ನೀರು ಸಂಗ್ರಹಿಸುವ ಉದ್ದೇಶದಿಂದ ಕಳೆದ ಮೂರು ವರ್ಷದ ಹಿಂದೆ ಕೃಷ್ಣಾ ನದಿಗೆ ಗುರ್ಜಾಪುರದ 194 ಗೇಟ್‌ನ ಬೃಹತ್‌ ಸೇತುವೆ ನಿರ್ಮಿಸಿ ಬೇಸಿಗೆಯಲ್ಲಿ ನೀರು ಬಳಕೆಗೆ ಗೇಟ್‌ ಮುಚ್ಚಿ ನೀರು ಸಂಗ್ರಹಿಸಲಾಗುತ್ತಿದೆ. ಇದರಿಂದ ಗೋನಾಳ, ಶಿವಪೂರ ಗ್ರಾಮಗಳ 60 ಎಕರೆಯಷ್ಟು ಜಮೀನು ನಡುಗಡ್ಡೆಯಲ್ಲಿ
ಮುಳುಗಡೆಯಾಗಿ ರೈತರು ಬಿತ್ತಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಳೆಗೆ ಪರಿಹಾರ ನೀಡಿ ಅಥವಾ ಜಮೀನು ಖರೀದಿಸಿ ಹಣ ನೀಡುವಂತೆ ಆಗ್ರಹಿಸಿ ಶಿವಪೂರ ರೈತರು ಕಳೆದ ಡಿ.9ರಿಂದ ಏಳು ದಿನ ಅಹೋರಾತ್ರಿ ಹೋರಾಟ ನಡೆಸಿದ್ದರು. ಶಾಸಕ ವೆಂಕಟರೆಡ್ಡಿ ಮುದ್ನಾಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ 15 ದಿನಗಳಲ್ಲಿ ಸೂಕ್ತ ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌.
ಯಡಿಯೂರಪ್ಪ ಅವರಿಗೂ ಮನವಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.