ನಡೆಯದ ಕಾಮಗಾರಿ: ಗ್ರಾ.ಪಂ. ಅಧ್ಯಕ್ಷರು,ಅಧಿಕಾರಿಗಳ ವಿರುದ್ಧ ಅಸಮಾಧಾನ


Team Udayavani, Jan 3, 2020, 5:23 AM IST

31SS1GP-SAMANYA-SABHE

ಶನಿವಾರಸಂತೆ: ಸ್ಥಳೀಯ ಗ್ರಾ.ಪಂ.ಆಡಳಿತ ಮಂಡಳಿಯ ಸಾಮಾನ್ಯ ಸಭೆ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್‌ಗೌಸ್‌ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.

ಸಾಮಾನ್ಯ ಸಭೆಯಲ್ಲಿ ಬಹುತೇಕ ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಯಾವುದೆ ಕೆಲಸ ಕಾರ್ಯಗಳು ನಡೆಯದಿರುವ ಬಗ್ಗೆ ಅಧ್ಯಕ್ಷರು ಮತ್ತು ಗ್ರಾ.ಪಂ.ಅಧಿಕಾರಿಗಳ ಬಗ್ಗೆ ಅಸಮಾಧಾನ ಹೊರಹಾಕಿದರು.

ಪಟ್ಟಣದ ಗುಂಡೂರಾವ್‌ ಬಡಾವಣೆಯಲ್ಲಿ ಅಸಮರ್ಪಕ ಕಸವಿಲೆವಾರಿ, ರಸ್ತೆ-ಚರಂಡಿ ದುರಸ್ಥಿ ಪಡಿಸದಿರುವುದು, ಬೀದಿದೀಪ ಅಳವಡಿಸದಿರುವುದು ಸೇರಿದಂತೆ ಉದ್ಯೋಗ ಖಾತರಿ ಯೋಜನೆಯಿಂದ ಈ ವಾರ್ಡ್‌ನಲ್ಲಿ ಯಾವುದೆ ಕಾವåಗಾರಿ ಕಾರ್ಯ ನಡೆದಿಲ್ಲ ಎಂದು ಸದಸ್ಯ ಸರ್ದಾರ್‌ ಆಹಮ್ಮದ್‌ ಅಸಮಾಧಾನ ವ್ಯಕ್ತಪಡಿಸುತ್ತಾ ಪ್ರತಿಯೊಂದು ಸಾಮಾನ್ಯ ಮತ್ತು ವಿಶೇಷ ಸಭೆಗಳಲ್ಲಿ ಈ ಕುರಿತು ಪ್ರಸ್ತಾಪಿಸುತ್ತಿದ್ದರೂ ಯಾಕೆ ಏನೋ ಅಧ್ಯಕ್ಷರು ಮತ್ತು ಪಿಡಿಒಗಳು ಸ್ಪಂದಿಸುತ್ತಿಲ್ಲ ಗ್ರಾ.ಪಂ.ಆಡಳಿತ ಅವಧಿ ಮುಗಿಯುತ್ತಿದ್ದರೂ ಗುಂಡುರಾವ್‌ ಬಡಾವಣೆ ಅಭಿವೃದ್ದಿಯಾಗುತ್ತಿಲ್ಲ ಇದರಿಂದ ವಾರ್ಡ್‌ ವ್ಯಾಪ್ತಿಯ ಜನರಿಗೆ ಮುಖ ತೋರಿಸಲಾಗುತ್ತಿಲ್ಲ ಎಂದು ಅಧ್ಯಕ್ಷ ಮತ್ತು ಗ್ರಾ.ಪಂ.ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಇದಕ್ಕೆ ಧ್ವನಿಗೂಡಿಸಿದ ಸದಸ್ಯರಾದ ಎಸ್‌.ಎನ್‌.ಪಾಂಡು, ಎನ್‌.ಕೆ.ಆದಿತ್ಯ, ಉಷಾ ಜಯೇಶ್‌ ಅವರುಗಳು ಪಟ್ಟಣದ ಸಂತೆ ಮಾರುಕಟ್ಟೆಯನ್ನು ಸಹ ಅಭಿವೃದ್ದಿ ಪಡಿಸಿಲ್ಲ ಎಂದು ಆರೋಪಿಸಿದರು.

ಪಕ್ಕದ ಆದಾಯ ಇಲ್ಲದ ಗ್ರಾ.ಪಂ.ಗಳು ಅಭಿವೃದ್ದಿಯಾಗುತ್ತಿದ್ದು ನಮ್ಮ ಗ್ರಾ.ಪಂ.ಗೆ ಆದಾಯ ಇದ್ದರೂ ಸಹ ಇಚ್ಚಾಸಕ್ತಿಯ ಕೊರತೆಯಿಂದ ಪಟ್ಟಣವನ್ನು ಅಭಿವೃದ್ದಿ ಪಡಿಸುತ್ತಿಲ್ಲ ಎಂದು ಸರ್ದಾರ್‌ ಆಹಮದ್‌, ಎಚ್‌.ಆರ್‌.ಹರೀಶ್‌ ಆರೋಪಿಸಿದರು. ಸರಕಾರದಿಂದ ನಮ್ಮ ಗ್ರಾ.ಪಂ.ಗೆ ಇಲ್ಲಿಯ ವರೆಗೆ ಬಡವರಿಗಾಗಿ ಯಾವುದೆ ಯೋಜನೆ ವತಿಯಿಂದ ವಸತಿ ಸೌಲಭ್ಯ ಬಂದಿಲ್ಲ ಎಂದು ಸದಸ್ಯೆ ಹೇಮಾವತಿ ದೂರಿದರು. ಸಾಮಾನ್ಯ ಸಭೆಯಲ್ಲಿ ಬಹಳಷ್ಟು ಸಮಸ್ಯೆಗಳು ಸದಸ್ಯರುಗಳ ದೂರುಗಳಾಗಿದ್ದವು.

ಸಭೆಯಲ್ಲಿ ಪಟ್ಟಣದ 1ನೇ ವಿಭಾಗ ಮತ್ತು ಸಂತೆ ಮಾರುಕಟ್ಟೆ ವಿಭಾಗಗಳಲ್ಲಿ ಕಸವಿಲೇವಾರಿ ಸ್ಥಳ ಪರಿಶೀಲನೆಗಾಗಿ ತಕ್ಷಣದಿಂದ ಸಿಸಿ ಟಿವಿ ಅಳವಡಿಸುವಂತೆ ನಿರ್ಣಯಿಸಲಾಯಿತು. ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸವಿಲೆವಾರಿಗಾಗಿ ಸರಕಾರ ಜಾಗ ಗೊತ್ತು ಮಾಡಿದ ಸ್ಥಳದಲ್ಲಿ ಕಸವಿಲೇವಾರಿ ಮಾಡುವಂತೆ ಮತ್ತು ಈ ಹಿಂದೆ ದುಂಡಳ್ಳಿ ಗ್ರಾ.ಪಂ.ಯಲ್ಲಿ ನಡೆದ ಸಮನ್ವಯ ಸಭೆಯಲ್ಲಿ ದುಂಡಳ್ಳಿ ಗ್ರಾ.ಪಂ.ಯವರು ಕಸವಿಲೇವಾರಿಗಾಗಿ ಅಡ್ಡಿಪಡಿಸುವುದಿಲ್ಲ ಎಂದು ಭರವಸೆ ನೀಡಿದ್ದರು ಅದರಂತೆ ನಮ್ಮ ಗ್ರಾ.ಪಂ.ಯಿಂದ ಕಾರ್ಮಿಕರು ಕಸವಿಲೇವಾರಿ ಮಾಡಲು ಹೋಗುವ ಸಂದರ್ಭದಲ್ಲಿನ ಅಲ್ಲಿನ ಕೆಲವರು ಅಡ್ಡಿಪಡಿಸುತ್ತರಿರುವ ಕುರಿತು ಚರ್ಚೆ ನಡೆಸಲಾಯಿತು.

ಮುಂದಿನ ದಿನಗಳಲ್ಲಿ ಈ ಕುರಿತು ಕಾನೂನು ಪ್ರಕಾರದಂತೆ ಅಲ್ಲಿ ಕಸವಿಲೆವಾರಿ ಮಾಡುವಂತೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾರ್ಮಿಕರು ಕಸ ಸ್ವಚ್ಚಗೊಳಿಸುವ ದಿನಗಳನ್ನು ಹಂಚಿಕೆ ಮಾಡಲಾಯಿತು. ಸಮಪರ್ಕವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ನೀರುಗಂಟಿಗಳಿಗೆ ಸೂಚನೆ ನೀಡಲಾಯಿತು. ಗ್ರಾ.ಪಂ.ಉಪಾಧ್ಯಕ್ಷೆ ಗೀತಹರೀಶ್‌, ಸದಸ್ಯರುಗಳಾದ ಸರ್ದಾರ್‌ ಆಹಮ್ಮದ್‌, ಎಚ್‌.ಆರ್‌.ಹರೀಶ್‌, ಎಸ್‌.ಎನ್‌.ಪಾಂಡು, ಹೇಮಾವತಿ, ಉಷಾ ಜಯೇಶ್‌, ಎನ್‌.ಎ.ಆದಿತ್ಯ, ರಜನಿರಾಜು, ಪಿಡಿಒ ಮೇದಪ್ಪ, ಕಾರ್ಯದರ್ಶಿ ತಮ್ಮಯ್ಯ ಆಚಾರ್‌, ಲೆಕ್ಕಾಧಿಕಾರಿ ವಸಂತ್‌, ಪೌಜಿಯಾ ಬಾನುಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.