ಯುವ ಮತದಾರರ ನೋಂದಣಿ ಮಾಡಿಸಿ
Team Udayavani, Jan 3, 2020, 12:04 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಅರ್ಹ ಯುವ ಮತದಾರರನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸುವ ಉದ್ದೇಶದಿಂದ ಜನವರಿ 6, 7 ಮತ್ತು 8 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಜಿಲ್ಲಾದ್ಯಂತ ಆಯೋಜಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರತಿ, ಜಿಲ್ಲೆಯ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಮಿಂಚಿನ ನೋಂದಣಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಮಿಂಚಿನ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಪ್ರಚಾರ ನಡೆಸಿ: ಮಿಂಚಿನ ನೋಂದಣಿ ಅಭಿ ಯಾನಕ್ಕೆ ಅಗತ್ಯ ಇರುವ ಎಲ್ಲಾ ನಮೂನೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸರಬರಾಜು ಮಾಡಲಾಗುವುದು. ಆಯಾ ತಹಶೀಲ್ದಾರರು ಪೂರ್ವಭಾವಿಯಾಗಿ ತಾಲೂಕಿನಲ್ಲಿ ವ್ಯಾಪಕ ಪ್ರಚಾರ ನಡೆಸಬೇಕೆಂದ ತಿಳಿಸಿದರು.
ಕಾಲೇಜುಗಳಿಗೆ ಗುರಿ ನಿಗದಿ: ಜಿಲ್ಲಾ ಸ್ವೀಪ್ ಸಮಿತಿಯು ಮಿಂಚಿನ ನೋಂದಣಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ತಯಾರಿಸಿರುವ ಕ್ರಿಯಾ ಯೋಜನೆಯನ್ನು ಸಲ್ಲಿಸಿರುವಂತೆ ಕಾರ್ಯ ಕ್ರಮವನ್ನು ಅನುಷ್ಠಾನಗೊಳಿಸಬೇಕು. ಜ.1, 2020 ಕ್ಕೆ 18 ವರ್ಷ ತುಂಬಿದ ವಿದ್ಯಾರ್ಥಿಗಳು ನೋಂದಣಿ ಮಾಡಿಸಲು ಕಾಲೇಜುಗಳಿಗೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದರು.
ಇ-ಮೇಲ್ ಮುಖಾಂತರ ಸಲ್ಲಿಸಬೇಕು: ಪ್ರತಿ ದಿನ ನೋಂದಣಿ ಅಭಿಯಾನದ ಪ್ರಗತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡಬೇಕು. ನೋಂದಣಿ ಅಂಕಿ ಅಂಶಗಳನ್ನು ಕಚೇರಿಯಿಂದ ನೀಡಲಾಗಿರುವ ನಮೂನೆಯಲ್ಲಿ ಭರ್ತಿ ಮಾಡಿ, ಸಹಿ ಮಾಡಿದ ಪ್ರತಿಯನ್ನು ಈ ಕಚೇರಿಗೆ ಇ-ಮೇಲ್ ಮುಖಾಂತರ ಸಲ್ಲಿಸಬೇಕು.
ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣ ಮಾಡಿಸಿ ಸಂಬಂಧಪಟ್ಟ ಮಾಹಿತಿಯನ್ನು ಕ್ರೋಢಿಕರಿಸಿ ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕು. ವಿಶೇಷವಾಗಿ ರೈಲ್ವೆ ನಿಲ್ದಾಣ, ಬಸ್ ತಂಗುದಾಣಗಳಲ್ಲಿ ಮತದಾರರ ನೋಂದಣಿ ಬಗ್ಗೆ ಆಡಿಯೋ ಕ್ಲಿಪ್‌ಗ್ಳನ್ನು ಅಳವಡಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ಯಾಂಪಸ್ ಅಂಬಾಸಿಡರ್ ಮತ್ತು ಇಲ್‌ಸಿಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಜ.6 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ನಗರಸಭೆಯ ಆಯುಕ್ತ ಎಂ.ಲೋಹಿತ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್ ಸೇರಿದಂತೆಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.