ಸರ್ಕಾರಿ ಔಷಧ ವಿತರಕರ ಪ್ರತಿಭಟನೆ


Team Udayavani, Jan 3, 2020, 5:46 PM IST

uk-tdy-1

ಶಿರಸಿ: ರಾಜ್ಯ ಸರ್ಕಾರಿ ಫಾರ್ಮಸಿಸ್ಟ್‌ ಸಂಘವು ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ರಾಜ್ಯಾದ್ಯಂತ ಜ.2ರಿಂದ 5 ಹಂತಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಶಿರಸಿಲಿ ಕೂಡ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಔಷಧ ಉಗ್ರಾಣದಿಂದ ಕಾಲ್ನಡಿಗೆ ಮೂಲಕ ಆಗಮಿಸಿ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ, ಅಖೀಲ ಭಾರತೀಯ ತಾಂತ್ರಿಕ ಪರಿಷತ್ತಿನಿಂದ 1987 ರಲ್ಲಿ ಫಾರ್ಮಸಿಯನ್ನು ತಾಂತ್ರಿಕ ವಿದ್ಯಾರ್ಹತೆಯೆಂದು ಪರಿಗಣಿಸಿ ಆದೇಶಿಸಿರುವುದರಿಂದ ಡಿಪ್ಲೋಮಾ ವೇತನ ಭತ್ಯೆ ನೀಡುವುದು, ಕೇಂದ್ರ ಹಾಗೂ ನೆರೆ ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ಗಳಿಗಿಂತ ಕಡಿಮೆ ವೇತನ ಹಾಗೂ ಭತ್ಯೆಯನ್ನು 1982 ರಿಂದ ಪಡೆಯುತ್ತಲಿದ್ದು ಈ ಅನ್ಯಾಯವನ್ನು ಸರಿಪಡಿಸುವುದು, ಸೇವಾ ಅವಧಿಯಲ್ಲಿ ಒಮ್ಮೆ ಮಾತ್ರ 10 ವರ್ಷಗಳ ಕಾಲಮಿತಿ ವೇತನ ಮುಂಬಡ್ತಿ ಪಡೆದ ನಂತರ ಯಾವುದೇ ವೇತನ ಶ್ರೇಣಿ ಬದಲಾವಣೆ ಆಗದೆ ಇರುವುದರಿಂದ ಕರ್ನಾಟಕ ಆಡಳಿತ ನ್ಯಾಯಮಂಡಳಿ ತೀರ್ಪಿನಂತೆ ವೇತನ ಜಾರಿ ಮಾಡುವುದು, ಜನಸಂಖ್ಯೆ ಆಧಾರದ ಮೇಲೆ ಹಾಗೂ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯದ ಮೇರೆಗೆ ಹೆಚ್ಚಿನ ಹುದ್ದೆ ಸೃಜಿಸುವುದು, 1965 ರ ವೃಂದ ಮತ್ತು ನೇಮಕಾತಿಯನ್ನು ಈಗೀರುವ ವಿದ್ಯಾರ್ಹತೆಗೆ ಅನುಗುಣವಾಗಿ ಬದಲಾಯಿಸಿ ಬಡ್ತಿ ಅವಕಾಶ ಹೆಚ್ಚಿಸುವುದು, ಸೇವಾ ನಿರತ ಫಾರ್ಮಸಿಸ್ಟ್‌ಗಳಿಗೆ ಉನ್ನತ ವ್ಯಾಸಂಗಕ್ಕೆ ಸೀಟು ಕಾಯ್ದಿರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು, ಕಾಲಕಾಲಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗುವ ಹೊಸ ಔಷಧಿಗಳ ಕುರಿತು ತಿಳಿದುಕೊಳ್ಳಲು ಪುನರ್‌ ಮನನ ಕಾರ್ಯಕ್ರಮಗಳನ್ನು ಪ್ರಾರಂಭಿಸುವುದು ಎಂದು ಮನವಿ ಮಾಡಲಾಯಿತು.

ಔಷಧಿಗಳ ಸಾಮರ್ಥ್ಯ ಕಾಪಾಡಿಕೊಳ್ಳಲು ಎಲ್ಲಾ ಆಸ್ಪತ್ರೆಗಳಲ್ಲಿಯೂ ವೈಜ್ಞಾನಿಕವಾಗಿ ಔಷಧಿ ಉಗ್ರಾಣ ಅಭಿವೃದ್ಧಿಪಡಿಸುವುದು, ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಔಷಧಿಗಳ ಮಾಹಿತಿ ಕೇಂದ್ರ ಮತ್ತು ಸಮಾಲೋಚನಾ ಕೇಂದ್ರಗಳನ್ನು ಪ್ರಾರಂಭಿಸುವುದು, ಪದವಿಧರ ಫಾರ್ಮಸಿಸ್ಟ್‌ ಹುದ್ದೆಗೆ ಔಷಧ ನಿಯಂತ್ರಣ ಇಲಾಖೆಯಿಂದ ಅನ್ಯಪರ ಸೇವೆಯ ಮೇರೆಗೆ ನಿಯೋಜಿಸುತ್ತಿರುವ ಕಿರಿಯ ವೈಜ್ಞಾನಿಕ ಅಧಿಕಾರಿಗಳ ನೇಮಕ ನಿಲ್ಲಿಸಿ ಇಲಾಖೆಯಲ್ಲಿ ಪದವಿ ಪಡೆದ ಹಿರಿಯ ಫಾರ್ಮಸಿಸ್ಟ್‌ರಿಗೆ ಪದೋನ್ನತಿ ನೀಡುವುದು, ಫಾರ್ಮಸಿ ಕಾಯ್ದೆಯಂತೆ ಫಾರ್ಮಸಿಸ್ಟ್‌ರಲ್ಲದವರು ಔಷಧಿಗಳನ್ನು ವಿತರಿಸಲು ಅವಕಾಶ ಇಲ್ಲದೇ ಇರುವುದರಿಂದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನನ್ನು ಭರ್ತಿ ಮಾಡುವುದು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಫಾರ್ಮಕೋ ವಿಜಿಲೆನ್ಸ್‌ ಪ್ರಾರಂಭಿಸುವುದು, ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ರಿಗೆ ಕನಿಷ್ಠ ಮೂಲ ವೇತನ ನೀಡುವುದು ಮತ್ತು ಖಾಯಂ ಮಾಡುವುದು, ಆಹಾರ ಸುರಕ್ಷತಾ ಇಲಾಖೆಯಲ್ಲಿ ಬೇರೆ ರಾಜ್ಯಗಳಲ್ಲಿರುವಂತೆ ಫಾರ್ಮಸಿಸ್ಟ್‌ಗಳನ್ನು ನೇಮಕಾತಿ ಮಾಡುವುದು. ಮುಂತಾದ ಬೇಡಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಎಸ್‌.ವಿ. ಭಟ್‌, ಪ್ರಧಾನ ಕಾರ್ಯದರ್ಶಿ ಅಮಿತ ಆಮಠೆ, ಕೋಶಾಧ್ಯಕ್ಷ ಶೈಲೇಶ ಹೆಗಡೆ ಹಾಗೂ ಸಂಘದ ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿಮನವಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.