ಕಾಶ್ಮೀರದಲ್ಲಿ ಶಿಕ್ಷಣ,ಉದ್ಯೋಗ,ಜಮೀನು ಖರೀದಿಗೆ 15 ವರ್ಷ ವಾಸ್ತವ್ಯ ಪ್ರಮಾಣ ಕಡ್ಡಾಯ ಸಂಭವ
Team Udayavani, Jan 3, 2020, 9:30 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ, ಉದ್ಯೋಗ ಪಡೆಯಲು 15 ವರ್ಷ ಕಡ್ಡಾಯವಾಗಿ ಅಲ್ಲಿ ನೆಲೆಸಿರಬೇಕು ಎಂಬ ನಿಯಮ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಮೂಲಕ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಸ್ಥಳೀಯರ ಬದಲಾಗಿ ಹೊರಗಿನವರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡಲಾಗುತ್ತಿದೆ ಎಂಬ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದೆ ಗೃಹ ಸಚಿವಾಲಯ.
ಇದರಿಂದಾಗಿ ಜಮೀನು ಖರೀದಿ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಉದ್ಯೋಗಕ್ಕೆ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿದಂತಾಗುತ್ತದೆ. ಈಶಾನ್ಯ ರಾಜ್ಯ ನಾಗಾಲ್ಯಾಂಡ್ನಲ್ಲಿ ಈ ಅಂಶವನ್ನು ಪೂರೈಸಲು ಸಂವಿಧಾನದ 371ನೇ ವಿಧಿಯನ್ನು ಬಳಕೆ ಮಾಡಲಾಗುತ್ತಿದೆ. ಜತೆಗೆ ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ನಲ್ಲಿರುವಂಥ ನಿಯಮ ಜಾರಿಗೆ ತರುವ ಬಗ್ಗೆಯೂ ಗೃಹ ಇಲಾಖೆ ಯೋಚಿಸುತ್ತಿದೆ.
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಕೋರ್ಟ್ಗಳಲ್ಲಿ ಪತ್ರಾಂಕಿತೇತರ (ನಾನ್-ಗೆಝೆಟೆಡ್ ಪೋಸ್ಟ್) ಹುದ್ದೆಗಳಿಗೆ ಹೊರಗಿನವರೂ ಅರ್ಜಿ ಹಾಕಬಹುದು ಎಂದು ಜಾಹೀರಾತು ಪ್ರಕಟಿಸಲಾಗಿತ್ತು. ಪ್ರತಿರೋಧದ ಬಳಿಕ ಅದನ್ನು ಹಿಂಪಡೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.