ಕಿರುಕುಳ: ಶಾಲಾ ವಿದ್ಯಾರ್ಥಿ ಆತ್ಮಹತ್ಯೆ ಯತ್ನ


Team Udayavani, Jan 4, 2020, 3:00 AM IST

kirikula

ಎಚ್‌.ಡಿ.ಕೋಟೆ: ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಬಗ್ಗೆ ಧ್ವನಿಎತ್ತಿದ ನಮ್ಮ ವಿರುದ್ಧ ವಸತಿ ಶಾಲೆಯ ಪ್ರಾಚಾರ್ಯರು ಸೇರಿದಂತೆ ಆಡಳಿತ ಮಂಡಳಿ ವಿನಾಃ ಕಾರಣ ದೂಷಣೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 10ನೇ ತರಗತಿ ವಿದ್ಯಾರ್ಥಿ ಶಾಲೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ತಾಲೂಕಿನ ಕೆ.ಬೆಳತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಿದ್ದಪ್ಪಾಜಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ. ಸಹ ವಿದ್ಯಾರ್ಥಿಗಳು ಅವನ ಮನವೊಲಿಸಿ ಕರೆತಂದಿದ್ದಾರೆ.

ನಡೆದಿದ್ದು ಇಷ್ಟು: ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಿನಚರಿಯಂತೆ ಊಟ ತಿಂಡಿ ನೀಡುತ್ತಿಲ್ಲ, ವಾರದಲ್ಲಿ 2ಭಾರಿ ನೀಡಬೇಕಾದ ಮೊಟ್ಟೆ ತಿಂಗಳಿಗೊಮ್ಮೆ ನೀಡುತ್ತಾರೆ. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬದಲಾಗಿ ಬಾಳೆಹಣ್ಣು ನೀಡುತ್ತಿಲ್ಲ, ಕಳೆದ ಒಂದುವರೆ ತಿಂಗಳಿಂದ ರಾತ್ರಿ ಮುದ್ದೆ ರದ್ದು ಪಡಿಸಿದ್ದಾರೆ.

ಶುಚಿತ್ವ ಇಲ್ಲ, ಶಾಲೆಯಲ್ಲಿ ಪ್ರಾಚಾರ್ಯರಾದ ಶ್ರೀದೇವಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದಲೇ ಕೆಲಸ ಕಾರ್ಯ ಮಾಡಿಸುತ್ತಾರೆ. ಶಾಲೆಗೆ ಸುಮಾರು 40ರಿಂದ 50ವಿದ್ಯಾರ್ಥಿಗಳು ಗೈರಾಗುತ್ತಿದ್ದು, ಬಯೋಮೆಟ್ರಿಕ್‌ ಅವ್ಯವಸ್ತೆಯಿಂದ ಆಹಾರ ದುರುಪಯೋಗ ಪಡಿಸಿಕೊಳ್ಳುತ್ತಿದಾರೆ. ಊಟ ತಿಂಡಿ ಶುಚಿ ರುಚಿ ಇಲ್ಲ. ವಿದ್ಯಾರ್ಥಿಗಳು ನಿಯಮಾವಳಿಯಂತೆ ಆಹಾರ ನೀಡಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳನ್ನು ಟಾರ್ಗೆಟ್‌ ಮಾಡಿ ಹಿಂಸಿಸುತ್ತಾರೆ.

ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಡುವೆ ಸಂಬಂಧಕಲ್ಪಿಸಿ ಅಸಭ್ಯವಾಗಿ ಮಾನಾಡುತ್ತಾರೆ ಎಂದು ಪ್ರಾಚಾರ್ಯರನ್ನು ವರ್ಗಾಯಿಸುವವರೆಗೆ ಶಾಲೆಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿ ಮಧ್ಯಾಹ್ನದ ತನಕ ಶಾಲೆಗೆ ತೆರಳಲಿಲ್ಲ. ಬಳಿಕ ಮಧ್ಯಾಹ್ನ ವೇಳೆಗೆ ವಿಷಯ ತಿಳಿದು ಮಾಹಿತಿ ಪಡೆದುಕೊಂಡ ಮಾಧ್ಯಮ ಪ್ರತಿನಿಧಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಸ್ಥಳಕ್ಕೆ ಭೇಟಿ ಮಾಡಿಸುವ ಭರವಸೆ ನೀಡಿದಾಗ ವಿದ್ಯಾರ್ಥಿಗಳು ತರಗತಿ ಹಾಜರಾಗಿದ್ದರು.

ಹೊಂದಾಣಿಕೆ ಕೊರತೆ: ಮೊರಾರ್ಜಿ ವಸತಿ ಶಾಲೆಯ ಪ್ರಚಾರ್ಯರು ಸೇರಿದಂತೆ ಶಿಕ್ಷಕರು ಮತ್ತು ಇರುವ ಸಿಬ್ಬಂ ಗಳ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ ಕೊರತೆಯಿದ್ದು, ಆರೋಪ ಪ್ರತ್ಯಾರೋಪಗಳಲ್ಲಿ ವೈಷಮ್ಯದ ದಿನಗಳು ಉರುಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಾಮರಸ್ಯ ಮೂಡಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ.

ವಿದ್ಯಾರ್ಥಿಗಳಲ್ಲಿ ಕಜ್ಜಿ ಸೋಂಕು: ವಸತಿ ಶಾಲೆಯ ಆಶುಚಿತ್ವದ ಕಾರಣದಿಂದ ಶಾಲೆಯ ಬಹುಸಂಖ್ಯೆ ವಿದ್ಯಾರ್ಥಿಗಳ ದೇಹದಲ್ಲಿ ಕಜ್ಜಿ ಕಂಡು ಬಂದಿದೆ. ಇದು ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಸಾಧ್ಯತೆ ಇದೆ. ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಚಿಕಿತ್ಸೆ ನೀಡಬೇಕಿದೆ.

ಸುಳ್ಳು ಆರೋಪ: ವಿದ್ಯಾರ್ಥಿಗಳು ಮನಬಂದಂತೆ ಸುತ್ತಾಡುತ್ತಾರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಶಾಲೆಯಿಂದ ಹೊರಹೋಗದಂತೆ ವಿದ್ಯಾರ್ಥಿಗಳಿಗೆ ನಿಬಂಧನೆ ಏರಿದ್ದಕ್ಕೆ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೊರಾರ್ಜಿ ಶಾಲೆಯ ಪ್ರಾಚಾರ್ಯೆ ಶ್ರೀದೇವಿ ತಿಳಿಸಿದರು. ಊಟ ತಿಂಡಿಯಲ್ಲಿ ನಿಯಮದಂತೆ ಪಾಲನೆಯಾಗುತ್ತಿದೆ ಎಂದು ಅವರು ಪ್ರತಿಕ್ರಿಯಿಸುತ್ತಿದ್ದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಾಚಾರ್ಯರ ಸಮ್ಮುಖದಲ್ಲಿಯೇ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರಾಚಾರ್ಯರ ಹೇಳಿಕೆ ಶುದ್ಧ ಶುಳ್ಳು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.