ಸಾರಿಗೆ ಸಂಸ್ಥೆ ಬಸ್ ಕಾರಿಗೆ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ
Team Udayavani, Jan 4, 2020, 3:03 AM IST
ಮುಧೋಳ: ಹೊಸ ವರ್ಷದ ಮೂರನೇ ದಿನವಾದ ಶುಕ್ರವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆಯ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಶಿರೋಳ ಬಳಿ ಸಂಭವಿಸಿದೆ. ಮೃತರನ್ನು ಜಮಖಂಡಿ ತಾಲೂಕಿನ ಗೋಠೆ ಗ್ರಾಮದ ಸಿದ್ದರಾಯ ತೇಲಿ (36), ಬಾಲಪ್ಪ ಸೆಂಡಗಿ (33), ರಿಯಾಜ್ ಜಾಲಗೇರಿ (25) ಹಾಗೂ ಹನಮಂತ ಗನಗಾರ (21) ಎಂದು ಗುರುತಿಸಲಾಗಿದೆ.
ಧಾರವಾಡದ ಹೈಕೋರ್ಟ್‌ನಲ್ಲಿ ಭೂವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಹಾಜರಾಗಲು ಗೋಠೆ ಗ್ರಾಮದಿಂದ ಕಾರಿನಲ್ಲಿ ಹೊರಟಿದ್ದ ನಾಲ್ವರು, ಶಿರೋಳ ಬಳಿ ಎದುರಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮಾರುತಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಳಗಾವಿಯಿಂದ ಕಲಬುರಗಿಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್, ಕಬ್ಬಿನ ಟ್ಯಾಕ್ಟರ್ ಹಿಂದಿಕ್ಕಿ ಸಾಗುವ ಭರದಲ್ಲಿ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಡಿವೈಎಸ್ಪಿ ಆರ್.ಕೆ.ಪಾಟೀಲ, ಮುಧೋಳ ಸಿಪಿಐ ಎಚ್.ಆರ್. ಪಾಟೀಲ, ಪಿಎಸ್‌ಐ ಎಸ್.ಎಸ್.ಘಾಟಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನದಿಯಲ್ಲಿ ಮುಳುಗಿ ನಾಲ್ವರು ಸಾವು
ರಾಯಚೂರು: ಆಂಧ್ರಪ್ರದೇಶದ ಕಡಪ ಜಿಲ್ಲೆ ಸಿದ್ಧಪಟ್ಟಣಂ ಹತ್ತಿರದ ಪೆನ್ನಾ ನದಿಯಲ್ಲಿ ಮುಳುಗಿ ನಗರದ ಮೂವರು ಬಾಲಕಿಯರು ಹಾಗೂ ಅವರ ಸಂಬಂಧಿ ಮೃತಪಟ್ಟಿದ್ದಾರೆ. ನಗರದ ಮೆಥೋಡಿಸ್ಟ್ ಚರ್ಚ್ ಸಮೀಪದ ನಿವಾಸಿ ಗೌಸ್ ಪಾಷಾ ಅವರ ಮಕ್ಕಳಾದ ಮೆದಿಹಾ (12), ಫರಿಯಾ (10), ಲೋಹಾ (10) ಸಂಬಂಧಿ ಅನ್ವರ್ (35) ಸಾವನ್ನಪ್ಪಿದವರು.
ಇವರೆಲ್ಲಾ ಸಂಬಂಧಿಕರ ಮನೆಗೆ ತೆರಳಿದ್ದು, ನದಿಯಲ್ಲಿ ಈಜಾಡಲು ಹೋಗಿದ್ದಾಗ ಮುಳುಗುತ್ತಿದ್ದರು. ಈ ವೇಳೆ ರಕ್ಷಿಸಲು ಹೋದ ಸಂಬಂಧಿ ಅನ್ವರ್ (35) ಕೂಡ ದುರ್ಮರಣಕ್ಕೀಡಾಗಿದ್ದಾರೆ. ಬಾಲಕಿಯರ ಮೃತದೇಹಗಳನ್ನು ನಗರಕ್ಕೆ ತಂದಿದ್ದು, ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.