ಮೋದಿ, ಭಾರತದ ಪ್ರಧಾನಿಯೋ? ಪಾಕ್ ಪ್ರಧಾನಿಯೋ?
Team Udayavani, Jan 4, 2020, 3:06 AM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಪದೇ, ಪದೇ ಪಾಕಿಸ್ತಾನದ ಜಪ ಮಾಡುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೋದಿ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ.
* ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ಓಟು ಕೊಟ್ಟರೋ ಅಥವಾ ಭಾರತದ ಪ್ರಜೆಗಳು ಓಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಅಥವಾ ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ?
* ಭಾರತೀಯವರ ಓಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ, ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ? ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ, ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ?
* 25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ರೂ.ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು. ನರೇಗಾ ಬಾಕಿ ಕೊಟ್ಟಿಲ್ಲ. ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ. ಬರ ಪರಿಹಾರವಿಲ್ಲ. ಇವುಗಳ ಬಗ್ಗೆ ಮಾತನಾಡಲಾಗದ ನೀವು, ಮಾತನಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ, ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ.
* ಕೇಂದ್ರ ಕಟ್ಟಿಸಿಕೊಳ್ಳುವ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ರಾಜ್ಯದ ಮುಖ್ಯಮಂತ್ರಿಯಾದ ಯಡಿಯೂರಪ್ಪನವರು, ಪಾಕಿಸ್ತಾವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ?
* ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ?. ಇಲ್ಲ…ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.