ಸಂಪಾಜೆ: ಐದು ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶ
Team Udayavani, Jan 4, 2020, 8:38 AM IST
ಗುತ್ತಿಗಾರು: ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು ಸಂಪಾಜೆ ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನು ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ.
ಈ ವೇಳೆ ಆರೋಪಿ ಅಬ್ದುಲ್ ಕುಂಙಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಾಗಿ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಂಪಾಜೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿತೀಶ್ ನೇತೃತ್ವದ ತಂಡ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.