ಉದ್ಯೋಗ ಮೇಳಾಮೇಳಿಗೆ ವೇದಿಕೆ ಸಿದ್ಧತೆ

Team Udayavani, Jan 4, 2020, 10:55 AM IST

huballi-tdy-1

ಹುಬ್ಬಳ್ಳಿ: ಬೃಹತ್‌ ಉದ್ಯೋಗ ಮೇಳ ಉದ್ಯೋಗದಾತರ ಹಾಗೂ ಉದ್ಯೋಗ ಹುಡುಕಾಟದಲ್ಲಿರುವವರ ನಡುವೆ ಕೊಂಡಿಯಾಗಿ ರೂಪುಗೊಳ್ಳಬೇಕು. ಈ ನಿಟ್ಟಿನಲ್ಲಿ ಉದ್ಯೋಗದಾತರು ಕೌಶಲಾಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ನಲ್ಲಿ ತಮ್ಮ ಸಂಸ್ಥೆಯ ಕುರಿತು ಮಾಹಿತಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಧಾರವಾಡದಲ್ಲಿ ನಡೆಯಲಿರುವ ಅಖಂಡ ಧಾರವಾಡ ಜಿಲ್ಲೆಯ ಬೃಹತ್‌ ಉದ್ಯೋಗ ಮೇಳದ ಪ್ರಯುಕ್ತ ಶುಕ್ರವಾರ ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಭಾಗದ ಕೈಗಾರಿಕೆಗಳಿಗೆ ಕೌಶಲಭರಿತ ಅಭ್ಯರ್ಥಿಗಳ ಬೇಡಿಕೆ ಇದೆ. ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ಕಂಪೆನಿಗಳಿವೆ. ತಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕಾಗಿ ಅಭ್ಯರ್ಥಿಗಳು ಓಡಾಡುತ್ತಿದ್ದಾರೆ. ಇವರಿಬ್ಬರ ನಡುವೆ ಕೊಂಡಿಯಾಗಿ ಇಬ್ಬರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗದಾತರು ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ಕುರಿತು ಇಲಾಖೆಯ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕಿ ಸಾಧನಾ ಪೋಟೆ ಮಾತನಾಡಿ, ಕೆಲವೊಂದು ಕಂಪೆನಿಗಳು ಉದ್ಯೋಗ ಮೇಳದಲ್ಲಿ ಕೇವಲ ಪಾಲ್ಗೊಳ್ಳಲು ಮಾತ್ರ ಆಗಮಿಸುತ್ತವೆ. ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡುವುದಿಲ್ಲ. ಕಾಟಾಚಾರದ ಮೇಳ ಆಗಬಾರದು ಎನ್ನುವ ಕಾರಣಕ್ಕೆ ಮುಕ್ತಾಯದ ನಂತರ ಎಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾಗಿದೆ ಎನ್ನುವ ಮಾಹಿತಿ ನೀಡಬೇಕು. ಈ ಭಾಗದ ಕೈಗಾರಿಕೆಗಳಿಗೆ ಉದ್ಯೋಗಿಗಳನ್ನು ನೀಡುವುದು ಮೊದಲ ಆದ್ಯತೆಯಾಗಿದೆ. ಉದ್ಯೋಗದಾತರು ಅಭ್ಯರ್ಥಿಗಳಿಗೆ ತರಬೇತಿ ನೀಡಿ ನಂತರ ಉದ್ಯೋಗ ಕೊಡಬಹುದು ಎಂದು ತಿಳಿಸಿದರು.

ರಿಯಾಜ್‌ ಬಸರಿ ಮಾತನಾಡಿ, ಉದ್ಯೋಗ ಮೇಳಕ್ಕೆ ಬರುವ ವಿದ್ಯಾರ್ಥಿಗಳಿಗೆ ಗೊಂದಲ ಸೃಷ್ಟಿಸುವಂತಿರಬಾರದು. ತನ್ನ ಶಿಕ್ಷಣ,ವೇತನ ಅಪೇಕ್ಷೆ, ಹುದ್ದೆಗಳು, ಕಂಪೆನಿ ಸೇರಿದಂತೆ ವಿವಿಧ  ಮಾಹಿತಿ ಪ್ರತಿಯೊಬ್ಬ ಅಭ್ಯರ್ಥಿಗೆ ದೊರೆಯುವಂತಾಗಬೇಕು. ಅಂದಾಗ ಮಾತ್ರ ಸಂದರ್ಶನ ನಡೆಸುವವರಿಗೂ ಕಡಿಮೆ ಅವಧಿಯಲ್ಲಿ ತಮ್ಮ ಬೇಡಿಕೆ ಈಡೇರಲಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಜಿಲ್ಲಾ ಕೌಶಲ ಕೇಂದ್ರದ ಡಾ| ಚಂದ್ರಪ್ಪ, ಜಿಲ್ಲಾ ಕೈಗಾರಿಕೆ ಕೇಂದ್ರದ ಸಹಾಯಕ ನಿರ್ದೇಶಕ ಎನ್‌.ಎಂ. ಭೀಮಪ್ಪ, ಕೆಸಿಸಿಐ ಅಧ್ಯಕ್ಷ ಮಹೇಂದ್ರ ಲದ್ದಡ, ಉದ್ಯಮಿಗಳಾದ ಜಯದೇವ ಮೆಣಸಗಿ, ಎಂ.ಬಿ. ಹೊಂಬರಡಿ, ರಮೇಶ ಪಾಟೀಲ, ಶಂಕರಣ್ಣ ಮುನವಳ್ಳಿ, ವಿನಯ ಜವಳಿ, ಸಿದ್ದೇಶ್ವರ ಕಮ್ಮಾರ, ವಿ.ಪಿ. ಲಿಂಗನಗೌಡರ ಇನ್ನಿತರರಿದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.