ತುಮಕೂರನಲ್ಲಿ ಮೋದಿ ಭಾಷಣಕ್ಕೆ ವಿಪಕ್ಷಗಳ ಟೀಕೆಗೆ ಮಹತ್ವ ಬೇಡ: ಸವದಿ
Team Udayavani, Jan 4, 2020, 2:30 PM IST
ವಿಜಯಪುರ: ತುಮಕೂರನಲ್ಲಿ ಮೋದಿ ಕಾರ್ಯಕ್ರಮದ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಹೆಚ್ಚಿನ ಮಹತ್ವ ನೀಡುವುದು ಬೇಡ. ವಿರೋಧ ಪಕ್ಷದ ನಾಯರು ಆಡಳಿತ ಪಕ್ಷವನ್ನು ಹೊಗಳಲು ಸಾಧ್ಯವೇ ಎಂದು ಡಿಸಿಎಂ ಲಕ್ಷ್ಮಣ ಸವದಿ ಪ್ರಶ್ನಿಸಿದರು.
ಶನಿವಾರ ನಗರದ ಹಿಟ್ನಳ್ಳಿ ಕೃಷಿ ಕಾಲೇಜಿನಲ್ಲಿ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದರು.
ರಾಜಕೀಯಕ್ಕಾಗಿ ವಿಪಕ್ಷಗಳ ನಾಯಕರು ಅನೇಕ ಟೀಕೆ ಟಿಪ್ಪಣೆಗಳನ್ನು ಮಾಡ್ತಾರೆ, ಅವುಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಆದರೆ ಅವರು ಆತ್ಮಾವಲೋಕನ ಮಾತಾಡಬೇಕಿತ್ತು. ದೇಶದ ಸಂವಿಧಾನದ ಬಗ್ಗೆ ಪ್ರಧಾನಿಯಾಗಿ ಮಕ್ಕಳಿಗೆ ಜಾಗೃತಿ ಮೂಡಿಸಿದ್ದರಲ್ಲಿ ತಪ್ಪೇನಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರಿಗೆ ತಿಳುವಳಿಕೆ ಕೊಟ್ಟಿದ್ದೇವೆ. ದೇಶದ ಸಂವಿಧಾನದ ಬಗ್ಗೆ ಮನವರಿಕೆ ಮಾಡಿಕೊಡುವ ಕರ್ತವ್ಯ ಪ್ರಧಾನಿ ಮಾಡಿದ್ದಾರೆ ಎಂದರು.
ಡಿಸಿಎಂ ಸ್ಥಾನಗಳ ಚರ್ಚೆಯಾಗುತ್ತಿರುವ ಕುರಿತು ನಾನು ಹಾದಿಬೀದಿಯಲ್ಲಿ ಮಾತಾಡೋದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಅದು ಚರ್ಚೆ ಆಗುತ್ತೆ, ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದರು.
ರಾಜ್ಯದಲ್ಲಿ ಹಾಲಿ ಮೂವರು ಡಿಸಿಎಂ ಇದ್ದರೂ ನಮ್ಮಲ್ಲಿ ಯಾರೂ ವಿಶೇಷ ಭದ್ರತೆ ಪಡೆದಿಲ್ಲ, ಝೀರೋ ಟ್ರಾಫಿಕ್ ಪಡೆದಿಲ್ಲ. ಸಚಿವರಿಗೆ ಇರುವ ಸಾಮಾನ್ಯ ಭದ್ರತೆ ಮಾತ್ರ ಪಡೆದಿದ್ದೇವೆ ಎಂದರು.
ಹಿಂದಿನ ಸರ್ಕಾರದಲ್ಲಿ ಜಿ. ಪರಮೇಶ್ವರ ಝಿರೋ ಟ್ರಾಫಿಕ್ ಪಡೆಯುತ್ತಿದ್ದ ಕಾರಣ ಸಾರ್ವಜನಿಕರಿಗೆ ತೊಂದರೆ ಆಗಿತ್ತು. ಹೀಗಾಗಿ ನಾವು ಝಿರೋ ಟ್ರಾಫಿಕ್ ಸೌಲಭ್ಯ ಪಡೆದಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹೈಕಮಾಂಡ ನಿರ್ಧರಿಸುತ್ತದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಥಣಿ, ಕಾಗವಾಡ ಕ್ಷೇತ್ರಗಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.