ನಾಳೆಯಿಂದ ಮಿಂಚಿನ ನೋಂದಣಿ

ಜನವರಿ 8 ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನೋಂದಣಿ ಕಾರ್ಯ

Team Udayavani, Jan 5, 2020, 4:25 PM IST

5-January-120

ದೇವನಹಳ್ಳಿ:ವಿಧಾನಸಭಾ ಕ್ಷೇತ್ರಗಳ ಮತದಾರರ ವಿಶೇಷ ಪರಿಷ್ಕರಣೆ-2020ರ ಸಂಬಂಧ, ಜನವರಿ 6 ರಿಂದ 8ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು.

ಸಭೆ:ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಮತದಾರರ ವಿಶೇಷ ಪರಿಷ್ಕರಣೆ-2020, ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳುವ ಬಗ್ಗೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯ ಸಂಬಂಧ ಸ್ವೀಕೃತವಾದ ಅರ್ಜಿಗಳ ವಿಲೇವಾರಿ ಮತ್ತು ಮತದಾನ ಕೇಂದ್ರಗಳನ್ನು ಗುರುತಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಚಾರ ಕಾರ್ಯ ಹಮ್ಮಿಕೊಳ್ಳಿ:ಮತದಾರರ ಪಟ್ಟಿಗಳ ಪರಿಷ್ಕರಣೆಯ ಭಾಗವಾಗಿ 2020 ರ ಜನವರಿ 6 ರಿಂದ 8 ರವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯವನ್ನು ಏರ್ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಿಂಚಿನ ನೋಂದಣಿ ಕಾರ್ಯ ನಡೆಯುವ ದಿನಗಳಂದು ಎಲ್ಲಾ ಬಿಎಲ್‌ಓಗಳು ತಪ್ಪದೇ ಮತಗಟ್ಟೆಗಳಲ್ಲಿ ಉಪಸ್ಥಿತರಿರಬೇಕು. ಮಿಂಚಿನ ನೋಂದಣಿ ಕಾರ್ಯವನ್ನು ಎಲ್ಲಾ ಕಾಲೇಜುಗಳಲ್ಲಿ ಏರ್ಪಡಿಸಿ, ಹೆಚ್ಚಿನ ಯುವ ಮತದಾರರ ನೋಂದಣಿಗೆ ಕ್ರಮ ವಹಿಸಬೇಕು ಹಾಗೂ ಮಿಂಚಿನ ನೋಂದಣಿ ಕಾರ್ಯ ನಡೆಯುವ ಬಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ-2020 ಸಂಬಂಧಿಸಿದಂತೆ, ಮತದಾರರ ಪಟ್ಟಿಗಳ
ಕರಡು ಪ್ರಕಟಣೆ ಮಾಡಿದ ಡಿಸೆಂಬರ್‌ 7 ರಿಂದ 23 ರವರೆಗೆ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜನವರಿ 5 ರೊಳಗೆ ವಿಲೇವಾರಿ ಮಾಡಲು, ಅಂಗೀಕರಿಸಲಾದ/ಪುರಸ್ಕರಿಸಲಾದ ಅರ್ಜಿಗಳ ಮಾಹಿತಿ ಖಚಿತಪಡಿಸಿಕೊಂಡು ಮತದಾರರ ವಿವರವನ್ನು ತಂತ್ರಾಂಶದಲ್ಲಿ ಜನವರಿ 8 ರೊಳಗೆ ದಾಖಲಿಸಲು ಹಾಗೂ ಪೂರಕ ಪಟ್ಟಿಗಳನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಗಳನ್ನು ಜನವರಿ 16 ರಂದು ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದರು.

ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಿ:10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಈ ಬಾರಿಯ ಧ್ಯೇಯ, ಸದೃಢ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಆಗಿರುತ್ತದೆ. ಜನವರಿ 25 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಮತದಾರರ ದಿವಸವನ್ನು ಎಲ್ಲಾ ಮತಗಟ್ಟೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಿಸಬೇಕು ಹಾಗೂ ಹೊಸದಾಗಿ ನೋಂದಾಯಿಸಿದ ಮತದಾರರಿಗೆ ನೂತನ ಎಪಿಕ್‌ ಕಾರ್ಡ್ಗಳನ್ನು ವಿತರಿಸಬೇಕು.ಶಾಲಾ ಕಾಲೇಜುಗಳಲ್ಲಿ ಮತದಾರರ ದಿನಾಚರಣೆ ಕುರಿತ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್‌. ಕೆ.ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಪಾ ರಾಯ್ಕರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ತಾಲೂಕು ತಹಶೀಲ್ದಾರರು, ಶಿರಸ್ತೇದಾರರು ಉಪಸ್ಥಿತರರಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.