ಎಲ್ಲರಿಗೂ ದೇಶದ ಹಿತ ಮುಖ್ಯ


Team Udayavani, Jan 6, 2020, 1:37 PM IST

ellarigu

ಕೋಲಾರ: ಈ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ವೈಯಕ್ತಿಕ ಹಿತಾಸಕ್ತಿಗಿಂತ ದೇಶದ ಹಿತವೇ ಮುಖ್ಯವಾಗಬೇಕು. ದೇಶ ಹಾಗೂ ಜನರ  ಪರವಾಗಿ ಸರ್ಕಾರ ತೆಗೆದು ಕೊಳ್ಳುವ ನಿರ್ಧಾರಗಳಿಗೆ ಬೆಂಬಲ ನೀಡ ಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಮನವಿ ಮಾಡಿದರು.  ಶ್ರೀ ಕ್ಷೇತ್ರ  ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌, ಕಸಬ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಗರದ  ಕುರುಬರಪೇಟೆಯ ಬೀರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸುಮಂಗಲಿ ಪೂಜೆ ಮತ್ತು ಧಾರ್ಮಿಕ ಸಭೆಯನ್ನು ಉದ್ದೇಶಿಸಿ  ಮಾತನಾಡಿದರು.

ಪೌರತ್ವ ತಿದ್ದುಪಡಿ ಬೆಂಬಲಿಸಿ: ದೇಶ ಸುಭದ್ರ ವಾಗಿದ್ದರೆ ಭಾರತೀಯ ಪ್ರಜೆಯೂ ಸುಭದ್ರ ವಾಗಿರುತ್ತಾನೆ. ಈ ದಿಸೆಯಲ್ಲಿ ಸರ್ಕಾರ ತೆಗೆದುಕೊಳ್ಳುವ  ನಿರ್ಧಾರ, ಕಾಯ್ದೆಗಳನ್ನು ಬೆಂಬಲಿಸಬೇಕು ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವತಿದ್ದುಪಡಿ ಕಾನೂನು   ಬೆಂಬಲಿಸುವಂತೆ ಮನವಿ ಮಾಡಿದರು.

ನನ್ನ ಜೇಬಿನಿಂದ ಖರ್ಚು ಮಾಡಿದ್ದೇನೆ: ಕೋಲಾರಮ್ಮ ಕೆರೆ 800 ಎಕರೆ ವಿಸ್ತೀರ್ಣವಿದೆ. ಕೆರೆಯನ್ನು ಸರ್ಕಾರದ ಹಣ ತಂದು ಸ್ವತ್ಛಗೊಳಿಸುತ್ತಿಲ್ಲ. 40  ರಿಂದ 50 ಜೆಸಿಬಿ ಯಂತ್ರಗಳನ್ನು ಇಟ್ಟುಕೊಂಡು ಕೆಲಸ ಮಾಡಿದ್ದೇವೆ. ಅದರ ಖರ್ಚು ನನ್ನ ಜೇಬಿನ ಹಣದಿಂದ ಮಾಡಲಾಗಿದೆ. ಯಾರಿಂದಲೂ ನಯಾಪೈಸೆ ತೆಗೆದುಕೊಂಡಿಲ್ಲ. ಎಲ್ಲ ಮುಖಂಡರು ಜೊತೆಯಲ್ಲಿ ನಿಂತು ಸಹಕಾರ ನೀಡಿದ್ದಾರೆ, ನನಗೆ ಅಷ್ಟೇ ಸಾಕು ಎಂದು ವಿರೋಧಿಗಳಿಗೆ  ತಿರುಗೇಟು ನೀಡಿದರು. ಕೆರೆ ಕೆರೆಯ ರೀತಿ ಇರಬೇಕೇ ಹೊರತು? ಕಾಡಿನ ರೀತಿಯಲ್ಲಿರಬಾರದು, ಹುಡುಗರಿಗೆ ದುಶ್ಚಟಗಳಿಗೆ ಹೇಳಿ ಮಾಡಿಸಿದ  ಸ್ಥಳವಾಗ ಬಾರದು ಎಂದು ಕೋಲಾರಮ್ಮನ ಕೆರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಸ್ವತ್ಛಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅಭಿವೃದ್ಧಿಪಡಿಸಬೇಕೆಂಬ ಕಾಳಜಿ ಇದೆ: ದೊಡ್ಡ ಹಳ್ಳಿಗಿಂತಲೂ ಕಡೆ ಆಗಿದೆ ಕೋಲಾರ ನಗರ. ನಗರಸಭೆ ಯಾವ ಪರಿಸ್ಥಿತಿಯಲ್ಲಿದೆ, ಏನು ಎತ್ತ  ಎಂದು ನನಗೂ ಗೊತ್ತು. ಅಭಿವೃದ್ಧಿ ಮಾಡುವ ಸಲುವಾಗಿ ಎಲ್ಲರ ಆಶೀರ್ವಾದದಿಂದ ನಾನು ಗೆದ್ದು ಬಂದಿದ್ದೇನೆ. ನಾನು ಕೋಲಾರದ ಮಣ್ಣಿನ ಮಗ,  ನನಗೂ ಕೋಲಾರ ನಗರಸಭೆ ಯನ್ನು ಅಭಿವೃದ್ಧಿಪಡಿಸ ಬೇಕೆಂಬ ಕಾಳಜಿ ಇದೆ. ಇದನ್ನು ಎಲ್ಲರೂ ಸೇರಿಕೊಂಡು ಮಾಡೋಣ ಎಂದು ಹೇಳಿದರು.

ಬಯಕೆಗಳು ಈಡೇರಲಿ: ಜನಜಾಗೃತಿ ವೇದಿಕೆ ಸದಸ್ಯ ಶಶಿಕುಮಾರ್‌, ಪ್ರಸ್ತುತ ಧನುರ್ಮಾಸ. ಪೌರಾಣಿಕ ಹಿನ್ನೆಲೆಯಲ್ಲಿ ಹೇಳುವುದಾದರೆ ಪಾರ್ವತಿ  ತನಗೆ ಒಳ್ಳೆಯ ಪತಿ ಸಿಗಲಿ ಎಂದು ವ್ರತಾಚರಣೆ ಮಾಡಿ ಶಿವ ವನ್ನು ಪಡೆಯುತ್ತಾಳೆ. ಅಂತೆಯೇ ಸುಮಂಗಲಿ ಪೂಜೆ ಮಾಡುವ ಮೂಲಕ  ಜ.15ರವರೆಗೆ ವ್ರತಾಚರಣೆ ಮಾಡಿ, ಅಂದುಕೊಂಡ ಬಯಕೆಗಳು ಈಡೇರಲಿ ಎಂದು ಆಶಿಸಿದರು.

ನಗರಸಭೆ ಸದಸ್ಯ ಎ.ಪ್ರಸಾದ್‌ಬಾಬುಅಧ್ಯಕ್ಷತೆ  ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಪಿ. ವೆಂಕಟಮುನಿಯಪ್ಪ,ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಂಶಕ್ತಿ ಚಲಪತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್‌, ಜನಜಾಗೃತಿ ವೇದಿಕೆ ಸದಸ್ಯೆ ಅರುಣಾ, ನಗರಸಭೆ ಸದಸ್ಯರಾದ ನಾರಾಯಣಮ್ಮ, ಅಪೂರ್ವ  ರಾಮಚಂದ್ರ ಇತರರಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಡೆದ ಸುಮಂಗಲಿ ಪೂಜೆಯಲ್ಲಿ ನೂರಕ್ಕೂ ಹೆಚ್ಚು ಸುಮಂಗಲಿಯರು ಅರ್ಚಕರ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.