ಪ್ರತಿಭಟನೆ ಹೆಸರಲ್ಲಿ ಆಸ್ತಿಪಾಸ್ತಿ ಹಾಳು ಮಾಡಿದ್ರೆ ಸಿಟ್ಟು ಬರಲ್ವಾ? : ರೆಡ್ಡಿ
Team Udayavani, Jan 6, 2020, 9:53 PM IST
ಬಳ್ಳಾರಿ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎಂದಿದ್ದ ಶಾಸಕ ಜಿ. ಸೋಮಶೇಖರರೆಡ್ಡಿ ಇದೀಗ ಮುಸಲ್ಮಾನರ ಪರ ನಾವಿದ್ದೇವೆ. ದೇಶ ಬಿಟ್ಟು ಹೋಗುವ ಪರಿಸ್ಥಿತಿ ಯಾರಿಗೂ ಬರಲ್ಲ ಎನ್ನುವ ಮೂಲಕ ಮುಸಲ್ಮಾನರ ಬೆನ್ನಿಗೆ ನಿಂತಿದ್ದಾರೆ.
ಇಲ್ಲಿನ ಶ್ರೀನಗರದಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಕರಪತ್ರ ಹಂಚಿ ಜಾಗೃತಿ ಮೂಡಿಸುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ದೇಶಬಿಟ್ಟು ಹೋಗುವ ಪರಿಸ್ಥಿತಿ ಯಾರಿಗೂ ಬರಲ್ಲ. ಮುಸಲ್ಮಾನರ ಪರ ನಾವಿದ್ದೇವೆ. ಬಿಜೆಪಿ ಎಲ್ಲರನ್ನೂ ಕಾಪಾಡುತ್ತದೆ. ದೇಶ ಬಿಡೋ ಪರಿಸ್ಥಿತಿ ಬಂದರೆ ನಾನೂ ಅವರ ಹಿಂದೆ ಹೋಗುತ್ತೇನೆ ಎಂದರು.
ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬರೂ ಇಲ್ಲಿನ ಸದಸ್ಯರು. ನೂರಕ್ಕೆ ನೂರರಷ್ಟು ಹೇಳುತ್ತೇನೆ ಭಾರತದಲ್ಲಿ ಹುಟ್ಟಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಪೌರತ್ವ ವಿರೋಧಿಸುವುದಕ್ಕಾಗಿ ಪ್ರತಿಭಟನೆ, ಗಲಾಟೆ ಹಿಂಸೆ ಮಾಡಿದರೆ ಉಪಯೋಗವಿಲ್ಲ. ಹಲವೆಡೆ ಗಲಾಟೆಯಾಗಿದೆ. ಆದರೆ ಯಾವೊಬ್ಬ ಮುಸಲ್ಮಾನರು ದೂರು ನೀಡಿಲ್ಲ. ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ. ಇದೇ ವಿಷಯಕ್ಕೆ ದೇಶದಲ್ಲಿ 13,800 ಕೋಟಿ ರೂ. ಆಸ್ತಿಪಾಸ್ತಿ ಹಾನಿಯಾಗಿದೆ. ಈ ಕಾರಣಕ್ಕಾಗಿಯೇ ನಾನು ಮಾತನಾಡಿದ್ದೇನೆ ಹೊರತು, ನಾನು ಮುಸ್ಲಿಂ ವಿರೋಧಿಯಲ್ಲ ದೇಶದ ಆಸ್ತಿಪಾಸ್ತಿ ಹಾನಿಯಾದರೆ ನಮಗೆ ಕೋಪ ಬರುತ್ತದೆ ಎಂದರು.
ಪೌರತ್ವ ತಿದ್ದುಪಡಿ ಕಾನೂನು ವಿರೋಧ ಮಾಡುವುದಾದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಕಾಯ್ದೆ ಬಗ್ಗೆ ಇರುವ ಗೊಂದಲವನ್ನು ನಿವಾರಣೆ ಮಾಡುವ ಸಲುವಾಗಿ ಕರಪತ್ರ ಹಂಚಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.