ಬ್ಯಾಕ್‌ ಟು ಬ್ಯಾಕ್‌ ಪ್ರಜ್ವಲ್

Team Udayavani, Jan 7, 2020, 10:43 AM IST

cinema-tdy-3

‌ಕಳೆದ ಎರಡು ವರ್ಷಗಳಿಂದ ನಟ ಪ್ರಜ್ವಲ್‌ ದೇವರಾಜ್‌ ಅವರನ್ನು ತೆರೆಮೇಲೆ ನೋಡೋದು ಅಪರೂಪವಾಗಿದೆ ಎನ್ನುತ್ತಿದ್ದ ಪ್ರೇಕ್ಷಕರ ಮುಂದೆ, ಪ್ರಜ್ವಲ್‌ ಈ ವರ್ಷದಲ್ಲಿ ಸಾಲು ಸಾಲು ಚಿತ್ರಗಳ ಮೂಲಕ ಬರಲು ತಯಾರಿ ನಡೆಸುತ್ತಿದ್ದಾರೆ.

ಹೌದು, “ಲೈಫ್ ಜೊತೆ ಒಂದ್‌ ಸೆಲ್ಫಿ’ ಚಿತ್ರದ ನಂತರ ನಟ ಪ್ರಜ್ವಲ್‌ ದೇವರಾಜ್‌ “ಅನಂತು ವರ್ಸಸ್‌ ನುಸ್ರತ್‌’, “ಯದಾ ಯದಾ ಹೀ ಧರ್ಮಸ್ಯ’ ಚಿತ್ರಗಳಲ್ಲಿ ಗೆಸ್ಟ್‌ ಅಪಿಯರೆನ್ಸ್‌ ನಲ್ಲಿ ಕಾಣಿಸಿಕೊಂಡಿದ್ದು ಬಿಟ್ಟರೆ, ಕಳೆದ ಎರಡು ವರ್ಷಗಳಿಂದ ಪ್ರಜ್ವಲ್‌ ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ಬಿಗ್‌ ಸ್ಕ್ರೀನ್‌ ಮೇಲೆ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಹಾಗಂತ ಪ್ರಜ್ವಲ್‌ ದೇವರಾಜ್‌ ಕೈಯಲ್ಲಿ ಯಾವ ಚಿತ್ರಗಳು ಇಲ್ಲ ಅಂತಲ್ಲ. ಪ್ರಜ್ವಲ್‌ ದೇವರಾಜ್‌ ಕೈಯಲ್ಲಿ ಒಂದರ ಹಿಂದೊಂದು ಚಿತ್ರಗಳಿದ್ದರೂ, ಯಾವುದೂ ತೆರೆಗೆ ಬಂದಿರಲಿಲ್ಲವಷ್ಟೆ.

ಈ ವರ್ಷದ ಆರಂಭದಲ್ಲಿಯೇ ಪ್ರಜ್ವಲ್‌ ದೇವರಾಜ್‌ “ಜಂಟಲ್‌ ಮನ್‌’ ಚಿತ್ರದ ಮೂಲಕ ಬಿಗ್‌ ಎಂಟ್ರಿಕೊಡುವ ತಯಾರಿಯಲ್ಲಿದ್ದಾರೆ. ಅದಾದ ಬಳಿಕ “ಇನ್ಸ್‌ಪೆಕ್ಟರ್‌ ವಿಕ್ರಂ’, “ಅರ್ಜುನ್‌ ಗೌಡ’, “ದಿಲ್‌ ಕಾ ರಾಜಾ’, “ವೀರಂ’ ಹೀಗೆ ಐದಾರು ಚಿತ್ರಗಳು ಪ್ರಜcಲ್‌ ಕೈಯಲ್ಲಿದ್ದು, ಇದರಲ್ಲಿ ಬಹುತೇಕ ಚಿತ್ರಗಳು ಬಿಡುಗಡೆಯ ಹಂತದಲ್ಲಿದ್ದು, ಇನ್ನೇನು ತೆರೆ ಕಾಣಬೇಕಷ್ಟೆ. ಹಾಗಾಗಿ ಈ ವರ್ಷ ಪ್ರಜ್ವಲ್‌ ಒಂದರ ಹಿಂದೊಂದು ಚಿತ್ರಗಳ ಮೂಲಕ ವರ್ಷ ಪೂರ್ತಿ ಪ್ರೇಕ್ಷಕರ ಮುಂದೆ ಬರುತ್ತಲೇ ಇರುವ ವಿಶ್ವಾಸದಲ್ಲಿದ್ದಾರೆ.

ಸದ್ಯ “ಜಂಟಲ್‌ ಮನ್‌’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಿ ಮಾಡಿಕೊಳ್ಳುತ್ತಿರುವ ಪ್ರಜ್ವಲ್‌ ದೇವರಾಜ್‌, ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತರಾಗಿದ್ದಾರೆ. ಈಗಾಗಲೇ ಚಿತ್ರದ ಫ‌ಸ್ಟ್‌ಲುಕ್‌, ಆಡಿಯೋ ಬಿಡುಗಡೆಯಾಗುತ್ತಿದ್ದು, ಸೋಮವಾರ (ಜ.5) ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದೆ. ಒಟ್ಟಾರೆ “ಜಂಟಲ್‌ ಮನ್‌’ ನಿಧಾನವಾಗಿ ನೋಡುಗರ ಗಮನ ಸೆಳೆಯುತ್ತಿದ್ದು, ಇದೇ ಜನವರಿ ಕೊನೆವಾರ ಚಿತ್ರ ತೆರೆಗೆ ಬರುತ್ತಿದೆ.

“ಜಂಟಲ್‌ ಮನ್‌’ ಚಿತ್ರದ ನಂತರ , “ಇನ್ಸ್‌ಪೆಕ್ಟರ್‌ ವಿಕ್ರಂ’, “ಅರ್ಜುನ್‌ ಗೌಡ’ ಹೀಗೆ ಒಂದೊಂದೆ ಚಿತ್ರಗಳು ತೆರೆಗೆ ಬರುವ ಸಾಧ್ಯತೆಯಿದ್ದು. ಏನಿಲ್ಲವೆಂದರೂ, 2020ಕ್ಕೆ ಕನಿಷ್ಟ ಮೂರ್‍ನಾಲ್ಕು ಚಿತ್ರಗಳ ಮೂಲಕ ಬ್ಯಾಕ್‌ ಟು ಬ್ಯಾಕ್‌ ಎಂಟ್ರಿಕೊಡುವ ನಿರೀಕ್ಷೆಯಲ್ಲಿದ್ದಾರೆ ಪ್ರಜ್ವಲ್‌ ದೇವರಾಜ್‌.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.