ಸಚಿವ ರವಿ ಹೇಳಿಕೆ ಖಂಡಿಸಿ ಧರಣಿ
Team Udayavani, Jan 7, 2020, 3:35 PM IST
ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡಪರ ಸಂಘಟನೆಗಳಿಗೆ ಕೆಟ್ಟ ಪದ ಬಳಸಿದ್ದು, ಇವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾರ್ಯಕ್ರಮವೊಂದರಲ್ಲಿ ಕನ್ನಡ ಪರ ಸಂಘಟನೆಗಳ ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಸಂಘಟನೆಗಳು ತುಕಡೆ ಗ್ಯಾಂಗ್ ಗಳೆಂದು ನಿಂಧಿಸಿ ಕರ್ನಾಟಕದ ನೆಲ, ಜಲ, ಭಾಷೆ, ಸಂಸ್ಕೃತಿಗೋಸ್ಕರ ಹೋರಾಟ ಮಾಡುವ ಎಲ್ಲ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.
ಕಳೆದ ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಆ ದಿನವೇ ಸಚಿವ ಸಿ.ಟಿ.ರವಿಯವರು ಕನ್ನಡ ಧ್ವಜಾರೋಹಣ ಕಾರ್ಯಕ್ರಮಕ್ಕೆ ಭಾಗವಹಿಸದೇ ಕನ್ನಡ ಧ್ವಜಕ್ಕೆ , ಕನ್ನಡಾಂಬೆಗೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಕಪ್ಪು ಬಾವುಟ ತೋರಿಸಿದ ಕೆಲವರ ವಿರುದ್ಧ ಯಾವುದೇ ಹೇಳಿಕೆ ನೀಡದೇ ಪರೋಕ್ಷವಾಗಿ ಬೆಂಬಲಿಸಿರುವುದು ಇದರಿಂದ ತಿಳಿಯುತ್ತದೆ ಎಂದು ಪ್ರತಿಭಟನಾರರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಕೂಡಲೇ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕನ್ನಡಿಗರ ಕ್ಷಮೆ ಕೋರಬೇಕು. ಮುಂದೆ ಈ ರೀತಿಯ ತಪ್ಪುಗಳನ್ನು ಮಾಡಬಾರದು. ಇದೇ ಧೋರಣೆ ಮುಂದುವರಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು. ಮಂಜುನಾಥ ಶೆಟ್ಟಿ, ಸುರೇಶ್ ಶೆಟ್ಟಿ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.