ಭಾರತ್ ಬಂದ್: ಚಿಕ್ಕಬಳ್ಳಾಪುರದಲ್ಲಿ ನೀರಸ ಪ್ರತಿಕ್ರಿಯೆ; ಎಡಪಕ್ಷಗಳ ಪ್ರತಿಭಟನೆ
Team Udayavani, Jan 8, 2020, 10:33 AM IST
ಚಿಕ್ಕಬಳ್ಳಾಪುರ: ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಹಾಗೂ ಪ್ರತಿ ಕಾರ್ಮಿಕನಿಗೆ 21 ಸಾವಿರ ರೂ, ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಗೌರಿಬಿದನೂರು ತಾಲೂಕುಗಳಲ್ಲಿ ಪರಿಸ್ಥಿತಿ ಎಂದಿನಂತೆ ಇದ್ದು ವಾಹನ ಹಾಗೂ ಜನ ಸಂಚಾರ ಮಾಮೂಲಿಯಂತೆ ಇದ್ದು ಬಂದ್ ಛಾಯೆ ಇಲ್ಲವಾಗಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಯ ಮುಖಂಡರು ಮೆರವಣಿಗೆ ಮೂಲಕ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಕೆಎಸ್ಆರ್ಟಿಸಿ, ಖಾಸಗಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾದ್ಯಂತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಬಂದ್ ಆಚರಣೆಗೆ ಎಲ್ಲೂ ಅವಕಾಶ ನೀಡಿಲ್ಲ. ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಕಾರರಿಗೆ ಪೊಲೀಸರು ದಿಗ್ಬಂದನ ಹಾಕಿದ್ದು ಪ್ರತಿಭಟನಕಾರರು ಎಲ್ಲೂ ಕದಲದಂತೆ ಪೊಲೀಸರು ಕಾವಲು ಇದ್ದಾರೆ.
ಪ್ರತಿಭಟನೆಯಲ್ಲಿ ಎಡಪಕ್ಷಗಳ ಕಾರ್ಯಕರ್ತರು, ಬಿಸಿಯೂಟ, ಅಂಗನವಾಡಿ, ಆಶಾ, ಗ್ರಾಪಂ ನೌಕರರು, ಪ್ರಾಂತ ರೈತ ಸಂಘ, ಕೃಷಿಕೂಲಿಕಾರರು, ಎಸ್ಎಫ್ಐ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.