ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು
ಸಾರ್ವಜನಿಕ ಸ್ಥಳಗಳಲ್ಲಿ ಸರ್ವೇ-ತೆರವಿಗೆ ಇಂದಿನಿಂದಲೇ ಕಾರ್ಯಾಚರಣೆ: ಡಿಸಿ ಸೂಚನೆ
Team Udayavani, Jan 8, 2020, 11:29 AM IST
ದಾವಣಗೆರೆ: 2009 ಸೆಪ್ಟೆಂಬರ್ 29ರ ನಂತರ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ಸರ್ವೇ ನಡೆಸುವುದರ ಜೊತೆಗೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಸುತ್ತೋಲೆಯಂತೆ ಜ.7ರಿಂದಲೇ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ ಮತ್ತು ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕೆಂದು ತಿಳಿಸಿದರು.
ಸರ್ವೋಚ್ಚ ನ್ಯಾಯಾಲಯವು 29ನೇ ಸೆಪ್ಟೆಂಬರ್ 2009ರ ನಂತರ ಸಾರ್ವಜನಿಕ ರಸ್ತೆಗಳು, ಸಾರ್ವಜನಿಕ ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಯಾವುದೇ ಧಾರ್ಮಿಕ ಕಟ್ಟಡಗಳ ಸರ್ವೇ ಮಾಡಿ ತೆರವುಗೊಳಿಸಲು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ತೆಗೆದುಕೊಂಡ ಕ್ರಮದ ಕುರಿತು ಮಾಹಿತಿ ಕ್ರೋಡೀಕರಿಸಿ, ವರದಿ ನೀಡಲು ತಿಳಿಸಿದ ಪ್ರಕಾರ 2011 ರಿಂದ 2016ರ ವರೆಗೆ ಸಲ್ಲಿಸಲಾಗಿತ್ತು. ರಾಜ್ಯ ಉಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣದಡಿ ಸರ್ಕಾರ ಸಲ್ಲಿರುವ ವರದಿಯನ್ನು ಮರು ಪರಿಶೀಲಿಸಲು ತಿಳಿಸಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲು ಹೊಸದಾಗಿ ಸರ್ವೇಗೆ ಮಾರ್ಗಸೂಚಿ ನೀಡಿದ್ದು, ಅದರನ್ವಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿರುವನ್ವಯ ಸಂಬಂಧಿಸಿದ ಎಲ್ಲರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದರು.
ತಹಶೀಲ್ದಾರರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಪಿಡಿಓಗಳು, ಬಿಲ್ ಕಲೆಕ್ಟರ್‌ಗಳನ್ನು ಒಳಗೊಂಡು ಎಲ್ಲ ತಾಲೂಕು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು/ಸಿಬ್ಬಂದಿಗಳ ತಂಡ ರಚಿಸಿಕೊಂಡು ಬುಧವಾರದಿಂದಲೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿಕೊಂಡು ಸರ್ವೇ ಕಾರ್ಯ ನಡೆಸಬೇಕು ಜೊತೆಗೆ ಪೊಲೀಸರ ಭದ್ರತೆಯಲ್ಲಿ ತೆರವು ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಧಾರ್ಮಿಕ ಭಾವನೆಗಳಿಗೆ ಸಂಬಂಧಿ ಸಿರುವುದರಿಂದ ತೆರವುಗೊಳಿಸುವ ವೇಳೆ ಸ್ಥಳೀಯರು, ಆಯಾ ಧರ್ಮದವರ ಮನವೊಲಿಸಿ ಅಥವಾ ಅಂತಹ ಕಟ್ಟಡಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಬುಧವಾರ ಸರ್ವೇ ಜೊತೆಗೆ ತೆರವು ಕಾರ್ಯಾಚರಣೆ ಆರಂಭಿಸಬೇಕು. ಅವಶ್ಯಕತೆ ಕಂಡು ಬಂದಲ್ಲಿ ತಾವು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಸಹಕರಿಸಲಿದ್ದಾರೆ. ಈ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದಾಗಿದ್ದು, ಸರ್ಕಾರ ಹಾಗೂ ಉಚ್ಚ ನ್ಯಾಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದೆ. ಉಪವಿಭಾಗಾಧಿಕಾರಿ, ತಹಶೀಲ್ದಾರ್, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿ ಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಪೊಲೀಸ್ ಭದ್ರತೆ ಒದಗಿಸುವರು ಎಂದು ಅವರು ತಿಳಿಸಿದರು. ಸರ್ವೇ ಮತ್ತು ತೆರವು ಕಾರ್ಯಾಚರಣೆ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳ ಮೊದಲನೇ ಸೋಮವಾರದಂದು ಸಭೆ ನಡೆಸಿ, ಪರಿಶೀಲಿಸಲಾಗುವುದು. ಆದ್ದರಿಂದ ಜ.7ರಿಂದಲೇ ಸರ್ವೇ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಟ್ಟುನಿಟ್ಟಾಗಿ ಅಧಿಕಾರಿಗಳು ತಮಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಇದು ಎಲ್ಲ ಧರ್ಮದ ಅನ ಧಿಕೃತ ಕಟ್ಟಡಗಳಿಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಣೆ ಮಾಡಬೇಕೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ,ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಕಟ್ಟಡಗಳ ತೆರವುಗೊಳಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ಸುತ್ತೋಲೆಯ ಬಗ್ಗೆ ವಿವರಣೆ ನೀಡಿದರು.
ಉಪ ವಿಭಾಗಾ ಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಸಂತೋಷ್‌ಕುಮಾರ್, ಬೇರೆ ತಾಲ್ಲೂಕುಗಳ ತಹಶೀಲ್ದಾರರು, ಇಓಗಳು, ಪಾಲಿಕೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭಾರತಿ, ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.