ಹೊಳೆ ತೊಂಡಿಹಾಳ ಹುಲಿಗೆಮ್ಮ ದೇವಿ ಜಾತ್ರೆಗೆ ಸಿದ್ಧತೆ

ಐದು ದಿನಗಳವರೆಗೆ ನಡೆಯುವ ಜಾತ್ರೋತ್ಸವ „ ಅನಿಷ್ಟ ಪದ್ಧತಿ ಆಚರಣೆ ತಡೆಗೆ ಐದು ತಂಡ ರಚಿಸಿದ ಸಹಾಯಕ ಆಯುಕ್ತರು

Team Udayavani, Jan 8, 2020, 12:04 PM IST

8-January-7

ಮುದಗಲ್ಲ: ಐದು ಜಿಲ್ಲೆಗಳ ಗಡಿ ಪ್ರದೇಶದಲ್ಲಿರುವ ಪ್ರಸಿದ್ಧ ಹೊಳೆ ತೊಂಡಿಹಾಳ ಗ್ರಾಮದ ಶ್ರೀ ಹುಲಿಗೇಮ್ಮ ದೇವಿ ಜಾತ್ರೆ ಜ.18, 19ರಂದು ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಕೃಷ್ಣಾ ನದಿ ದಡದಲ್ಲಿ ನೆಲೆಸಿರುವ ಹುಲಿಗೆಮ್ಮದೇವಿ ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಗಡಿ ಪ್ರದೇಶದ ಮಧ್ಯ ಬಸವರಾಜ ಜಲಸಾಗರ ನಿರ್ಮಿಸಲಾಗಿದೆ. ಈ ನದಿ ದಡದಲ್ಲಿ ನೆಲೆಸಿರುವ ಹುಲಿಗೆಮ್ಮದೇವಿಯನ್ನು ಐದು ಜಿಲ್ಲೆಗಳ ಸಾವಿರಾರು ಭಕ್ತರು ಆರಾಧಿಸುತ್ತಾರೆ.

ಐದು ತಂಡ ರಚನೆ: ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಭರದಿಂದ ಸಿದ್ಧತಾ ಕಾರ್ಯ ನಡೆಸುತ್ತಿದೆ. ಲಿಂಗಸುಗೂರು ಉಪವಿಭಾಗಾಧಿ ಕಾರಿ ಡಾ| ದಿಲೀಶ ಶಶಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ್ದು, ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನೆರವೇರಿಸಲು, ಜಾತ್ರೆಯಲ್ಲಿ ಅನಿಷ್ಠ ಪದ್ಧತಿಯಾದ ದೇವದಾಸಿ ಬಿಡುವ ಆಚರಣೆ ತಡೆಗೆ 5 ತಂಡಗಳನ್ನು ರಚಿಸಿದ್ದಾರೆ.

ಆಗ್ರಹ: ಜಾತ್ರೆಗೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯದ ಜೊತೆಗೆ ಎಲ್ಲೆಂದರಲ್ಲಿ ಬಯಲುಶೌಚ ಮಾಡುವುದನ್ನು ನಿಲ್ಲಿಸಲು ತಾತ್ಕಾಲಿಕ ಶೌಚಾಲಯ ನಿರ್ಮಿಸಬೇಕು. ನೂತನವಾಗಿ ದೇವಾಲಯ ನಿರ್ಮಾಣ ಹಂತದಲ್ಲಿರುವುದರಿಂದ ಭಕ್ತರಿಗಾಗುವ ತೊಂದರೆಯನ್ನು ತಾಲೂಕಾಡಳಿತ ತಪ್ಪಿಸಬೇಕಿದೆ. ತೆಂಗಿನಕಾಯಿ ಒಡೆಯುವ ಸ್ಥಳವನ್ನು ಪ್ರತ್ಯೇಕಿಸಬೇಕು. ದೇವಿ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ರಾತ್ರಿ ಮಹಿಳೆಯರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಬೀದಿ ದೀಪ, ರಸ್ತೆ ಸುಧಾರಣೆ ಸೇರಿದಂತೆ ಶೌಚಾಲಯ, ಪ್ರಥಮ ಚಿಕಿತ್ಸೆಗೆ ಅನೂಕೂಲ ಕಲ್ಪಿಸಬೇಕು. ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕು. ಸ್ವಚ್ಛತೆಗೆ ಕಾಪಾಡಬೇಕು. ಪ್ರಾಣಿ ಬಲಿ ತಡೆಯಬೇಕು. ಮದ್ಯ ಮಾರಾಟ ನಿಷೇಧಿಸಬೇಕೆಂದು ಕರವೇ ಅಧ್ಯಕ್ಷ ಬಾಲಪ್ಪ ಕನೇರಿ ಸೇರಿ ಭಕ್ತರು ಆಗ್ರಹಿಸಿದ್ದಾರೆ.

ಕಾರ್ಯಕ್ರಮಗಳೇನು..
ತೊಂಡಿಹಾಳ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯುತ್ತವೆ. ಜ.14ರಂದು ದೇವಿಗೆ ಕಂಕಣ ಕಟ್ಟುವುದು. 15, 16ರಂದು ಪಲ್ಲಕಿ ಉತ್ಸವ, 17ರಂದು ಸಂಜೆ 6 ಗಂಟೆಗೆ ಗ್ರಾಮ ದೇವತೆ ಗಂಗಾಸ್ಥಳಕ್ಕೆ ಹೋಗುವುದು, ಚಿನ್ನಾಪುರದಿಂದ ಶ್ರೀ ಹುಲಿಗೆಮ್ಮದೇವಿ ತೊಂಡಿಹಾಳ ಗ್ರಾಮಕ್ಕೆ ಆಗಮನ, 18ರಂದು ಶನಿವಾರ ಬೆಳಗ್ಗೆ 8 ಗಂಟೆಗೆ ಅಕ್ಕಿಪಾಯಸ ಹಾಗೂ ಸಂಜೆ 6 ಗಂಟೆಗೆ ಹಲ್ಕಾವಟಗಿ ಗ್ರಾಮದ ಸದ್ಬಕ್ತರಿಂದ ಉಚ್ಛಾಯೋತ್ಸವ ಕಳಸ ಆಗಮಿಸುವುದು.

19ರಂದು ಮುಂಜಾನೆ 8ಘಂಟೆಗೆ ಅಗ್ನಿ ಹಾಯುವುದು, ಸಂಜೆ 6 ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ಐದು ದಿನಗಳವರೆಗೆ ನಡೆಯುವ ಜಾತ್ರೆಯಲ್ಲಿ ನಿತ್ಯ ಸಾವಿರಾರು ಭಕ್ತರು ಭಾಗವಹಿಸುತ್ತಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ ಸುಸೂತ್ರವಾಗಿ ನಡೆಯಲಿದೆ. ಅನಿಷ್ಠ ಪದ್ಧತಿ ಆಚರಣೆ ನಿಷೇಧಕ್ಕೆ ಹಾಗೂ ಭಕ್ತರಿಗೆ ಸಕಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಡಾ| ದಿಲೀಶ ಶಶಿ,
ಸಹಾಯಕ ಆಯುಕ್ತರು, ಲಿಂಗಸುಗೂರು

ದೇವಪ್ಪ ರಾಠೊಡ

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.