ಶ್ರದ್ಧಾ ಭಕ್ತಿಯಿಂದ ಸಿದ್ಧರಾಮೇಶ್ವರ ಜಯಂತ್ಯುತ್ಸವಕ್ಕೆ ಸಿದ್ಧತೆ
Team Udayavani, Jan 8, 2020, 3:18 PM IST
ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜ. 18ರಂದು ಬೆಳಗ್ಗೆ 11:00ಕ್ಕೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಪಂಡಿತ ಬಿರಾದಾರ ಅಧ್ಯಕ್ಷತೆಯಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಯಾದಗಿರಿ ತಾಲೂಕು ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಮಕರ ಸಂಕ್ರಮಣ ಹಬ್ಬ ಜ. 14 ಮತ್ತು 15ರಂದು ನಡೆಯಲಿದೆ. ಹಾಗಾಗಿ ಜ.14ರಂದು ಆಚರಿಸಬೇಕಾದ ಜಯಂತಿಯನ್ನು ಸಮಾಜದ ಮುಖಂಡರ ಒಪ್ಪಿಗೆ ಮೇರೆಗೆ ಜ. 18ರಂದು ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಮಾತನಾಡಿ, ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂದು ಬೆಳಗ್ಗೆ 9:00ಕ್ಕೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಡೆಯುವ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾÂಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳುಕುಣಿತ ಅಥವಾ ಇನ್ನಿತರೆ
ಒಂದು ನುರಿತ ಕಲಾವಿದರ ತಂಡ ನಿಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ನಿರ್ದೇಶಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ
ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮದ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ನಾಗಪ್ಪ, ಸಮಾಜದ ಮುಖಂಡ ಚಂದಪ್ಪ ಧೋತ್ರೆ, ಹಣಮಂತ ವಲ್ಯಾಪುರ, ಗೋಪಾಲ ಕಣೇಕಲ್, ಚಂದಪ್ಪ
ಕಿಲ್ಲನಕೇರಾ, ಹಣಮಂತ ಬಳಿಚಕ್ರ, ಲಘುಮಣ್ಣ ಮುಂಡರಗಿ, ನಾಗಲಿಂಗಪ್ಪ ಹೊನಿಗೇರಾ, ಬಾಲರಾಜ, ಕೊಟ್ರಪ್ಪ
ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.