ಜಿಹಾದಿ ದಾಳಿ ಸಂಚು ವಿಫಲ; ಬೆಂಗಳೂರಿನ ಮೂವರು ಸೇರಿ 8 ಆರೋಪಿಗಳ ಬಂಧನ
ಆರೋಪಿಗಳನ್ನು ಚೆನ್ನೈ ಕೋರ್ಟ್ ಗೆ ಹಾಜರುಪಡಿಸಿದ್ದು, ಎಂಟು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ
Team Udayavani, Jan 9, 2020, 11:58 AM IST
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚನ್ನು ಇತ್ತೀಚೆಗೆ ತಮಿಳುನಾಡು ಪೊಲೀಸರು ವಿಫಲಗೊಳಿಸಿದ್ದು, ಪ್ರಕರಣದಲ್ಲಿ ತಮಿಳುನಾಡಿನ ಐವರು ಹಾಗೂ ಬೆಂಗಳೂರಿನ ಮೂವರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಆರೋಪಿಗಳನ್ನು ಚೆನ್ನೈ ಕೋರ್ಟ್ ಗೆ ಹಾಜರುಪಡಿಸಿದ್ದು, ಎಂಟು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ ಎಂದು ವರದಿ ವಿವರಿಸಿದೆ.
ಬೆಂಗಳೂರಿನ ಮೊಹಮ್ಮದ್ ಹನೀಫ್ ಖಾನ್ (29ವರ್ಷ), ಇಮ್ರಾನ್ ಖಾನ್ (32ವರ್ಷ) ಮತ್ತು ಮೊಹಮ್ಮದ್ ಝೈದ್ (24ವರ್ಷ)ನನ್ನು ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲಾ ಜಿಹಾದಿ ದಾಳಿ ನಡೆಸಲು ಸಂಚು ರೂಪಿಸಿದ್ದು ಕರ್ನಾಟಕ ಪೊಲೀಸರು ಹಾಗೂ ಇತರ ಗುಪ್ತಚರ ಇಲಾಖೆ ಸಹಾಯದೊಂದಿಗೆ ತಮಿಳುನಾಡು ಕ್ಯೂ ಬ್ರ್ಯಾಂಚ್ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಮೂಲಭೂತವಾದಿ ಜಿಹಾದಿಗಳು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಂಚು ರೂಪಿಸಿರುವ ಬಗ್ಗೆ ತಮಿಳುನಾಡು ಗುಪ್ತಚರ ವಿಭಾಗ ಮಾಹಿತಿಯನ್ನು ಪಡೆದಿತ್ತು. ಈ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ಎಂಟು ಆರೋಪಿಗಳನ್ನು ಸೆರೆ ಹಿಡಿಯಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.