ಚರಂಡಿ ಸ್ವಚ್ಛತೆ -ಕಸ ವಿಲೇವಾರಿಗೆ ಆದ್ಯತೆ ನೀಡಿ

ಡಿವೈಡರ್‌-ಪಾದಚಾರಿ ರಸ್ತೆ ನಿರ್ಮಿಸಿಸಿದ್ದ ಸರೋವರ ಕೆರೆ ಪ್ರವಾಸಿ ತಾಣವನ್ನಾಗಿ ಮಾಡಿ

Team Udayavani, Jan 9, 2020, 1:15 PM IST

9-January-14

ಮಹಾಲಿಂಗಪುರ: ಅಭಿವೃದ್ಧಿ ಕಾರ್ಯಗಳಿಗಿಂತ ಪಟ್ಟಣದ ರಸ್ತೆ, ಚರಂಡಿಗಳ ಸ್ವಚ್ಛತೆ, ಸಮರ್ಪಕ ಕಸ ವಿಲೇವಾರಿಗೆ ಪುರಸಭೆ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಬುಧವಾರ ನಡೆದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು. ಪುರಸಭೆ ಸದಸ್ಯ ಪ್ರಹ್ಲಾದ ಸಣ್ಣಕ್ಕಿ ಮಾತನಾಡಿ, ಪಟ್ಟಣದ ಚನ್ನಮ್ಮ ವೃತ್ತದಿಂದ ರಬಕವಿ ರಸ್ತೆಯ ಮಹಾದ್ವಾರದವರೆಗೆ ಮತ್ತು ಬಸವ ವೃತ್ತದಿಂದ ಎಪಿಎಂಸಿ ಮಹಾದ್ವಾರದವರೆಗೆ ಡಬಲ್‌ ರಸ್ತೆ, ಡಿವೈಡರ್‌, ಪಾದಚಾರಿ ರಸ್ತೆ ನಿರ್ಮಿಸಬೇಕು ಎಂದರು.

ಮನೋಹರ ಶಿರೋಳ ಮಾತನಾಡಿ, ನಗರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದರು. ಪುರಸಭೆ ಸದಸ್ಯ ಬಸವರಾಜ ಹಿಟ್ಟಿನಮಠ ಮಾತನಾಡಿ, ಪಟ್ಟಣದ ಸಿದ್ದಸರೋವರ ಕೆರೆಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿ, ಅದನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಹೇಳಿದರು.

ಸಿದ್ದು ಶಿರೋಳ ಮಾತನಾಡಿ, ಹಿಂದೂ ಸ್ಮಶಾನ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು. ರಾಜೇಶ ಭಾವಿಕಟ್ಟಿ ಮಾತನಾಡಿ, ಗಾಂಧಿ ವೃತ್ತದಿಂದ ಚನಗೀರೇಶ್ವರ ದೇವಸ್ಥಾನ, ವಿನಾಯಕ ಹೋಟೆಲ್‌ನಿಂದ ಮಹಾಲಿಂಗೇಶ್ವರ ದೇವಸ್ಥಾನವರೆಗೆ ಟ್ರಾಫಿಕ್‌ ಸಮಸ್ಯೆಯಾಗುತ್ತಿರುವುದರಿಂದ ಅತಿಕ್ರಮಣ ತೆರವುಗೊಳಿಸಿ ಡಬಲ್‌ ರಸ್ತೆ ಮಾಡಬೇಕು ಎಂದರು.

ಬಸನಗೌಡ ಗೋಲಪ್ಪನವರ ಮಾತನಾಡಿ, ಸಂತೆಯನ್ನು ಡಬಲ್‌ ರಸ್ತೆಯ ಮುಖ್ಯಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದರು. ಜೆಡಿಎಸ್‌ ಮುಖಂಡ ನಿಂಗಪ್ಪ ಬಾಳಿಕಾಯಿ ಮಾತನಾಡಿ, ಕೆರೆ ಮತ್ತು ಬಸ್‌ ನಿಲ್ದಾಣ ಪಕ್ಕದ ಪುರಸಭೆಯ ನಾಲ್ಕು ಎಕರೆ ಜಾಗೆಯು ಅತಿಕ್ರಮಣವಾಗುತ್ತಿದೆ. ತಕ್ಷಣ ಜಾಗದ ಸರ್ವೇ ಮಾಡಿ ಕಾಂಪೌಂಡ್‌ ಹಾಕಿ. ಬಸ್‌ ನಿಲ್ದಾಣದ ಕೆಲಸ ಮುಕ್ತಾಯಗೊಳ್ಳುವವರೆಗೆ ಬಸ್‌ ನಿಲುಗಡೆಗೆ ಅವಕಾಶ ನೀಡಲು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ಶಿವಲಿಂಗ ಘಂಟಿ ಮಾತನಾಡಿ, ಕರ ಪಾವತಿಸಲು ಬಂದ ಸಾರ್ವಜನಿಕರಿಗೆ ಸರಿಯಾಗಿ ಚಲನ್‌ ಮಾಡಿಕೊಡುವುದಿಲ್ಲ, ಹೀಗಾದರೆ ಕರ ವಸೂಲಿ ಮತ್ತು ಸ್ಥಳೀಯ ಸಂಪನ್ಮೂಲ ಕ್ರೋಢಿಕರಣ ಹೇಗೆ ಸಾಧ್ಯ ಎಂದರು. ಮಾಜಿ ಅಧ್ಯಕ್ಷ ಜಿ.ಎಸ್‌.ಗೊಂಬಿ ಮಾತನಾಡಿ ಮುಂದಿನ ಎರಡು ವರ್ಷಗಳ ಕಾಲ ಪುರಸಭೆಯ ಯಾವುದೇ ಕರಗಳನ್ನು ಹೆಚ್ಚಿಸದೇ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದರು. ಯಲ್ಲನಗೌಡ ಪಾಟೀಲ, ಮಹಾಲಿಂಗಪ್ಪ ಕುಳ್ಳೋಳ್ಳಿ, ಚನಬಸು ಹುರಕಡ್ಲಿ, ಮಹಾಲಿಂಗಪ್ಪ ಕೋಳಿಗುಡ್ಡ, ಶಿವಾನಂದ ಅಂಗಡಿ, ಬಿ.ಎಂ.ಯಾದವಾಡ, ಭೀಮಸಿ ಗೌಂಡಿ, ವಿರೂಪಾಕ್ಷ ಬಾಟ, ಮಹಾಲಿಂಗಪ್ಪ ಮುದ್ದಾಪುರ ಮಾತನಾಡಿದರು. ಮುಖ್ಯಾ ಧಿಕಾರಿ ಬಾಬುರಾವ್‌ ಕಮತಗಿ, ಶ್ರೀಮಂತ ಹಳ್ಳಿ, ಈರಪ್ಪ ದಿನ್ನಿಮನಿ, ಸವಿತಾ ಕೋಳಿಗುಡ್ಡ, ರಾಜು ಗೌಡಪ್ಪಗೋಳ, ಸುನೀಲಗೌಡ ಪಾಟೀಲ, ವಿ.ಜಿ. ಕುಲಕರ್ಣಿ, ಎಸ್‌.ಎನ್‌. ಪಾಟೀಲ, ಬಿ.ವೈ. ಮರದಿ ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.