ಕಾಂಗ್ರೆಸ್‌ನಿಂದ ಪೌರತ್ವ ಕಾಯ್ದೆ ಗೊಂದಲ ಸೃಷ್ಟಿ
ಕಾಯಿದೆ ತಿದ್ದುಪಡಿಯಿಂದ ಯಾರಿಗೂ ಇಲ್ಲತೊಂದರೆಬಿಜೆಪಿಯಿಂದ ಮನೆ ಮನೆಗೆ ಜಾಗೃತಿ
Team Udayavani, Jan 9, 2020, 1:41 PM IST
ಅಕ್ಕಿಆಲೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಸಂಚಾಲಕ ಡಾ| ಸುನೀಲ ಹಿರೇಮಠ ಹೇಳಿದರು.
ತಿಳವಳ್ಳಿ ಗ್ರಾಮದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಯಿದೆಯ ತಿದ್ದುಪಡಿಯಿಂದಾಗಿ ದೇಶದ ಯಾರೊಬ್ಬರಿಗೂ ತೊಂದರೆ ಯಾಗುವುದಿಲ್ಲ. ಈ ಕುರಿತು ಕಾಂಗ್ರೆಸ್ ವಿನಾಕಾರಣ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಜನರ ದಿಕ್ಕು ತಪ್ಪಿಸಿ ತನ್ನ ರಾಜಕೀಯದ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ಮಾತಿಗೆ ಯಾರೂ ಕಿವಿಗೊಡಬಾರದು. ಈ ಹಿಂದೆಯೂ ದೇಶದ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಈ ಕಾಯ್ದೆ ಜಾರಿಗೆ ತಂದಿದ್ದರು. ಆದರೆ, ಯಾವುದೇ ರೀತಿಯ ವಿರೋಧವೂ ವ್ಯಕ್ತವಾಗಿರಲಿಲ್ಲ. ದೇಶದಲ್ಲಿ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ಬಿಜೆಪಿ ಮನೆ-ಮನೆಗೆ ತೆರಳಿ ಕಾಯಿದೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.
ಮುಖಂಡರಾದ ಶಿವಲಿಂಗಪ್ಪ ತಲ್ಲೂರು ಮಾತನಾಡಿ, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರಲ್ಲಿ ವಾಸ್ತವ ಸಂಗತಿಗಳನ್ನು ತಿರುಚಿ ಹೇಳುತ್ತಿದೆ. ಕಾಯಿದೆ ದೇಶದ ವಾಸಿಗಳಿಗೆ
ಯಾವುದೇ ರೀತಿಯಲ್ಲಿ ತೊಂದರೆ ಮಾಡದು ಎಂದರು.
ನಿಂಗಪ್ಪ ಗೊಬ್ಬೇರ, ಅಪ್ಪು ಶೆಟ್ಟರ, ಪರಶುರಾಮ ಗೌಳಿ,
ಭರಮಣ್ಣ ಕುರುಬರ, ಶಿವಯೋಗಿ ವಡೆಯರ, ದಯಾನಂದ ಹಾವೇರಿ, ಮಾರುತಿ ಈಳಗೇರ, ಕುಮಾರ ಲಕ್ಮೋಜಿ, ಸುನೀಲ ಬಾರ್ಕಿ, ಗಿರೀಶ ಸಜ್ಜನಶೆಟ್ಟರ, ಮಧುಕರ ಹುನಗುಂದ, ನಿಂಬಣ್ಣ ಜಾಡರ, ಚೌಡಪ್ಪ ಶಿರಿಹಳ್ಳಿ, ಪರಶುರಾಮ ಸವಣೂರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.