ನೌಕರರ ಶ್ರೇಯೋಭಿವೃದ್ಧಿಗೆ ಬದ್ಧ

ಸರ್ಕಾರಿ ನೌಕರರ ಸಂಘಕ್ಕೆ ಪುರಸಭೆಯಿಂದ ನಿವೇಶನ ಮಂಜೂರು: ನಾಡಗೌಡ

Team Udayavani, Jan 9, 2020, 4:59 PM IST

9-January-26

ಗೊರೇಬಾಳ: ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನೌಕರರ ಶ್ರೇಯೋಭಿವೃದ್ಧಿಗೆ ತಾವು ಸದಾ ಶ್ರಮಿಸುವುದಾಗಿ ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಸಿಂಧನೂರು ನಗರದ ತಾಲೂಕು ಪಂಚಾಯಿತಿ ಆವರಣದ ಕಟ್ಟಡದಲ್ಲಿ ಆರಂಭಿಸಿದ ತಾಲೂಕು ಸರ್ಕಾರಿ ನೌಕರರ ತಾತ್ಕಾಲಿಕ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಗರಸಭೆಯಿಂದ ನಿವೇಶನ ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದರು. ನೌಕರರ ಸಂಘದ ಅಧ್ಯಕ್ಷರು ಈಗಾಗಲೇ ತಮಗೆ ಎನ್‌ಪಿಎಸ್‌ ರದ್ದುಗೊಳಿಸಿ, ಒಪಿಎಸ್‌ ಜಾರಿಗೊಳಿಸಲು ಒತ್ತಾಯಿಸಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸದನದಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಸರ್ಕಾರಿ ನೌಕರರು ಸ್ವಂತ ಕಟ್ಟಡವಿಲ್ಲದೆ ಸಭೆ, ಸಮಾರಂಭಗಳನ್ನು ನಡೆಸಲು ತೊಂದರೆ ಆಗಿತ್ತು. ತಾವು ಸಂಸದನಿದ್ದಾಗ ನೌಕರರ ಸಂಘಕ್ಕೆ ಕಟ್ಟಡ ಮಂಜೂರು ಮಾಡಿಸಲು ಪ್ರಯತ್ನ ನಡೆಸಿದ್ದೆ. ಈಗ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ ಅವರು ತಾಪಂ ಅಧ್ಯಕ್ಷರ ಹಾಗೂ ಇಒ ಅವರ ಸಹಕಾರದಿಂದ ತಾತ್ಕಾಲಿಕವಾಗಿ ತಾಪಂ ಆವರಣದಲ್ಲಿ ನೌಕರರ ಕಚೇರಿ ಆರಂಭಿಸಿರುವುದು ಸ್ವಾಗತಾರ್ಹವಾಗಿದೆ.

ಸಂಘದ ತಾಲೂಕು ಘಟಕದಿಂದ ಸಮಾಜಮುಖೀ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಒತ್ತು ನೀಡಬೇಕು. ತಾವೂ ಕೂಡ ಸಹಾಯ, ಸಹಕಾರ ಸಲ್ಲಿಸುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್‌ ಮುಖಂಡ ಅಮರೇಶ ಗುರಿಕಾರ ವಕೀಲ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಮಾತನಾಡಿ, ಸಂಘದ ಬೆಳೆವಣಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಸಂಘದ ಹೆಸರಿನಲ್ಲಿ ನಿವೇಶನ ಮಂಜೂರಾಗಿದೆ. ಸಂಘದ ಪದಾಧಿಕಾರಿಗಳು ಹಾಗೂ ಮಾತೃ ಇಲಾಖೆಗಳ ಎಲ್ಲ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ತಾಲೂಕಿನ ಎಲ್ಲ ಸರ್ಕಾರಿ ನೌಕರರಿಗೆ ಒಂದು ದಿನದ ವೇತನ ನೀಡಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ವಿನಂತಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್‌ಪಾಷಾ ಮೂಲಿಮನಿ, ತಹಶೀಲ್ದಾರ್‌ ಶಿವಾನಂದ ಸಾಗರ, ತಾಪಂ. ಇಒ ಬಾಬುರಾಠೊಡ್‌, ನೌಕರರ ಸಂಘದ ಪದಾಧಿಕಾರಿಗಳಾದ ಬಸವರಾಜ ವಿ., ಭರತಕುಮಾರ, ಶಶಿಧರ ಹಳ್ಳಿ, ಶಿವುಕುಮಾರ
ಸಗರಮಠ, ಹನುಮಂತಪ್ಪ ನಾಯಕ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.