ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ
ಅನುದಾನ ತಡೆ ಹಿಡಿದು ಸಿಎಂ ಬಿಎಸ್‌ವೈ ಸೇಡಿನ ರಾಜಕಾರಣ: ಶಾಸಕ ಕಂದಕೂರ
Team Udayavani, Jan 9, 2020, 5:08 PM IST
ಸೈದಾಪುರ: ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.
ಸಮೀಪದ ಮಾಧ್ವಾರ ಗ್ರಾಮದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 2019-20ನೇ ಸಾಲಿನ 3054 ಸಿ.ಎಂ.ಜಿ.ಎಸ್.ವೈ ಯೋಜನೆಯಡಿ ಸುಮಾರು 92 ಲಕ್ಷ ರೂ. ವೆಚ್ಚದ 3.3ಕಿ.ಮೀಟರ್ ರಸ್ತೆ ನವೀಕರಣ ಹಾಗೂ ರೂ. 10 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಕೆ.ಕೆ.ಆರ್.ಡಿ.ಬಿ ಮೈಕ್ರೋ ಯೋಜನೆಯಡಿ ನಾರಾಯಣಪೇಟ ಮುಖ್ಯ ರಸ್ತೆಯಿಂದ ತೋರಣತಿಪ್ಪ ಗ್ರಾಮದ ವರೆಗಿನ 50 ಲಕ್ಷ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಲ್ಯಾಣ ಕರ್ನಾಟಕದಲ್ಲಿಯೇ ಗುರುಮಠಕಲ್ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅನುದಾನ ತಡೆ ಹಿಡಿದು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತಾಪಂ ಸದಸ್ಯೆ ಸರೋಜಮ್ಮ ಕಲಾಲ್, ಮಾಧ್ವಾರ ಗ್ರಾಪಂ ಅಧ್ಯಕ್ಷೆ ಶಕುಂತಲಾ, ಯಲಸತ್ತಿ ಗ್ರಾಪಂ ಅಧ್ಯಕ್ಷ ಆಂಜನೇಯ, ಭೋಜಣ್ಣಗೌಡ ಯಡ್ಢಳ್ಳಿ, ಚಿದಾನಂದಪ್ಪ ಕಾಳೆಬೆಳಗುಂದಿ, ಶಂಕರಗೌಡ ಯಲಸತ್ತಿ, ಎಇಇ ಸಿ.ಎಂ. ಪಾಟೀಲ, ಆನಂದರೆಡ್ಡಿ ವಡವಟ್, ರಾಮಲಿಂಗಪ್ಪ ಮಾಧ್ವಾರ, ಪರ್ವತರೆಡ್ಡಿ, ಡಾ| ಬಾಬು, ಶಂಕರಪ್ಪಗೌಡ, ಬನ್ನಪ್ಪಗೌಡ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.