ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಖಜಾಂಚಿಯೇ: ಗೋವಿಂದ್ ಕಾರಜೋಳ ಪ್ರಶ್ನೆ
Team Udayavani, Jan 10, 2020, 12:02 PM IST
ಕಲಬುರಗಿ: ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದ್ದರಿಂದ ರಾಜ್ಯ ಸರ್ಕಾರಕ್ಕೆ ಕಡಿಮೆ ನೆರೆ ಪ್ರವಾಹ ಪರಿಹಾರ ಧನ ನೀಡಿದೆ ಎಂದು ಹೇಳುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರದ ಖಜಾಂಚಿಯೇ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಖಾರವಾಗಿ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 14 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾದ ಅನುಭವ ಹೊಂದಿದ್ದಾರೆ. ಸ್ವಾತಂತ್ರ್ಯ ಬಂದ ನಂತರದಿಂದ ಯಾವ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂಬುದನ್ನು ಲೆಕ್ಕ ಮಾಡಿ ಮಾತನಾಡಲಿ. ಆಗ ಅವರು ನಿಜವಾದ ನಾಯಕರಾಗುತ್ತಾರೆ ಎಂದು ತಿರುಗೇಟು ನೀಡಿದರು.
13-14 ರಾಜ್ಯಗಳಲ್ಲಿ ನೆರೆ ಪ್ರವಾಹ ಇದೆ. ನನಗೆ ಮೂವತ್ತು ವರ್ಷಗಳ ರಾಜಕೀಯ ಅನುಭವ ಇದೆ. ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮೋದಿ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎಂದು ಸಮರ್ಥಿಸಿಕೊಂಡರು. ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಕಾರಜೋಳ, ವಿಸ್ತರಣೆ ಹೈಕಮಾಂಡ್ ಗೆ ಬಿಟ್ಟಿದ್ದು, ಸಂಪುಟದಿಂದ ಕೈಬಿಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.