ದೇವಸ್ಥಾನದ ಬಳಿ ಮಾಂಸದಂಗಡಿ ತೆರವುಗೊಳಿಸಿ
Team Udayavani, Jan 10, 2020, 2:48 PM IST
ನಾಗಮಂಗಲ: ಪ್ರಸಿದ್ಧ ದೇವಸ್ಥಾನದ ಬಳಿ ಕೋಳಿ ಮಾಂಸದ ಅಂಗಡಿ ತೆರವಿಗಾಗಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಬಿಂಡಿಗನವಿಲೆಯಲ್ಲಿ ನಡೆದಿದೆ.
ಬಿಂಡಿಗನವಿಲೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಚನ್ನಕೇಶವ ಮತ್ತು ಗರುಡ ದೇವಸ್ಥಾನವಿದೆ. ಪ್ರತಿನಿತ್ಯ ಪ್ರವಾಸಿಗರು, ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ದೇವಸ್ಥಾನ ಸುತ್ತಮುತ್ತ ಕೋಳಿ ಮಾಂಸದ ರೆಕ್ಕೆಪುಕ್ಕ, ಕೊಳಚೆ ಬಿದ್ದು ದುರ್ನಾತ ಬೀರುತ್ತಿದೆ. ಭಕ್ತರು ಮೂಗು ಮುಚ್ಚಿಕೊಂಡು ದೇವರ ದರ್ಶನ ಮಾಡಬೇಕಾಗಿದೆ.
ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ನಡೆದ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವೂ ಆಗಿತ್ತು. ಗ್ರಾಮದ ಸ್ವತ್ಛತೆ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದಗ್ರಾಮದ ಹೊರವಲಯದ ಕೋಡಿ ಹಳ್ಳದ ಸಮೀಪ ಸ್ಥಳ ನಿಗದಿಪಡಿಸಿತ್ತು. ಆದರೆ ಮಾಂಸದಂಗಡಿ ವ್ಯಾಪಾರಿಗಳು ಅಲ್ಲಿ ವ್ಯಾಪಾರ ಮಾಡದೆ ದೇವಸ್ಥಾನದ ಬಳಿಯೇ ಮತ್ತೆ ಮಾಂಸ ಮಾರಾಟ ಮಾಡುತ್ತಿದ್ದಾರೆ.
ಅಶುದ್ಧ ವಾತಾವರಣದಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಾಂಸದಂಗಡಿ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಪ್ರತಭಟನೆಯಲ್ಲಿ ಬಿಂಡಿಗನವಿಲೆ ಸರಸ್ವತಿ, ದೊರೆಸ್ವಾಮಿ, ನಾಗಮ್ಮ, ಶ್ರೀನಾಥ್, ಮೆಡಿಕಲ್ ಸುರೇಶ್, ಮಂಗರವಳ್ಳಿ ಮಂಜೇಗೌಡ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.