ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌


Team Udayavani, Jan 11, 2020, 3:07 AM IST

ashwath-narayan

ಬೆಂಗಳೂರು: ಶಕ್ತಿ, ದೃಢ ಸಂಕಲ್ಪ, ಛಲ, ಪ್ರಾಮಾಣಿಕತೆ, ಸೇವೆ ಮೂಲಕ ಯಶಸ್ಸು, ಸಾರ್ಥಕತೆ ಸಾಧಿಸುವ ವಿಧಾನವನ್ನು ತಮ್ಮ ಜೀವನ, ಸಂದೇಶದ ಮೂಲಕ ಸಾರಿದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಜ.12ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ 8 ರಿಂದ 10 ಸಾವಿರ ಯುವಜನತೆ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಯುವ ಸಾಧಕರಿಗೆ ಸನ್ಮಾನ ಕೂಡ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ 1,09,060 ಪದವೀಧರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರೂ. ಕಾಯ್ದಿರಿಸಲಾಗಿದ್ದು, ಎಚ್‌ಪಿ, ಏಸರ್‌ ಕಂಪೆನಿಯ ಲ್ಯಾಪ್‌ಟಾಪ್‌ ನೀಡಲಾಗುವುದು. ವಿವೇಕಾ ನಂದ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಾಂಕೇತಿ ಕವಾಗಿ ಕೆಲವರಿಗೆ ಲ್ಯಾಪ್‌ಟಾಪ್‌ ವಿತರಿಸಿ ನಂತರ ಹಂತ ಹಂತವಾಗಿ ವಿತರಿಸಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಸಂವಹನದ ಕೊರತೆಯಿಂದ ಸೂಕ್ತ ಶಿಕ್ಷಣ, ಉದ್ಯೋಗ ಪಡೆಯುವಲ್ಲಿ ಅಡೆತಡೆಗಳಾಗುತ್ತಿವೆ. ಹಾಗಾಗಿ ಪ್ರಾಥಮಿಕ ಹಂತದಲ್ಲೇ ಈ ಬಗ್ಗೆ ಸ್ಪಷ್ಟ ಚಿತ್ರಣ ನೀಡಬೇಕಿದೆ. ಎಂಟನೇ ತರಗತಿಯಲ್ಲೇ ವಿದ್ಯಾರ್ಥಿಗಳು ಯಾವ ಕೋರ್ಸ್‌, ಉದ್ಯೋಗಕ್ಕೆ ಪ್ರಯತ್ನಿಸಬೇಕು ಎಂಬ ಬಗ್ಗೆ ಕೌನ್ಸೆಲಿಂಗ್‌ ನೀಡುವುದು, ಪರೀಕ್ಷಾ ವ್ಯವಸ್ಥೆಯಿಂದ ಸೂಕ್ತ ಮಾರ್ಗದರ್ಶನ ಕೊಡಿಸಲು ಚಿಂತಿಸಲಾಗಿದೆ. ಇದರಿಂದ ಮಕ್ಕಳು ಪ್ರೌಢ ಶಾಲಾ ಹಂತದಲ್ಲಿ ನಿರ್ದಿಷ್ಟ ಗುರಿ ಹೊಂದಿ ಆ ನಿಟ್ಟಿನಲ್ಲಿ ಮುಂದುವರಿಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಯುವ ಸಬಲೀಕರಣ ಕೇಂದ್ರ: ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರದಲ್ಲಿ ಒಂದು ಯುವ ಸಬಲೀಕರಣ ಕೇಂದ್ರ ಆರಂಭಿಸಲು ಚಿಂತಿಸಲಾಗಿದೆ. ಪ್ರಾರಂಭದಲ್ಲಿ ಜಿಲ್ಲೆಗೆ ಒಂದರಂತೆ 30 ಲೀಡ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ 21 ಇಲಾಖೆಗಳ ಪ್ರಮುಖ ಅಧಿಕಾರಿಗಳನ್ನು ಒಳಗೊಂಡ ಸಮಿತಿ ಮಾರ್ಗದರ್ಶನ ದಲ್ಲಿ ಯುವ ಸಬಲೀಕರಣ ಕೇಂದ್ರ ಸ್ಥಾಪಿಸಲಾಗುವುದು.

ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾತ್ರವಲ್ಲದೆ, ಆಸಕ್ತ ಯುವಜನತೆಗೆ ಉದ್ಯೋಗಾವಕಾಶ, ಉನ್ನತ ಶಿಕ್ಷಣ ಅವಕಾಶ, ವಿದ್ಯಾರ್ಥಿ ವೇತನ, ಸರ್ಕಾರದ ಯೋಜನೆಗಳು, ವಸತಿ ನಿಲಯಗಳು, ಉದ್ಯೋಗ ಸಿದ್ಧತೆಗೆ ಅಗತ್ಯ ಮಾಹಿತಿ ಸಿಗುವ ವ್ಯವಸ್ಥೆ ಕಲ್ಪಿಸಲಾಗು ವುದು ಎಂದರು. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ಪ್ರದೀಪ್‌ ಇತರರು ಉಪಸ್ಥಿತರಿದ್ದರು.

ಶೇ.106 ಉದ್ಯೋಗಾವಕಾಶ ಪ್ರಮಾಣ
ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾವಕಾಶ ಪ್ರಮಾಣವು ಶೇ. 106 ರಷ್ಟಿದೆ. ರಾಜ್ಯದಲ್ಲಿ ನಾನಾ ಹಂತದಲ್ಲಿ ಉತ್ತೀರ್ಣರಾಗುತ್ತಿರುವ ಸಂಖ್ಯೆಗಿಂತಲೂ ಹೆಚ್ಚು ಉದ್ಯೋಗಾವಕಾಶವಿರುವ ರಾಜ್ಯವೆಂದರೆ ಅದು ಕರ್ನಾಟಕ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ರಾಜ್ಯದಲ್ಲಿ ಸಂಘಟಿತ ವಲಯದಲ್ಲಿ ಉದ್ಯೋಗಾ ವಕಾಶ ಶೇ.106ರಷ್ಟಿದೆ. ಪದವೀಧರರಾಗುತ್ತಿರುವ ಸಂಖ್ಯೆ 5.50 ಲಕ್ಷ ಇದ್ದರೆ, 5.75 ಲಕ್ಷ ಉದ್ಯೋಗಾ ವಕಾಶಗಳಿವೆ. ಇದು ಸಂಘಟಿತ ವಲಯದ ಮಾಹಿತಿಯಾದರೆ ಇನ್ನು ಅಸಂಘಟಿತ ವಲಯದಲ್ಲಿ ಎಷ್ಟು ಉದ್ಯೋಗಾವಕಾಶಗಳಿರಬಹುದು. ರಾಜ್ಯದಲ್ಲಿ ಉದ್ಯೋಗ ಅವಕಾಶಕ್ಕಿಂತಲೂ ಪೂರೈಕೆ ಕಡಿಮೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಅದರ ಬಗ್ಗೆ ಮಾಹಿತಿ, ಸಂವಹನದ ಕೊರತೆ ಹೆಚ್ಚಾಗಿದೆ.

ಪದವಿ ಶಿಕ್ಷಣ ಮುಗಿಸಿದ ಮೇಲೆ ಉದ್ಯೋಗ ಅರಸುವುದಕ್ಕಿಂತ ವ್ಯಾಸಂಗ ಮಾಡುವಾಗಲೇ ಉದ್ಯೋಗಾವಕಾಶ ಎಲ್ಲಿದೆ ಎಂಬುದನ್ನು ತಿಳಿದುಕೊಳ್ಳುವಲ್ಲಿ ಸಂವಹನದ ಕೊರತೆ ಇದೆ. ಇದು ವಿದ್ಯಾರ್ಥಿಗಳಲ್ಲಿ ಅಂಜಿಕೆಯ ಭಾವನೆ ಮೂಡಿಸಿ ಆತ್ಮವಿಶ್ವಾಸವನ್ನು ಕುಂದಿಸುತ್ತದೆ. ಇದನ್ನು ನಿವಾರಿಸಿ ಪರಿಣಾಮಕಾರಿ ಸಂವಹನ ವ್ಯವಸ್ಥೆ ಕಲ್ಪಿಸಲು ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಲಿಕಾ ಹಂತದಲ್ಲಿ ಉದ್ಯೋಗಾವಕಾಶ, ಕಂಪೆನಿಗಳೊಂದಿಗೆ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಆದ್ಯತೆ ಕೊಡಲಾಗುವುದು ಎಂದು ಹೇಳಿದರು.

ಸಮಗ್ರ ಮಾಹಿತಿ ವೇದಿಕೆ: ದೇಶದಲ್ಲಿ ಆರ್ಥಿಕ ಹಿಂಜರಿಕೆ ಸ್ಥಿತಿಯಿದ್ದರೂ ಹೆಚ್ಚು ಉದ್ಯೋಗಾವಕಾಶವಿದ್ದರೆ ಈ ಬಗ್ಗೆ ಆಕಾಂಕ್ಷಿಗಳಿಗೆ ಮಾಹಿತಿ ನೀಡಲು ಸೂಕ್ತ ವ್ಯವಸ್ಥೆ ಕಲ್ಪಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಶ್ವತ್ಥ ನಾರಾಯಣ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೋಡೆಲ್‌ ಅಧಿಕಾರಿಗಳಿದ್ದರೂ ಪರಿಣಾಮಕಾರಿ ಸಂವಹನವಿಲ್ಲದ ಕಾರಣ ಅಡೆಗಡೆಗಳಾಗುತ್ತಿದೆ. ಆ ಹಿನ್ನೆಲೆಯಲ್ಲಿ ಜ. 12ರಂದು ವಿಶೇಷ ವೇದಿಕೆಯೊಂದನ್ನು ಉದ್ಘಾಟಿಸಲಾಗುತ್ತಿದೆ. ಕೌಶಲ್ಯಾಭಿವೃದ್ಧಿ, ಉದ್ಯೋಗ ವಿನಿಮಯ, ಕ್ಷೇತ್ರವಾರು ಉದ್ಯೋಗಾವಕಾಶ ವಿವರ ಒಂದೇ ಕಡೆ ಸಾರ್ವಜನಿಕರಿಗೂ ಸಿಗುವ ವ್ಯವಸ್ಥೆ ತರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಕಲಿಕಾ ಹಂತದಲ್ಲೇ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಸಿದ್ಧರಾಗಲು ಅನುಕೂಲವಾಗಲಿದೆ ಎಂದರು.

ಕೆಲ ಬ್ಯಾಂಕ್‌ಗಳಲ್ಲಿ ಸೌಲ ಸೌಲಭ್ಯವಿದ್ದು, ಆಯ್ದ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಶೇ.90 ಸಬ್ಸಿಡಿ ಕೂಡ ಇದೆ. ಆದರೆ ಸಂವಹನ ಕೊರತೆಯಿಂದ ಬಹಳಷ್ಟು ಮಂದಿ ಬಳಸಿಕೊಳ್ಳುತ್ತಿಲ್ಲ. ಜತೆಗೆ ಸ್ಟಾಂಟ್‌ ಅಪ್‌ ಇಂಡಿಯಾ, ಸ್ಟಾರ್ಟ್‌ ಅಪ್‌ ಇಂಡಿಯಾ, ಎಲಿವೇಟ್‌ 100 ಇತರೆ ಕಾರ್ಯಕ್ರಮಗಳಿಗೆ ಸಾಕಷ್ಟು ಆರ್ಥಿಕ ನೆರವು ಸಿಗುತ್ತಿದೆ. ಇದನ್ನೆಲ್ಲಾ ಬಳಸಿಕೊಂಡು ಉದ್ಯಮಶೀಲರನ್ನಾಗಿಸುವ ಪ್ರಯತ್ನ ಮಾಡಲಾಗುವುದು.
-ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.