ಪಿಡಿಒ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Jan 11, 2020, 11:50 AM IST
ಹುಬ್ಬಳ್ಳಿ: ರೇವಡಿಹಾಳ ಗ್ರಾಮದಲ್ಲಿ ಬಡವರಿಗೆ ಸೇರಬೇಕಾದ ಸರ್ಕಾರದ ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಹಕರಿಸಿದ ದೇವರಗುಡಿಹಾಳ ಪಿಡಿಒ ನಾಗರಾಜ ದೊಡ್ಡಮನಿ ಅಮಾನತು ಮಾಡಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ರೇವಡಿಹಾಳ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ರೇವಡಿಹಾಳ ಗ್ರಾಮದ ಬ್ಲಾಕ್ ನಂ. 24, 73, 84/1 ರಲ್ಲಿ 11 ಎಕರೆ 12 ಗುಂಟೆ ಜಮೀನಿನಲ್ಲಿ ಒಟ್ಟು 310 ಸರ್ಕಾರದ ನಿವೇಶನಗಳಲ್ಲಿ ಅನರ್ಹರು ಅಕ್ರಮವಾಗಿ ಕಟ್ಟಡ ಕಟ್ಟಲು ದೇವರಗುಡಿಹಾಳ ಗ್ರಾಪಂ ಪಿಡಿಒ ನಾಗರಾಜ ದೊಡ್ಡಮನಿ ಸಹಕರಿಸಿದ್ದಾರೆ. ರೇವಡಿಹಾಳ ಗ್ರಾಮದ ವಸತಿ ರಹಿತರ ಬದಲಾಗಿ ಅನ್ಯರಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.
ಸಾರ್ವಜನಿಕ ರಸ್ತೆ ಅತಿಕ್ರಮಿಸಿ ನಿಮಯ ಬಾಹಿರವಾಗಿ ಮನೆ ಕಟ್ಟಿಕೊಳ್ಳಲು ರೇವಡಿಹಾಳ ಗ್ರಾಮದ ಶಂಕ್ರಪ್ಪ ಪೂಜಾರ ಅವರಿಗೆ ದೇವರಗುಡಿಹಾಳ ಗ್ರಾಪಂ ಪಿಡಿಓ ಸಹಕರಿಸಿ ಅನ್ಯಾಯವೆಸಗಿದ್ದು, ಕೂಡಲೇ ಪಿಡಿಒ ಅಮಾನತು ಮಾಡಬೇಕೆಂದು ಒತ್ತಾಯಿಸಿದರು. ಅಕ್ರಮವಾಗಿ ಮನೆ ನಿರ್ಮಾಣದಲ್ಲಿ ಶಾಮೀಲಾದ ಶಂಕ್ರಪ್ಪ ಪೂಜಾರ ಅವರನ್ನು ಕೂಡಲೇ ಬಂ ಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ತಾಪಂ ಇಒ ಎಂ.ಎಂ. ಸವದತ್ತಿ ಅವರು ಬರುವವರೆಗೂ ಪ್ರತಿಭಟನೆ ನಡೆಸಿದರು. ಈರಪ್ಪ ಮಾದರ, ಗುರುಪಾದಯ್ಯ ಮುಪ್ಪಯ್ಯನವರ, ಚನ್ನಬಸಪ್ಪ ಭಜಂತ್ರಿ, ಸಿದ್ದಪ್ಪ ಹರಿಜನ,ಮಹಾದೇವಪ್ಪ ಹರಿಜನ, ಗುರುಸಿದ್ದ ಬೆಂಗೇರಿ, ಶಿವು ಹರಿಜನ, ಮರೇವ್ವ ಹರಿಜನ, ಫಕ್ಕಿರವ್ವ ಹರಿಜನ, ನಿಂಗವ್ವ ಹರಿಜನ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.