ಕಾಂಪೌಂಡ್‌ ಮೇಲೆ ಕಟ್ಟಡದ ಗೋಡೆ ನಿರ್ಮಾಣ


Team Udayavani, Jan 11, 2020, 4:21 PM IST

11-January-14

ಹೊಸನಗರ: ಪಟ್ಟಣದ ಹೊರ ವಲಯದ ಆರ್‌.ಕೆ. ರಸ್ತೆಯ ಅಂಗನವಾಡಿ ಕೇಂದ್ರದ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕೇಂದ್ರದ ಕಾಂಪೌಂಡ್‌ ಮೇಲೆಯೇ ಕಟ್ಟಲಾಗುತ್ತಿದೆ. ಇದು ಪೋಷಕರು ಮತ್ತು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಮಂಜೂರಾದ 2 ಲಕ್ಷ ರೂ. ವೆಚ್ಚದ ಹೆಚ್ಚುವರಿ ಕಟ್ಟಡವನ್ನು ಕೇಂದ್ರದ ಕಾಂಪೌಂಡ್‌ ಮೇಲೆ ಕಟ್ಟುತ್ತಿರುವುದು ತೀರಾ ಅವೈಜ್ಞಾನಿಕ ಕಾಮಗಾರಿ ಆಗಿದೆ. ಅಲ್ಲದೆ ಇಲ್ಲಿ ಇಲಾಖೆಯ ನೀತಿ- ನಿಯಮವನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಪೋಷಕರು ಆರೋಪಿಸುತ್ತಾರೆ.

ಪಟ್ಟಣದ ಆರ್‌.ಕೆ. ರಸ್ತೆಯಲ್ಲಿರುವ ಈ ಅಂಗನವಾಡಿ ಕೇಂದ್ರ ತೀರಾ ಚಿಕ್ಕದಾಗಿದೆ. ಇಲ್ಲಿ ಸದ್ಯ ಕೇವಲ ನಾಲ್ಕು ಮಕ್ಕಳು ದಾಖಲಾಗಿದ್ದಾರೆ. ಹಿಂದೆ ಹೆಚ್ಚು ಸಂಖ್ಯೆಯ ಮಕ್ಕಳು ಇಲ್ಲಿದ್ದರು. ಕೇಂದ್ರದಲ್ಲಿ ಅಡುಗೆಮನೆ ಮತ್ತು ಆಹಾರ ಸಾಮಗ್ರಿ ಸಂಗ್ರಹ ಕೊಠಡಿಗೆ ಪ್ರತ್ಯೇಕ ಕೊಠಡಿಗಳಿಲ್ಲದೆ ಒಂದೇ ಕೊಠಡಿಯಲ್ಲಿ ಮಕ್ಕಳ ಓದು, ಆಹಾರ ತಯಾರಿಕೆ, ಸಂಗ್ರಹದ ವ್ಯವಸ್ಥೆ ಇದೆ.

ಈಚೆಗೆ ಅಂಗನವಾಡಿ ಕೇಂದ್ರಕ್ಕೆ ಹೆಚ್ಚುವರಿ ಕೊಠಡಿ ಮಂಜೂರು ಆಗಿದೆ. ಅಂಗನವಾಡಿ ಕೇಂದ್ರ ಹಿಂದೆ ಇದ್ದ ಖಾಲಿ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಂಗನವಾಡಿ ಕೇಂದ್ರದ ಕಾಂಪೌಡ್‌ ಬಳಸಿ ಕಾಂಪೌಡ್‌ ಗೋಡೆಯ ಮೇಲೆಯೇ ಕಟ್ಟಡದ ಗೋಡೆಯನ್ನು ಕಟ್ಟುವ ಕೆಲಸ ಭರದಿಂದ ಸಾಗುತ್ತಿದೆ.

ಸರ್ಕಾರವು ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ಹೆಚ್ಚು ಪಾರದರ್ಶಕವಾಗಿರಬೇಕು. ಕಟ್ಟಡ ಗುಣಮಟ್ಟದಿಂದ ಕೂಡಿರಬೇಕು. ಭದ್ರತೆಯಲ್ಲಿ ಯಾವುದೇ ಕಾರಣಕ್ಕೂ ಲೋಪವಾಗಕೂಡದು ಎಂದು ಸ್ಪಷ್ಟ ಆದೇಶ ನೀಡಿದೆ. ಆದರೂ ಪಟ್ಟಣದ ಹೊರವಲಯದ ಜನಸಂದಣಿ ಇರುವ ಪ್ರದೇಶದಲ್ಲಿಯೇ ಅಂಗನವಾಡಿ ಕೇಂದ್ರದ ಕಾಮಗಾರಿ ಹಳ್ಳ ಹಿಡಿದಿರುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.