ಮಕ್ಕಳ ಕಲಿಕೆಗೆ ಶೈಕ್ಷಣಿಕ ಮೇಳಗಳು ಸಹಕಾರಿ: ಓಲೇಕಾರ


Team Udayavani, Jan 11, 2020, 5:16 PM IST

11-January-19

ಸುರಪುರ: ಮಕ್ಕಳ ಕಲಿಕೆ ಅಭಿವೃದ್ಧಿ ಪಡಿಸುವಲ್ಲಿ ಶೈಕ್ಷಣಿಕ ಮೇಳಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೇಕಾರ ಹೇಳಿದರು.

ತಾಲೂಕಿನ ದೇವಾಪುರ ಹರಿಜನ ವಾರ್ಡ್‌ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜಿ ಫೌಂಡೇಶನ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾಷಾ ಮತ್ತು ಗಣಿತ ಮೇಳದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಳಗಳಲ್ಲಿ ಮಕ್ಕಳ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದಂತೆ ಅನೇಕ ಪರಿಕಲ್ಪನೆಗಳನ್ನು ಉತ್ತಮವಾಗಿ ಅಭಿವ್ಯಕ್ತಿಸಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಎಪಿಎಫ್‌ನ ತಾಲೂಕು ಸಂಯೋಜಕ ಸುರೇಶಗೌಡ ಮಾತನಾಡಿ, ಈ ರೀತಿಯ ಶೈಕ್ಷಣಿಕ ಮೇಳಗಳನ್ನು ಗ್ರಾಮೀಣ ಭಾಗಗಳಲ್ಲಿ ಹಮ್ಮಿಕೊಳ್ಳುವುದರಿಂದ ಈ ಭಾಗದ ಮಕ್ಕಳಲ್ಲಿ ಉತ್ತಮವಾದ ಕಲಿಕೆ ಉಂಟು ಮಾಡುತ್ತದೆ. ಮಕ್ಕಳು ನಿರಂತರವಾಗಿ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಅನುಭವಾತ್ಮಕವಾಗಿ ಕಲಿತಿರುವುದಕ್ಕೆ ಈ ಮೇಳ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಪಂ ಸದಸ್ಯ ನಂದನಗೌಡ ಪಾಟೀಲ, ಮೇಳಗಳಲ್ಲಿ ಮಕ್ಕಳ ಚಟುವಟಿಕೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೇಳಗಳಲ್ಲಿ ಸನ್ನಿವೇಶ ನೋಡಿ ವಿವರಿಸುವುದು, ಚಿತ್ರ ನೋಡಿ ಕಥೆ ರಚಿಸುವುದು, ಸ್ವಂತ ವಾಕ್ಯ ಬಳಸಿ, ಗಾದೆ ಮಾತುಗಳು, ಪದ ರಚನೆ, ಕಥೆಗೆ ಶೀರ್ಷಿಕೆ ಬರೆ, ಗಣಿತದ ಮೂಲಕ್ರಿಯೆಗಳು, ನನ್ನ ಸಮಯ, ಆಕೃತಿಗಳು, ಹಾವು ಏಣಿ ಆಟ ಹೀಗೆ ಅನೇಕ ವಿಷಯಗಳ ಕುರಿತು ಮಕ್ಕಳು ವಿವರಿಸಿದರು. ಮುಷ್ಟೂರ ದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆ, ಹಂದ್ರಾಳ ಸರ್ಕಾರಿ ಪ್ರಾಥಮಿಕ ಶಾಲೆ, ಗೋನಾಲ ಎಸ್‌ಡಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಭಾಗವಹಿಸಿದ್ದರು.

ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಎಂ. ಜಾಂಗಿನ, ಗ್ರಾಪಂ ಸದಸ್ಯ ಅಯ್ಯಪ್ಪ ಗಂಜಾಳ, ರೇಣುಕಾ, ಪ್ರಮುಖರಾದ ಚನ್ನಪ್ಪಗೌಡ, ರಮೇಶ ಕವಲಿ, ಚನ್ನಬಸಪ್ಪ ತಳವಾರ, ಮಹಾದೇವ, ಹಸನಪ್ಪ ತಳವಾರ, ಬಿಆರ್‌ಪಿ ಕಾಂತೇಶ, ಸಿಆರ್‌ಪಿ ಯಂಕಣ್ಣ ಹುಲಕಲ್‌, ಮುಖ್ಯ ಶಿಕ್ಷಕ ಕಾಸೀಂ ಬಾಗವಾನ, ಶಿಕ್ಷಕರಾದ ಭೀಮಣ್ಣ ಹುದ್ಧಾರ, ರಾಜಶೇಖರ ಭಾಸಗಿ, ಮಲ್ಲಣ್ಣ ಸಜ್ಜನ, ರಾಜಣ್ಣ, ರಾಜಶೇಖರ ಚಿಲ್ಲಾಳ, ಶಿವಶರಣ, ರಾಜಶೇಖರ ಕಲ್ಲೂರಮಠ, ರೇಖಾ,
ಆರತಿ, ಪವಿತ್ರ, ಎಪಿಎಫ್‌ನ ಪರಮಣ್ಣ ತೆಳಗೇರಿ, ಅಜೀಮ್‌, ಶಿವುಕುಮಾರ, ಅನ್ವರ ಜಮಾದಾರ್‌ ಇದ್ದರು.

ಟಾಪ್ ನ್ಯೂಸ್

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.