48.69 ಲಕ್ಷ ರೂ. ವೆಚ್ಚದಲ್ಲಿ “ಸಖಿ ಒನ್ ಸ್ಟಾಪ್ ಸೆಂಟರ್’
ಲೇಡಿಗೋಷನ್‌ನ ಸುಸಜ್ಜಿತ ಕಟ್ಟಡದಲ್ಲಿ ಸೇವೆ ಆರಂಭ
Team Udayavani, Jan 12, 2020, 5:12 AM IST
ಮಹಾನಗರ: ದೌರ್ಜನ್ಯ ಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ನೆರವು ಸಹಿತ ಎಲ್ಲ ಸೌಲಭ್ಯ ಸಿಗು ವಂತಾಗಲು ಕೇಂದ್ರ ಸರಕಾರ ಕಳೆದ ವರ್ಷ ಆರಂಭಿ ಸಿದ್ದ “ಸಖಿ ವನ್ ಸ್ಟಾಪ್ ಸೆಂಟರ್’ನ ಸುಸಜ್ಜಿತ ಕೇಂದ್ರವು ಜಿಲ್ಲಾ ಲೇಡಿಗೋಷನ್ ಸರಕಾರಿ ಆಸ್ಪತ್ರೆಯ ಎರಡನೇ ಮಹಡಿ ಕಟ್ಟಡದಲ್ಲಿ ನಿರ್ಮಾಣವಾಗುತ್ತಿದೆ.
ಒಟ್ಟು 48, 69,000 ರೂ.ಗಳಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು, ಮುಂದಿನ ನಾಲ್ಕು ತಿಂಗಳುಗಳಲ್ಲಿ ಹೊಸ ಕಟ್ಟಡದಲ್ಲಿ ಈ ಸಖೀ ಕೇಂದ್ರವು ಕಾರ್ಯಾರಂಭಿಸಲಿದೆ. ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ, ಆಸಿಡ್ ದಾಳಿ, ಲೈಂಗಿಕ ದುರುಪಯೋಗಕ್ಕೊಳಗಾದ, ಕಾಣೆಯಾದ, ಬಾಲ್ಯವಿವಾಹಕ್ಕೊಳಗಾದ ಸಹಿತ ವಿವಿಧ ಸಮಸ್ಯೆಗಳಿಂದ ನರಳುವ ಮಹಿಳೆಯರಿಗೆ ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ, ವೈದ್ಯಕೀಯ ನೆರವು, ತಾತ್ಕಾಲಿಕ ವಸತಿ ನೀಡುವುದಕ್ಕಾಗಿ ಕೇಂದ್ರ ಸರಕಾರ ಜಾರಿಗೆ ತಂದ ಸಖೀ ಒನ್ ಸ್ಟಾಪ್ ಸೆಂಟರ್ 2019ರ ಜ. 26ರಿಂದ ಲೇಡಿಗೋಷನ್ ಆಸ್ಪತ್ರೆಯ ವಾರ್ಡ್‌ವೊಂದರಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾರಂಭ ಮಾಡಿತ್ತು. ಇದೀಗ ಸುಸಜ್ಜಿತವಾದ ಪೂರ್ಣಕಾಲಿಕ ಕಟ್ಟಡ ನಿರ್ಮಾಣವಾಗುತ್ತಿದ್ದು, ಎಪ್ರಿಲ್-ಮೇ ವೇಳೆಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ.
2314 ಚ.ಅಡಿ ವಿಸ್ತೀರ್ಣ
ನೂತನ ಕಟ್ಟಡವು 2,314 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ತಾತ್ಕಾಲಿಕ ನೆಲೆಯಲ್ಲಿರುವ ಕೇಂದ್ರದಲ್ಲಿ ಮೂರು ಹಾಸಿಗೆಗಳಿದ್ದು, ಸೌಲಭ್ಯಗಳೇನಿರಬೇಕೆಂಬುದು ಅಂತಿಮವಾಗಿಲ್ಲ.
2 ವಾರ್ಡ್, ಸಿಸಿ ಕೆಮರಾ, ಶೌಚಾಲಯ ಸಹಿತ ಅಗತ್ಯ ಮೂಲಸೌಕರ್ಯಗಳು ಕೇಂದ್ರದಲ್ಲಿರಲಿವೆ. 2019ರ ನ. 21ರಂದು ಕಾರ್ಯಾರಂಭ ಸ್ಥಗಿತಗೊಳಿಸಿದ್ದ “ಗೆಳತಿ ವಿಶೇಷ ಚಿಕಿತ್ಸಾ ಘಟಕ’ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಓರ್ವ ಆಪ್ತ ಸಮಾಲೋಚಕ ಹಾಗೂ ಇಬ್ಬರು ಸಾಮಾಜಿಕ ಕಾರ್ಯಕರ್ತರು ಸಖೀ ಕೇಂದ್ರದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹೊಸ ಕೇಂದ್ರದಲ್ಲಿ ಪೂರ್ಣಕಾಲಿಕ ಸೇವೆಗಾಗಿ ಈಗಾಗಲೇ ವಿವಿಧ 8 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಲೇಡಿಗೋಷನ್ ಆಸ್ಪತ್ರೆಯ ವೈದ್ಯರು, ದಾದಿಯರು ಸಖೀಯಲ್ಲಿ ಸೇವೆ ನೀಡುತ್ತಿದ್ದಾರೆ.
ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು 48,69,000 ರೂ. ಅನುದಾನ ಮೀಸಲಿರಿಸಲಾಗಿದ್ದು, ಮೊದಲನೇ ಹಂತದಲ್ಲಿ 24,34,686 ರೂ. ಬಿಡುಗಡೆಯಾಗಿದೆ. ಸದ್ಯ ಕಟ್ಟಡ ನಿರ್ಮಾಣ ಕಾರ್ಯ ಶೇ. 50ರಷ್ಟು ಪೂರ್ಣವಾಗಿದ್ದು, ವೇಗದಿಂದ ಕೆಲಸ ನಡೆಯುತ್ತಿದೆ. ಮುಂದಿನ ಮೂರ್‍ನಾಲ್ಕು ತಿಂಗಳುಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಅಂತಿಮಗೊಂಡು ಕಟ್ಟಡ ಸೇವೆಗೆ ತೆರೆದುಕೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ವರ್ಷ; 128 ಪ್ರಕರಣ
ಸಖೀ ಕೇಂದ್ರದಲ್ಲಿ 2019ರ ಫೆಬ್ರವರಿಯಿಂದ ಡಿಸೆಂಬರ್‌ವರೆಗೆ ಒಟ್ಟು 128 ಪ್ರಕರಣಗಳು ದಾಖಲಾಗಿವೆ. 4 ಕೌಟುಂಬಿಕ ದೌರ್ಜನ್ಯ, 48 ಅತ್ಯಾಚಾರ, 39 ಲೈಂಗಿಕ ಅಪರಾಧ/ಲೈಂಗಿಕ ಕಿರುಕುಳ, 1 ಮಹಿಳೆಯರ ಸಾಗಾಣಿಕೆ, 7 ಲೈಂಗಿಕ ದುರುಪಯೋಗಕ್ಕೆ ಒಳಗಾದ ಮಕ್ಕಳು, 2 ಬಾಲ್ಯ ವಿವಾಹ, 17 ಕಾಣೆಯಾದ/ಅಪಹರಣ, 10 ಇತರೆ ಪ್ರಕರಣಗಳು ಸೇರಿವೆ. ಈ ಪೈಕಿ ಕೆಲವರನ್ನು ಹೆತ್ತವರಿಗೆ ಹಸ್ತಾಂತರಿಸಲಾಗಿದ್ದರೆ, ಕೆಲವು ಮಹಿಳೆಯರು ಸ್ವಾಧಾರ ಗೃಹದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಅಲ್ಲದೆ ಸ್ವಂತ ಉದ್ದಿಮೆಗಳಲ್ಲಿ ತೊಡಗಿಸಿಕೊಂಡವರೂ ಇದ್ದಾರೆ.
ಸುಸಜ್ಜಿತ ಕಟ್ಟಡ
ಕಳೆದ ಜನವರಿಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸಖೀ ಕೇಂದ್ರ ಕಾರ್ಯಾರಂಭ ಮಾಡಿತ್ತು. ಪ್ರಸ್ತುತ ಲೇಡಿಗೋಷನ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಸಖೀಯ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಮುಂದಿನ ಮೂರ್‍ನಾಲ್ಕು ತಿಂಗಳುಗಳಲ್ಲಿ ಪೂರ್ಣಗೊಂಡು, ತಾತ್ಕಾಲಿಕ ಕೇಂದ್ರದಿಂದ ಈ ಕಟ್ಟಡಕ್ಕೆ ಕೇಂದ್ರ ಸ್ಥಳಾಂತರಗೊಳ್ಳಲಿದೆ. ಸುಸಜ್ಜಿತವಾದ, ಎಲ್ಲ ಸೌಕರ್ಯಗಳನ್ನು ಒಳಗೊಂಡ ಕಟ್ಟಡ ಇದಾಗಲಿದೆ.
- ಉಸ್ಮಾನ್, ಉಪ ನಿರ್ದೇಶಕರು-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ.
ಕಟ್ಟಡ ನಿರ್ಮಾಣ
ಸಖೀ ಕೇಂದ್ರದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಈಗಾಗಲೇ ಶೇ. 50ರಷ್ಟು ಪೂರ್ಣಗೊಂಡಿದೆ. ಆಸ್ಪತ್ರೆಯ ವೈದ್ಯರು, ದಾದಿಯರು ಸಖೀ ಕೇಂದ್ರಕ್ಕೂ ಸೇವೆ ಸಲ್ಲಿಸುತ್ತಿದ್ದಾರೆ.
- ಡಾ| ಸವಿತಾ, ವೈದ್ಯಕೀಯ ಅಧೀಕ್ಷಕರು, ಸರಕಾರಿ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು
ಧನ್ಯಾ ಬಾಳೆಕಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.