ದುಬಾೖಯಲ್ಲಿ ಮಳೆ: ಜನಜೀವನ ಅಸ್ತವ್ಯಸ್ತ
Team Udayavani, Jan 12, 2020, 12:54 AM IST
ದುಬಾೖ: ಈ ವಾರಾಂತ್ಯಕ್ಕೆ ಸುರಿಯಲಾರಂಭಿಸಿರುವ ಭಾರೀ ಮಳೆಯಿಂದಾಗಿ ದುಬಾೖಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಬೆಳಗ್ಗೆಯಿಂದಲೇ ಸುರಿದ ಮಳೆಯಿಂದ ನಗರದ ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತಗೊಂಡವು. ಶನಿವಾರದಂದು ಸುಮಾರು 151 ಮಿ.ಮೀ. ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ದುಬಾೖ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನಗಳ ಹಾರಾಟವನ್ನು ಮುಂದೂಡಬೇಕಾಯಿತು. ರನ್‌ವೇಯಲ್ಲಿ ಹೆಚ್ಚು ನೀರು ಆವರಿಸಿದ್ದರಿಂದಾಗಿ ಬಹುತೇಕ ವಿಮಾನಗಳು ಟೇಕಾಫ್ ಆಗದೇ ಉಳಿದವು. ಶನಿವಾರ ಬೆಳಗ್ಗೆ ಶುರುವಾದ ಮಳೆ, ಆಗಾಗ ಕೊಂಚ ಬಿಡುವು ಕೊಟ್ಟರೂ ಮಧ್ಯರಾತ್ರಿಯಿಂದ ಪುನರಾರಂಭ ವಾಗಿತ್ತು. ಮಳೆಯ ಅಗಾಧತೆ ಮುಂದುವರಿದ ಕಾರಣ, ರವಿ ವಾರ ದುಬಾೖಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಮೋಡ ಕವಿದ ವಾತಾವರಣ ವಿರಲಿದ್ದು, ಮತ್ತೆ ಮಳೆ ಸುರಿಯುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.