ಅಧಿಕಾರಿಗೆ ಶಾಸಕ ಸತೀಶ ತರಾಟೆ
Team Udayavani, Jan 12, 2020, 11:46 AM IST
ಯಮಕನಮರಡಿ: ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸೋರಿಕೆ ಆಗುತ್ತಿರುವುದನ್ನು ವೀಕ್ಷಿಸಿದ ಶಾಸಕ ಸತೀಶ ಜಾರಕಿಹೊಳಿ ಸಂಬಂಧಿಸಿದ ಅಭಿಯಂತರನ್ನು ತರಾಟೆಗೆ ತೆಗೆದುಕೊಂಡರು.
ಈಗಾಗಲೇ ಈ ಹಿಂದೆ ನಿರ್ಮಾಣ ಮಾಡಿದ ಕುಡಿಯುವ ನೀರಿನ ಟ್ಯಾಂಕ್‌ಗಳೆಲ್ಲ ಸೋರಿಕೆ ಆಗುತ್ತಿವೆ. ಟ್ಯಾಂಕ್ ನಿರ್ಮಾಣದಲ್ಲಿ ಯಾವ ಗುಣಮಟ್ಟ ಕಾಯ್ದುಕೊಂಡಿದ್ದೀರಿ ಎಂದು ಪ್ರಶ್ನಿಸಿದ ಅವರು, ಹುಕ್ಕೇರಿ ತಾಲೂಕು ನೀರು ಮತ್ತು ನೈರ್ಮಲ್ಯ ಸಮಿತಿ ಅಭಿಯಂತ ರವಿ ಮುರಗಾಲಿ ಅವರನ್ನು ತರಾಟೆಗೆ ತಗೆದುಕೊಂಡರು. ಹತ್ತರಗಿ, ಪಾಶ್ಚಾಪುರ, ಹೆಬ್ಟಾಳ, ದಡ್ಡಿ ಜಿಪಂ ಕ್ಷೇತ್ರದಲ್ಲಿ 6ಹೊಸ ಕುಡಿಯುವ ನೀರಿನ ಟ್ಯಾಂಕ್ ಮಂಜೂರು ಆಗಿದ್ದು, ಅವುಗಳಲ್ಲಿ ಕಳಪೆ ಕಾಮಗಾರಿ ಕಂಡು ಬಂದರೆ ನೇರವಾಗಿ ಗುತ್ತಿಗೆದಾರರು ಹಾಗೂ ಅ ಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮಂಜೂರಾದ 20ಲಕ್ಷ ರೂ. ವೆಚ್ಚದ ಹೊಸ ಕುಡಿಯುವ ನೀರಿನ 1ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ದಡ್ಡಿ ಜಿಪಂ ಸದಸ್ಯೆ ಮನಿಷಾ ಪಾಟೀಲ, ಮಣಗುತ್ತಿ ತಾಪಂ ಸದಸ್ಯ ಸುರೇಶ ಬೆಣ್ಣಿ, ಆರ್.ಕೆ.ದೇಸಾಯಿ, ಅಶೋಕ ತಳವಾರ, ಬಸವರಾಜ ದೇಸಾಯಿ, ವಿಠಲ ಪಾಶ್ಚಾಪುರಿ, ಗಣಪತಿ ಕಾಂಬಳೆ, ಸುನೀಲ ಹುಕ್ಕೇರಿ, ಸದಾಶಿವ ದುರ್ಗಪ್ಪಗೋಳ, ಭೀಮಶಿ ಗಡಕರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.