110 ದೇಗುಲಗಳಲಿ ಸಾಮೂಹಿಕ ವಿವಾಹ

ಸರಳ ಮದುವೆಯಾಗ ಬಯಸುವ ಕುಟುಂಬಗಳಿಗೆ ಸರ್ಕಾರದ ಯೋಜನೆ ಸಹಕಾರಿ: ಸಚಿವ ಕೋಟಾ ಶ್ರೀನಿವಾಸ

Team Udayavani, Jan 12, 2020, 2:30 PM IST

12-Janauary-14

ಶಿವಮೊಗ್ಗ: ರಾಜ್ಯ ಸರ್ಕಾರದ ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯು ಎ’ ಶ್ರೇಣಿ ಮತ್ತು ಬಿ’ ಶ್ರೇಣಿಯ ದೇವಾಲಯಗಳ ಆದಾಯವನ್ನು ಬಳಸಿಕೊಂಡು ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಏ. 26ರಂದು ರಾಜ್ಯದ ಆಯ್ದ 110 ದೇವಸ್ಥಾನಗಳಲ್ಲಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮುಜರಾಯಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತಿ, ಧರ್ಮ, ಮತ ಭಾಷೆ ಬಣ್ಣಗಳ ಎಲ್ಲೆಗಳೆಲ್ಲವನ್ನೂ ಮೀರಿ ಎಲ್ಲಾ ಧರ್ಮದವರಿಗೂ ಏಕರೀತಿಯ ಅವಕಾಶ ಮಾಡಿಕೊಡಲಾಗುವುದು. ಸರಳವಾಗಿ ಮದುವೆಯಾಗಬೇಕೆಂದ ಆಶಯ ಹೊಂದಿರುವವರಿಗೆ ಇದು ಸಹಕಾರಿಯಾಗಲಿದೆ. ಈ ಸಂದರ್ಭದಲ್ಲಿ ವಧುವಿಗೆ 40,000 ರೂ. ಮೌಲ್ಯದ ಮಾಂಗಲ್ಯ ಹಾಗೂ 10,000 ರೂ. ಮತ್ತು ವರನಿಗೆ 5,000 ರೂ. ಸೇರಿದಂತೆ
ಪ್ರತಿ ಸಂಗಾತಿಗಳಿಗೆ 55,000 ರೂ.ಗಳ ಆರ್ಥಿಕ ನೆರವನ್ನು ಒದಗಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳು ಸಪ್ತಪದಿ ಲಾಂಛನವನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಸಾರ್ವಜನಿಕರು ಹಾಗೂ ಇಲಾಖಾ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅವರು ನುಡಿದರು.

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಪದಾಧಿ ಕಾರಿಗಳ ನೇಮಕಕ್ಕೆ ಮುಂದಿನ 15ದಿನಗಳಲ್ಲಿ ಅನುಮತಿ ನೀಡಲಾಗುವುದು. ಇದರಿಂದಾಗಿ ಆಡಳಿತಾತ್ಮಕ ವ್ಯವಸ್ಥೆ ಸರಿಪಡಿಸಲು ಸಾಧ್ಯವಾಗಲಿದೆ ಎಂದ ಅವರು, 650 ದೇವಸ್ಥಾನಗಳ ಸಿಬ್ಬಂದಿಗಳ ನೇಮಕಕ್ಕೆ ಇನ್ನೂ ಒಂದು ವಾರದಲ್ಲಿ ಅನುಮೋದನೆ ದೊರೆಯಲಿದೆ ಎಂದರು.

ರಾಜ್ಯದ ಅನೇಕ ದೇವಸ್ಥಾನಗಳ ಭೂಮಿ ಸರ್ಕಾರಿ ವ್ಯಕ್ತಿಗಳು ಅಕ್ರಮವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಅಕ್ರಮವನ್ನು ನಿಯಂತ್ರಿಸಲು ದೇವಸ್ತಾನಗಳ ಆಸ್ತಿಪಾಸ್ತಿಯನ್ನು ಕಂಪ್ಯೂಟರೀಕರಿಸಿ ದಾಖಲಿಸಲು, ಇದರ ಉಸ್ತುವಾರಿಗಾಗಿ ಸಮಿತಿಯನ್ನು ರಚಿಸಲು ಉದ್ದೇಶಿಸಲಾಗಿದೆ. ದೇವಸ್ಥಾನಗಳಲ್ಲಿನ ಅರ್ಚಕರಿಗೆ ನೀಡಲಾಗುತ್ತಿದ್ದ ತಸ್ತೀಕ್‌ ಅನುದಾನ ಬಹುದಿನಗಳಿಂದ ಮಂಜೂರಾಗದಿರುವ ಬಗ್ಗೆಯೂ ಅನೇಕ ಅಹವಾಲುಗಳಿವೆ. ತಹಶೀಲ್ದಾರರು ಈ ಅಹವಾಲುಗಳನ್ನು ಪರಿಶೀಲಿಸಿ ಅನುದಾನವನ್ನು ಮಂಜೂರು ಮಾಡುವಂತೆ ಹಾಗೂ ಅದರ ವರದಿಯನ್ನು ಕೂಡಲೇ ನೀಡುವಂತೆ ಸೂಚಿಸಿದರು.

ತೊಗರ್ಸಿ ಮಲ್ಲಿಕಾರ್ಜುನ ದೇವಳದಲ್ಲಿ ಪ್ರತಿವರ್ಷ ಸಾಮೂಹಿಕ ವಿವಾಹ ಕಾರ್ಯಗಳು ನಡೆಯುತ್ತಿದ್ದು, ಸಪ್ತಪದಿ ಯೋಜನೆಗೆ ಒಳಪಡಿಸುವಂತೆ ಕೋರಿದ್ದಾರೆ. ಪರಿಶೀಲಿಸಿ ವರದಿ ನೀಡುವಂತೆ ಅವರು ಸೂಚಿಸಿದ ಸಚಿವರು ಸಾಮೂಹಿಕ ವಿವಾಹವಾದ ಜೋಡಿಗಳ ನೋಂದಣಿ ಮಾಡಿಸುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಈ ವಿವಾಹದಲ್ಲಿ 2ನೇ ವಿವಾಹಕ್ಕೆ ಅವಕಾಶವಿರುವುದಿಲ್ಲ ಎಂದರು. ಶೀಘ್ರದಲ್ಲಿ ಗೋರಕ್ಷಣಾ ಮಂಡಳಿಯನ್ನು ಪುನರ್‌ ರಚಿಸಲು ಕ್ರಮ ವಹಿಸಲಾಗುವುದು ಎಂದರು.

ಬಹುಜನರಲ್ಲಿ ಮುಜರಾಯಿ ದೇವಸ್ಥಾನಗಳ ಉಳಿತಾಯ ಬೇರೆ-ಬೇರೆ ಉದ್ದೇಶಗಳಿಗೆ ಬಳಕೆಯಾಗುತ್ತಿದೆ ಎಂಬ ಆರೋಪ ನಿರಾಧಾರವಾದುದು. ಈ ಹಣ ಸದ್ವಿನಿಯೋಗವಾಗುತ್ತಿದೆ. ವದಂತಿಗಳಿಗೆ ಅವಕಾಶ ಬೇಡ ಎಂದರು.

ಮೀನುಮರಿಗಳ ಬೀಜೋತ್ಪಾದನೆಗೆ ಕೇಂದ್ರ ಆರಂಭಿಸಲು ಸರ್ಕಾರ ಈಗಾಗಲೇ 115.00 ಲಕ್ಷ ರೂ. ಗಳನ್ನು ಮಂಜೂರು ಮಾಡಿದೆ. ತುಂಗಾ ಮೇಲ್ದಂಡೆ ಯೋಜನೆಯ ಅಭಿಯಂತರರು ಈಗಿರುವ ಮೀನುಮರಿ ಉತ್ಪಾದನಾ ಕೇಂದ್ರಕ್ಕೆ ಹೊಂದಿಕೊಂಡಂತೆ ಅಗತ್ಯವಿರುವ ಇನ್ನಷ್ಟು ಭೂಮಿಯನ್ನು ಒದಗಿಸಬೇಕು. ಈ ಸಂಬಂಧ ಜಿಲ್ಲಾ ಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಕ್ರಮ ವಹಿಸುವಂತೆ ಸಚಿವರು ಯು.ಟಿ.ಪಿ. ಅಭಿಯಂತರರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಇರಬಹುದಾದ ಸಾಧ್ಯತೆಗಳ ಬಗ್ಗೆಯೂ ಅಧಿಕಾರಿಗಳು ಗಮನಹರಿಸಿ, ಅಭಿವೃದ್ಧಿಪಡಿಸಬಹುದಾದ ವಿಧಾನಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಸೊರಬ ತಾಲೂಕಿನ 28 ಕೆರೆಗಳ ಹರಾಜನ್ನು ಆದಾಯ ಕೊರತೆಯ ಕಾರಣದಿಂದ ಶಾಸಕರ ಸೂಚನೆ ಮೇರೆಗೆ ಸ್ಥಗಿತಗೊಳಿಸಲಾಗಿದೆ. ಮುಂದಿನ 3-45ದಿನಗಳಲ್ಲಿ ಶಾಸಕರೊಂದಿಗೆ ಮಾತನಾಡಿ, ಸೂಕ್ತ
ನಿರ್ದೇಶನ ನೀಡುವುದಾಗಿ ತಿಳಿಸಿದರು.

ಅತಿ ಹೆಚ್ಚು ಮೀನು ಮರಿ ಉತ್ಪಾದನೆ ಮಾಡುತ್ತಿರುವ ಶೆಟ್ಟಿಹಳ್ಳಿ, ಹಾತಿಕಟ್ಟೆ ಮತ್ತು ಮಾಳೂರುಗಳಲ್ಲಿನ 170ಮೀನು ಕೃಷಿಕರು ಇಲಾಖೆಯ ಕೋರಿಕೆಯಂತೆ ಬೆಳೆದ ಮೀನುಮರಿಗಳನ್ನು ಸಕಾಲದಲ್ಲಿ ಎತ್ತುವಳಿ ಮಾಡದೆ ಉತ್ಪಾದಕರಿಗೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದೆ ಎಂದು ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಸಚಿವರ ಗಮನ ಸೆಳೆದರು. ಅದಕ್ಕೆ ಇಲಾಖೆಯ ಅನುದಾನ ಕೊರತೆ ಇರುವುದನ್ನು ಅಧಿಕಾರಿಗಳು ಸಚಿವರ ಗಮನ ಸೆಳೆದರು. ಕೂಡಲೇ ಈ ಬಗ್ಗೆ ಗಮನ ಹರಿಸಿ ಸಮಸ್ಯೆಯ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವುದಾಗಿ ಹಾಗೂ ಇಲಾಖಾ ಆಯುಕ್ತರಿಗೆ ಕ್ರಮಕ್ಕೆ ಸೂಚಿಸುವುದಾಗಿ ಅವರು ತಿಳಿಸಿದರು.

ಕೆರೆಗಳ ಹರಾಜು ಪಾರದರ್ಶಕವಾಗಿ ನಡೆಯುತ್ತಿಲ್ಲ. ಒಳಒಪ್ಪಂದಗಳಿಗೆ ಅವಕಾಶವಿಲ್ಲದಂತೆ ಹರಾಜು ಪ್ರಕ್ರಿಯೆಗಳು ನಡೆಯಬೇಕು. ಮೀನು ಕೃಷಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಆಶಯಗಳು ಈಡೇರುವಂತಾಗಬೇಕು. ಅರ್ಹರು ಕೆರೆಗಳ ಮೀನು ಪಾಶುವಾರು ಹಕ್ಕನ್ನು ಪಡೆಯುವಂತಾಗಬೇಕೆಂದರು.

ಮುಂದಿನ ಒಂದು ತಿಂಗಳಲ್ಲಿ ಜಿಲ್ಲೆಯ ಅರ್ಚಕರ, ವ್ಯವಸ್ಥಾಪನಾ ಸಮಿತಿ ಪದಾಧಿ ಕಾರಿಗಳ, ಅಧಿಕಾರಿಗಳ ಕಾರ್ಯಾಗಾರವನ್ನು ಆಯೋಜಿಸುವುದಾಗಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಮಾತನಾಡಿ, ಸರ್ವ ಧರ್ಮಗಳ ಸಂಗಮ ಕ್ಷೇತ್ರವೆನಿಸಿರುವ ಹಣಗೆರೆಯಲ್ಲಿನ ಸ್ವತ್ಛತೆ ಸಮಸ್ಯೆಗೆ, ಮಾಂಸತ್ಯಾಜ್ಯದ ವ್ಯವಸ್ಥಿತ ವಿಲೇವಾರಿಗೆ ಕ್ರಮ ವಹಿಸಲಾಗಿದೆ.

ದೇವಸ್ಥಾನದ ಹುಂಡಿಗೆ ಬೀಳುತ್ತಿದ್ದ ಹಣ ಮಧ್ಯವರ್ತಿಗಳಿಂದಾಗಿ
ಆದಾಯಕ್ಕೆ ಕೊರತೆ ಆಗುತ್ತಿದೆ, ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಕಸ ವಿಲೇವಾರಿ ಸರಿಯಿಲ್ಲ ಎಂಬಿತ್ಯಾದಿ ಸಮಸ್ಯೆಗಳ ಇತ್ಯರ್ಥಕ್ಕೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಣಗೆರೆ ಧಾರ್ಮಿಕ ಸ್ಥಳದಲ್ಲಿ ಸಿಸಿ ಟಿ.ವಿ.ಅಳವಡಿಕೆ, ಅರ್ಚಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ. ಮಲೆಶಂಕರ ಮತ್ತು ಚಂದ್ರಗುತ್ತಿ ದೇವಾಲಯಗಳ ಜೀರ್ಣೊದ್ಧಾರ ಮತ್ತು ಅವುಗಳ ನಿರ್ವಹಣೆಗಾಗಿ ಕಂದಾಯ ಇಲಾಖಾ ಅಧಿಕಾರಿಗಳಿಗೆ ತಾತ್ಕಾಲಿಕವಾಗಿ ಹೊಣೆಗಾರಿಕೆ ನೀಡಲಾಗಿದೆ. ಇದನ್ನು ಅಧಿಕೃತವಾಗಿ ಆದೇಶ ಹೊರಡಿಸಿದಲ್ಲಿ ಇನ್ನಷ್ಟು ಪರಿಣಾಮಕಾರಿ ನಿರ್ವಹಿಸಲು ಸಾಧ್ಯವಾಗಲಿದೆ. ಅದಕ್ಕಾಗಿ ಮುಜರಾಯಿ ಇಲಾಖಾ ಆಯುಕ್ತರಿಗೆ ಪ್ರಸ್ತಾವನೆಯೊಂದನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.

ಶಾಸಕ ಕೆ.ಬಿ. ಅಶೋಕನಾಯ್ಕ, ಉಪಮಹಾಪೌರ ಚನ್ನಬಸಪ್ಪ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಜಿಪಂ ಮುಖ್ಯ ಕಾರ್ಯನಿ ರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.