20ರಿಂದ ಮಕ್ಕಳ ರಾಷ್ಟ್ರೀಯ ಮೇಳ
Team Udayavani, Jan 12, 2020, 5:30 PM IST
ದೊಡ್ಡಬಳ್ಳಾಪುರ: ಜ.20 ರಿಂದ ಮೂರು ದಿನಗಳ ಕಾಲ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ ಸೇವಾದಳ ವತಿಯಿಂದ ಸೇವಾದಳ ರಾಜ್ಯಮಟ್ಟದ ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ ಮೇಳ ನಡೆಯಲಿದೆ ಎಂದು ಭಾರತ ಸೇವಾದಳ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಂ.ಗುರುಸಿದ್ದಸ್ವಾಮಿ ತಿಳಿಸಿದ್ದಾರೆ.
ಅವರು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ಬಳ್ಳಾರಿಯಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಲಾಗಿತ್ತು. ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸುವ ಉದ್ದೇಶದಿಂದ ದೊಡ್ಡ ಬಳ್ಳಾಪುರವನ್ನು ಆಯ್ಕೆ ಮಾಡಿ ಕೊಳ್ಳಲಾಗಿದೆ. ಜ.20 ರಂದು ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುವ ಮಕ್ಕಳ ಮೇಳವನ್ನು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಜ.21 ನಗರದಲ್ಲಿ ನಡೆಯಲಿರುವ ಪ್ರಭಾತ್ ಬೇರಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಉದ್ಘಾಟಿಸಲಿದ್ದಾರೆ. ಜ.22 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾಗವಹಿಸಲಿದ್ದಾರೆ.
ಇದಕ್ಕಾಗಿ ಈಗಲಾಗಲೇ ಪೂರ್ವ ತಯಾರಿಗಳು ಅರಂಭವಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಿಂದ ಐದು ಸಾವಿರ ಜನ ಮಕ್ಕಳು ಮೇಳದಲ್ಲಿ ಭಾಗ ವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭಾರತ ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ವಿ.ದೇವಿಪ್ರಸಾದ್, ಉಪಾಧ್ಯಕ್ಷ ಬಿ.ಸಿ.ವೆಂಕಟೇಶ್, ಕೇಂದ್ರ ಸಮಿತಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ವಿಭಾಗೀಯ ಸಂಘಟಕ ಮಹದೇವಗೌಡ, ಶಿವಕುಮಾರ್, ದಳಪತಿ ಎಚ್. ಎ ಸ್. ಚಂದ್ರ ಶೇಖರ್, ಮಹಿಳಾ ಸಂಘಟನ ಕಾರ್ಯದರ್ಶಿ ಎಚ್.ಬಿ.ಪೂರ್ಣಿಮಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.