ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಪಂಜಿನ ಮೆರವಣಿಗೆ


Team Udayavani, Jan 12, 2020, 5:45 PM IST

12-Janauary-28

ಮುದ್ದೇಬಿಹಾಳ: ದೇಶದಲ್ಲಿ ಜಾರಿಗೊಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಲು ಪಟ್ಟಣದಲ್ಲಿ ಶನಿವಾರ ಸಂಜೆ ಬಿಜೆಪಿ ಮುದ್ದೇಬಿಹಾಳ ಮಂಡಲ ವತಿಯಿಂದ ಮಂಡಲ ಅಧ್ಯಕ್ಷ ಡಾ| ಪರಶುರಾಮ ಪವಾರ ನೇತೃತ್ವದಲ್ಲಿ ಬೃಹತ್‌ ಪಂಜಿನ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಕಾಯ್ದೆ ಬೆಂಬಲಿಸುವ ವಿವಿಧ ಸಂಘಟನೆಗಳ ಸದಸ್ಯರು ತಮ್ಮ ಕೈಗಳಲ್ಲಿ ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆಯಲ್ಲಿ ಬರೆದ ನಾವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಸುತ್ತೇವೆ, ವಿ ಸಪೋರ್ಟ್‌ ಸಿಎಎ, ಹಮ್‌
ಸಿಎಎ ಕೋ ಸಮರ್ಥನ್‌ ಕರತೆ ಹೈ, ಉದ್ಘೋಷದ ಬಂಟಿಂಗ್ಸ್‌ ಹಿಡಿದು ಜೈ ಜೈ ಮಾತಾ, ಭಾರತ್‌ ಮಾತಾ, ಮಾತರಂ ಮಾತರಂ ವಂದೇ ಮಾತರಂ, ವಿ ಸಪೋರ್ಟ್‌ ಸಿಎಎ ಎನ್ನುತ್ತಾ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಂಚರಿಸಿದರು.

ಮೆರವಣಿಗೆ ಮಾರ್ಗಮಧ್ಯೆ ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಬಿಜೆಪಿ
ಧುರೀಣರಾದ ಪ್ರಭು ಕಡಿ, ಶಿವಶಂಕರಗೌಡ ಹಿರೇಗೌಡರ, ಮಲಕೇಂದ್ರಗೌಡ ಪಾಟೀಲ,
ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಮಂಡಲ ಅಧ್ಯಕ್ಷ ಡಾ| ಪರಶುರಾಮ ಪವಾರ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಈ ದೇಶದ ನಿವಾಸಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟು ಮಾಡುವುದಿಲ್ಲ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಅವರು ಕಾಯ್ದೆಯಿಂದ ಯಾರೊಬ್ಬರಿಗೂ ತೊಂದರೆ ಆಗುವುದಿಲ್ಲ ಎನ್ನುವ ಭರವಸೆಯನ್ನು ಜನತೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್ಸಿಗರು ಮುಸ್ಲಿಂ ಬಂಧುಗಳನ್ನು ಬಳಸಿಕೊಂಡು ವಿರೋಧ, ಪ್ರತಿಭಟನೆಯಂಥ ಚಟುವಟಿಕೆ ನಡೆಸುತ್ತಿರುವುದು ಸರಿ ಅಲ್ಲ. ಕಾಯ್ದೆ ವಿರೋಧಿಸುವ ಪ್ರಚೋದನೆ ಕೊಡುವುದರಿಂದ ಕಾಂಗ್ರೆಸ್‌ ಸರ್ವನಾಶ ಖಚಿತ. ಅನೇಕ ಮುಸ್ಲಿಮರು ಕಾಯ್ದೆ ಪರ ಇದ್ದಾರೆ. ಬಹುತೇಕ ಮುಸ್ಲಿಂ ಧರ್ಮಗುರುಗಳು ಕಾಯ್ದೆಯಿಂದ ತೊಂದರೆ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಒಳ್ಳೇಯದನ್ನೇ ಮಾಡಿದ್ದಾರೆ. ಈ ಕಾಯ್ದೆ ಯಾರಿಗೂ ತೊಂದರೆ ಕೊಡುವಂಥದ್ದಲ್ಲ. ಕಾಯ್ದೆಯಲ್ಲಿ
ಏನಿದೆ ಅನ್ನೋದನ್ನ ಎಲ್ಲರೂ ತಿಳಿದುಕೊಳ್ಳಲು ಮುಂದಾಗಬೇಕು ಎಂದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಪುರಸಭೆ ಸದಸ್ಯರಾದ
ಚನ್ನಪ್ಪ ಕಂಠಿ, ಸಹನಾ ಬಡಿಗೇರ, ಬಿಜೆಪಿ ಧುರೀಣರಾದ ಬಿ.ಪಿ. ಕುಲಕರ್ಣಿ, ರಾಜಶೇಖರ ಹೊಳಿ, ಸಿ.ಎಸ್‌.ಹಾವರಗಿ, ಮನೋಹರ ತುಪ್ಪದ, ಜಗದೀಶ್‌ ಪಂಪಣ್ಣವರ, ಪುನೀತ ಹಿಪ್ಪರಗಿ, ಮಂಜುನಾಥ ರತ್ನಾಕರ, ಮಾಣಿಚಂದ ದಂಡಾವತಿ, ಶರಣು ಬೂದಿಹಾಳಮಠ, ಅಶೋಕ ರಾಠೊಡ, ಬಸನಗೌಡ ಪಾಟೀಲ್‌ ನಡಹಳ್ಳಿ, ಶಿವು ಕನ್ನೊಳ್ಳಿ, ವಿಜಯಕುಮಾರ ಬಡಿಗೇರ, ಅಶೋಕ ಚಿನಿವಾರ, ಸೋಮಶೇಖರ ಮೇಟಿ, ಡಾ| ವೀರೇಶ ಪಾಟೀಲ, ಎಸ್‌.ಪಿ.ಬಾದರಬಂಡಿ, ಹಣಮಂತ ಅಂಬಿಗೇರ, ಸಂಜು ಬಾಗೇವಾಡಿ, ಶ್ರೀಕಾಂತ ಹಿರೇಮಠ,
ಪ್ರಶಾಂತ ಸಜ್ಜನ, ವೀರೇಶ ಕಲ್ಲೂರ, ಹನುಮಂತ ಕಲ್ಯಾಣಿ, ನಾಗಪ್ಪ ರೂಢಗಿ, ಗೌರಮ್ಮ ಹುನಗುಂದ, ಶಿಲ್ಪಾ ಶರ್ಮಾ, ನೀಲಮ್ಮ ಛಲವಾದಿ, ಲಕ್ಷ್ಮೀಬಾಯಿ ದಾಸರ, ಸಂಗೀತಾ ವಡ್ಡರ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.