ಯೋಜನೆ ಅನುಷ್ಠಾನವಾಗಲಿ
ಹಳ್ಳಿ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ: ಈಶ್ವರಪ್ಪ
Team Udayavani, Jan 12, 2020, 5:16 PM IST
ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಗಳ ಅನುಷ್ಠಾನದಲ್ಲಿನ ತೊಂದರೆಗಳ ಬಗ್ಗೆ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದರು.
ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಾದರೆ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಲು ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ. ಹೀಗಾಗಿ ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾದ್ದುದು. ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಪಿಡಿಒಗಳು ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿ ಧಿಗಳ ಗಮನಕ್ಕೆ ತಂದು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದ ಅವರು, ಅಭಿವೃದ್ಧಿ ಯೋಜನಾನುಷ್ಠಾನದಲ್ಲಿ ಯವುದೇ ರಾಜಿ ಇಲ್ಲ ಎಂದು ಎಚ್ಚರಿಸಿದರು.
ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಲು ಒತ್ತು ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271 ಗ್ರಾಪಂಗಳ ಪೈಕಿ ಕೇವಲ 19 ಪಂಚಾಯತ್ ವ್ಯಾಪ್ತಿಯಲ್ಲಿ ವಿಲೇವಾರಿ ಘಟಕಕ್ಕೆ ಜಮೀನು ಗುರುತಿಸಲಾಗಿದೆ ಎಂದ ಅವರು, ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜಮೀನು ಗುರುತಿಸಿ ಘಟಕವನ್ನು ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಬಾರಿಯ ಬಜೆಟ್‌ನಲ್ಲಿ ನಿರ್ಮಾಣದ ಸಹಾಯಧನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು. ಇದೇ ರೀತಿ ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೂ
ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದ ಅವರು, ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯ ವೀರಭದ್ರಪ್ಪ ಪೂಜಾರ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್, ಕೇಶವ ಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.