ಹಾಲುಮತ ಸಂಸ್ಕೃತಿ ವೈಭವಕ್ಕೆ ಚಾಲನೆ
ಆರ್ಥಿಕ, ರಾಜಕೀಯವಾಗಿ ಹಿಂದುಳಿದ-ಶೋಷಿತರು ಒಂದಾಗಲಿ: ಯತೀಂದ್ರ
Team Udayavani, Jan 13, 2020, 10:55 AM IST
ಜಾಲಹಳ್ಳಿ: ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಎಲ್ಲ ಶೋಷಿತ ಸಮಾಜಗಳು ಒಂದಾಗಬೇಕು ಎಂದು ವರುಣಾ ಕ್ಷೇತ್ರದ ಶಾಸಕ ಡಾ| ಯತೀಂದ್ರ ಹೇಳಿದರು.
ಸಮೀಪದ ತಿಂಥಣಿ ಬ್ರಿಜ್ ಕಾಗಿನೆಲೆ ಕನಕಗುರು ಪೀಠದಲ್ಲಿ ರವಿವಾರದಿಂದ ಆರಂಭವಾದ ಹಾಲುಮತ ಸಂಸ್ಕೃತಿ ವೈಭವ-2020 ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ಹಾಲುಮತ-
ಗಂಗಾಮತ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದುಳಿದ ಸಮಾಜಗಳ ಜನಸಂಖ್ಯೆ ಹೆಚ್ಚಿದ್ದರೂ ಕೂಡ ನಾವೆಲ್ಲಾ ಬಿಡಿ ಬಿಡಿಯಾಗಿ ಇರುವುದರಿಂದ ಜನಸಂಖ್ಯೆಯಲ್ಲಿ ಕಡಿಮೆ ಕಾಣುತ್ತಿದ್ದೇವೆ. ನಾವು ಹೀಗೆ ಬಿಡಿ ಬಿಡಿಯಾಗಿರುವುದರಿಂದ ಮತ್ತು ನಮ್ಮಲ್ಲಿ ಒಗ್ಗಟ್ಟು ಇಲ್ಲದಿರುವುದು ನಮ್ಮ ಹಿಂದುಳಿಯುವಿಕೆಗೆ ಕಾರಣವಾಗಿದೆ.
ನೂರಾರು ವರ್ಷಗಳಿಂದ ನಮ್ಮನ್ನು ಆಳಿದವರು ಯಾರು ಎನ್ನುವುದನ್ನು ಅರಿಯಬೇಕು. ಆಗ ನಾವೆಲ್ಲಾ ಒಂದಾಗಲು ಸಾಧ್ಯ. ನಮ್ಮಲ್ಲಿ ಒಗ್ಗಟ್ಟು ಮೂಡದೇ, ಶೈಕ್ಷಣಿಕ, ಆರ್ಥಿಕ,
ರಾಜಕೀಯ, ಸಾಮಾಜಿಕವಾಗಿ ಮುಂಚೂಣಿಗೆ ಬರಲು ಸಾಧ್ಯವಿಲ್ಲ ಎಂದರು.
ನಮ್ಮ ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರನ್ನು ವಿದ್ಯಾವಂತರನ್ನಾಗಿ ಮಾಡಬೇಕು.
ಅವರು ಕೂಡ ಬೇರೆ ಸಮಾಜದ ವಿದ್ಯಾರ್ಥಿಗಳಂತೆ ಉನ್ನತ ವ್ಯಾಸಂಗ ಪಡೆದು ಉನ್ನತ ಸ್ಥಾನಮಾನಗಳನ್ನು ಗಳಿಸುವಂತಾಗಬೇಕು. ನಾವು ಸ್ವಾವಲಂಬಿಗಳಾಗಿ ಬದುಕವಂತಹ
ಜೀವನ ರೂಪಿಸಿಕೊಳ್ಳಬೇಕು. ಹಿಂದುಳಿದಿರುವ ನಮ್ಮ ಸಮಾಜಗಳನ್ನು ಮುಂದೆ ತರಲು ಪ್ರಯತ್ನಿಸುತ್ತಿರುವ ಮಠಗಳ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಮಾತನಾಡಿ, ಹಾಲುಮತ ಹಾಗೂ ಗಂಗಾಮತ ಎರಡೂ ಸಮಾಜಗಳಿಗೆ ಧಾರ್ಮಿಕ, ಸಾಂಸ್ಕೃತಿಕವಾಗಿ ದೊಡ್ಡ ಇತಿಹಾಸ ಇದೆ. ಕನಕದಾಸರು ಹಾಗೂ ಅಂಬಿಗರ ಚೌಡಯ್ಯ ನಡುವೆ ಸಾಮ್ಯತೆ ಇದೆ. 12ನೇ ಶತಮಾನದಲ್ಲಿ ಅಂಬಿಗರ ಚೌಡಯ್ಯ ಶೋಷಿತರನ್ನು ಜಾಗೃತಗೊಳಿಸುವ ಪ್ರಯತ್ನ ಮಾಡಿದ್ದರೆ, ಕನಕದಾಸರು 16ನೇ ಶತಮಾನದಲ್ಲಿ ಜನರನ್ನು ಬಡಿದೆಬ್ಬಿಸುವ ಕೆಲಸ ಮಾಡಿದರು. ಇಬ್ಬರ ಆಸೆ ಹಾಗೂ ಜೀವನದಲ್ಲಿ ಸಾಮ್ಯತೆ ಇದೆ. ನಾವು ಅವರನ್ನು ಆದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಸಾಗಬೇಕು. ಆ ದಿಸೆಯಲ್ಲಿ ನಮ್ಮ ಮಠ
ಮಾನ್ಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಅಲ್ಲಮಪ್ರಭು ಸಂಸ್ಥಾನ ಪೀಠದ ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ, ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ
ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬಸವಕಲ್ಯಾಣ ಶಾಸಕ ಬಿ.ನಾರಾಯಣ ಕಾರ್ಯಕ್ರಮ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.