ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಬನ್ನೂರು ಗ್ರಾಪಂ ಅಧ್ಯಕ್ಷ
ನೆರೆ ಪೀಡಿತರಿಗೆ ಬೇರೆಡೆ ಸ್ಥಳ ಗುರುತಿಸಲು ಮನವಿ
Team Udayavani, Jan 13, 2020, 1:11 PM IST
ಬಾಳೆಹೊನ್ನೂರು: ಬಂಡಿಮಠದ ನೆರೆ ಪೀಡಿತ ಪ್ರದೇಶದ ನಿವಾಸಿಗಳಿಗೆ ಬೇರೆಡೆ ಸ್ಥಳ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಬನ್ನೂರು ಗ್ರಾ.ಪಂ ಅಧ್ಯಕ್ಷ ಟಿ.ಎಂ. ವೆಂಕಟೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಪ್ರದೇಶದಲ್ಲಿ ಕುಸಿದ 42 ಮನೆಗಳ ನಿರ್ಮಾಣಕ್ಕಾಗಿ ಸರ್ಕಾರದಿಂದ
ಅನುದಾನ ಬಿಡುಗಡೆಯಾಗಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಕಾಮಗಾರಿ ಆದೇಶ ಪತ್ರ ಬಂದಿದ್ದು, ಕೆಲವರು ಮನೆ ಕಟ್ಟಲು ಪ್ರಾರಂಭಿಸಿದ್ದಾರೆ. ಆದರೆ ಇದೀಗ ಭದ್ರಾ ನದಿಗೆ ನೂತನ ಸೇತುವೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು, ಸೇತುವೆ ಹಾಗೂ ರಸ್ತೆ ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ಆದೇಶ ಪತ್ರದಂತೆ ಮನೆ ನಿರ್ಮಾಣ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಪುನಃ ಮನೆ ತೆರವುಗೊಳಿಸಬೇಕಾಗುತ್ತದೆ. ಶಾಸಕ ಟಿ.ಡಿ. ರಾಜೇಗೌಡರು ಈ ಬಗ್ಗೆ ಪ್ರಸ್ತಾಪ ಮಾಡಿದ್ದು, ಮುಂಜಾಗ್ರತೆಯಾಗಿ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಿ ನಿವೇಶನ ರಹಿತರಿಗೆ ಬೇರೆಡೆ ನಿವೇಶನ ಗುರುತಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಬನ್ನೂರು ಗ್ರಾ.ಪಂ ವ್ಯಾಪ್ತಿಯ ಬಂಡಿಮಠದಲ್ಲಿ ವಾಸ ಮಾಡುತ್ತಿದ್ದವರಿಗೆ 1983 ರಲ್ಲಿ ಗ್ರಾ.ಪಂ ವ್ಯಾಪ್ತಿಯ ಸರ್ವೇ ನಂ.
95ರಲ್ಲಿ ನಿವೇಶನ ನೀಡಲಾಗಿತ್ತು. 1995 ರಲ್ಲಿ ಭದ್ರಾನದಿಯಲ್ಲಿ ಪ್ರವಾಹ ಬಂದಾಗ ಬಂಡಿಮಠದವರಿಗೆ ಪುನಃ ಬಿ.ಕಣಬೂರು ಗ್ರಾ.ಪಂ ವ್ಯಾಪ್ತಿಯ ಸರ್ವೇ ನಂ. 127ರಲ್ಲಿ ನಿವೇಶನ ನೀಡಲಾಗಿತ್ತೆಂದು ಬಳಕೆದಾರರ ಹಿತರಕ್ಷಣಾ ವೇದಿಕೆ ತಿಳಿಸಿದೆ.
ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಸಿ.ಆರ್. ಸಗೀರ್ ಅಹಮ್ಮದ್, ಹಾಗೂ ಜಿಲ್ಲಾಧಿಕಾರಿಗಳಾಗಿದ್ದ ತಿಮ್ಮೇಗೌಡರು ಸೂಚನೆಯಂತೆ ನರಸಿಂಹರಾಜಪುರ ತಾಲೂಕು ತಹಶೀಲ್ದಾರ್ ಹಾಗೂ ತಾಪಂ ಇಒ
ಹೇಮಚಂದ್ರ ಅವರು ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲಿಸಿ 33 ಆಶ್ರಯ ಮನೆ ನಿರ್ಮಿಸಿ ಕೊಟ್ಟು ಬಂಡೀಮಠ ಅವರನ್ನು ಸ್ಥಳಾಂತರ ಮಾಡಲಾಗಿತ್ತು. ಈ ಜಾಗವನ್ನು ಅರಣ್ಯ ಇಲಾಖೆಯವರು ವಶಪಡಿಸಿಕೊಂಡು ಉದ್ಯಾನವನ ನಿರ್ಮಿಸಬೇಕು ಎಂದು ಸ್ಥಳದಲ್ಲಿ ತಿಳಿಸಿಲಾಗಿತ್ತು.
ಇದು ನದಿ ದಂಡೆ ಬಫರ್ ಝೋನ್ ಪ್ರದೇಶವಾಗಿದ್ದು, ಈ
ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದರು. ಅಧಿ ಕಾರಿಗಳು ನೆರೆ ಪೀಡಿತ ಪ್ರದೇಶ ವಶಪಡಿಸಿಕೊಳ್ಳದ ಹಿನ್ನೆಲೆಯಲ್ಲಿ ಬಂಡಿಮಠದಿಂದ ಸ್ಥಳಾಂತರ ಗೊಂಡ ವ್ಯಕ್ತಿಗಳು ಬೇರೆಯವರಿಗೆ ಹಸ್ತಾಂತರ ಮಾಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.