ಪ್ರತಿಪಕ್ಷಗಳಿಂದ ಅನಗತ್ಯ ಗೊಂದಲ ಸೃಷ್ಟಿ

ದೇಶದ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಚಂದ್ರಪ್ಪ

Team Udayavani, Jan 13, 2020, 3:21 PM IST

13-Jnauary-19

ಭರಮಸಾಗರ: ದೇಶದ 130 ಕೋಟಿ ಜನಸಂಖ್ಯೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯ ಸುರಕ್ಷತೆಯನ್ನು ಕಾಪಾಡುತ್ತಿದ್ದಾರೆ ಎಂದು ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ. ಚಂದ್ರಪ್ಪ ಹೇಳಿದರು.

ಇಲ್ಲಿನ ಬಸವೇಶ್ವರ ಸಮುದಾಯ ಭವನದಲ್ಲಿ ಭರಮಸಾಗರ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ನೂತನ ಮಂಡಲಾಧ್ಯಕ್ಷರ ಪದಗ್ರಹಣ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದ ಎಲ್ಲಾ ವರ್ಗದ ಜನರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರ್ಥವಾಗಿದೆ. ಆದರೆ ಈ ವಿಷಯದಲ್ಲಿ ವಿರೋಧ ಪಕ್ಷಗಳು ವಿನಾಕಾರಣ ಗೊಂದಲ ಸೃಷ್ಟಿಸುತ್ತಿವೆ ಎಂದು ದೂರಿದರು.

ಕಳೆದ ವಿಧಾನಸಭೆ, ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯತ್‌ ಸೇರಿದಂತೆ ಎಲ್ಲಾ ಚುನಾವಣೆಯಲ್ಲಿ ನಮ್ಮ ಪಕ್ಷ ಅತ್ಯುತ್ತಮ ಫಲಿತಾಂಶವನ್ನು ನಿಮ್ಮ ಸಹಕಾರದಿಂದ ಪಡೆದಿದೆ. ಪಕ್ಷದ ಎಲ್ಲಾ ಪದಾಧಿ ಕಾರಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಸತತ ಜನರು ತತ್ತರಿಸಿದ್ದರು. ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ 43 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಂಡಿದೆ. ಪೂಜ್ಯರು ಒಂದೇ ಕಂತಿನಲ್ಲಿ ರಾಜ್ಯ ಸರ್ಕಾರದಿಂದ ಈ ಯೋಜನೆಗೆ ಹಣ ಮಂಜೂರು ಮಾಡಿಸಿದ್ದಾರೆ ಎಮದು ತಿಳಿಸಿದರು.

ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕೆ.ಎಸ್‌. ನವೀನ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುವಲ್ಲಿ ನಿರತವಾಗಿವೆ. ಎಲ್ಲಾ ಧರ್ಮದ ಜನರಿಗೂ ಪೌರತ್ವ ನೀಡಲಾಗಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ನೆನೆದು ಯುವ ಸಮೂಹ ಅವರ ಜಯಂತಿಯನ್ನು ಆಚರಿಸುತ್ತಿದೆ ಎಂದರು.

ಮೂರು ವರ್ಷಗಳ ಕಾಲ ಶಿವಣ್ಣ ಮಂಡಲಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ
ನಿರ್ವಹಿಸಿದ್ದಾರೆ. ಹೆಚ್ಚು ಮತಗಳಿಂದ ಈ ಕ್ಷೇತ್ರದ ಶಾಸಕರು, ವಿಧಾನ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಪಕ್ಷ ಗಟ್ಟಿಯಾಗಿ ಬೆಳೆಯಲು ಎಲ್ಲಾ ಹಂತದ ಚುನಾವಣೆಗಳನ್ನು ಗೆಲ್ಲಬೇಕು ಎಂದು ಹೇಳಿದರು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಮುರಳಿ ಯಾದವ್‌ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳು ಯುವಸಮೂಹದ ಆಶಾಕಿರಣಗಳಾಗಲಿ ಎಂದರು.

ಬಿಜೆಪಿ ಮಂಡಲ್‌ ನೂತನ ಅಧ್ಯಕ್ಷ ಶೈಲೇಶ್‌ ಕುಮಾರ್‌ ಮಾತನಾಡಿ, ಪಕ್ಷದ ಸೇವಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. 20 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ. ಕಾರ್ಯಕರ್ತರ ಸಹಕಾರ ಪಡೆದು ಸರ್ಕಾರದ ಸೌಲಭ್ಯ ಸದುಪಯೋಗವಾಗುವಂತೆ ಮಾಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಜಿಲ್ಲಾ ಮುಖಂಡರಾದ ಸುರೇಶ್‌, ಸಿದ್ದೇಶ್‌ ಯಾದವ್‌, ನಾಗರಾಜ್‌, ಶ್ರೀನಿವಾಸ್‌, ಹೊಳಲ್ಕೆರೆ ತಾಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ, ಜಿಪಂ ಸದಸ್ಯ ಡಿ.ವಿ. ಶರಣಪ್ಪ, ಕೋಗುಂಡೆ ವಿರೂಪಾಕ್ಷಪ್ಪ, ತಾಪಂ ಸದಸ್ಯರಾದ ಎನ್‌. ಕಲ್ಲೇಶ್‌, ಜಿ.ಬಿ. ಶೇಖರಪ್ಪ, ನಾಗೇಂದ್ರಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರತ್ನಮ್ಮ, ಚಿತ್ರದುರ್ಗ ಗ್ರಾಮಾಂತರ ಘಟಕದ ಅಧ್ಯಕ್ಷ ನಂದಿ ನಾಗರಾಜ್‌, ಸಿ.ಟಿ. ಮಹಾಂತೇಶ್‌, ಟಿಎಪಿಎಂಸಿ ಅಧ್ಯಕ್ಷ ಕೋಗುಂಡೆ ಮಂಜುನಾಥ್‌, ಕೊಳಹಾಳ್‌ ಶರಣಪ್ಪ, ಲೋಲಾಕ್ಷಮ್ಮ, ಎಚ್‌.ಎಂ.ದ್ಯಾಮಣ್ಣ, ನಾರಾಯಣ ರಾವ್‌ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.