ಈಗ ನಿಮ್ಮ ಟೈಮ್ ಶುರು
Team Udayavani, Jan 14, 2020, 6:00 AM IST
ಪರೀಕ್ಷೆ ಸಂದರ್ಭದಲ್ಲಿ ಸಮಯವೇ ದೇವರು. ಅದನ್ನು ಒಲಿಸಿಕೊಳ್ಳುವುದೂ ಕಲೆ. ಕಷ್ಟದ ಸಬೆjಕ್ಟ್ಗಳು, ಸುಲಭದ ವಿಷಯಗಳಿಗೆ ಇದನ್ನು ಹಂಚುವುದು ನಿಜಕ್ಕೂ ಪ್ರತಿಭೆಯೇ. ಇದನ್ನು ಪೂರೈಸಿದರೆ ಪರೀಕ್ಷೆಯನ್ನು ಅರ್ಧ ಗೆದ್ದಂತೆ. ಹೀಗಾಗಿ, ಸಮಯ ಎಂಬ ದೇವರನ್ನು ಒಲಿಸಿಕೊಳ್ಳುವ ಬಗೆ ಇಲ್ಲಿದೆ.
ವಿನ್ನರ್ ಡೋಂಟ್ ಡು ಡಿಫರೆಂಟ್ ಥಿಂಗ್ಸ್, ದೇ ಡು ದ ಥಿಂಗ್ಸ್ ಡಿಫರೆಂಟ್ಲೀ- ಅಂತಾರೆ ಮ್ಯಾನೇಜಮೆಂಟ್ ಗುರು ಶಿವ ಖೇರಾ. ಗೆಲ್ಲುವವರು ಆ ವಿಧಾನ ಈ ವಿಧಾನ ಅಂತ ಸಮಯಹರಣ ಮಾಡುವುದಿಲ್ಲವಂತೆ, ಅವರು ಮಾಡುವುದನ್ನೇ ಉಳಿದವರಿಗಿಂತ ವಿಭಿನ್ನವಾಗಿ ಮಾಡುತ್ತಾರಂತೆ. ಪರೀಕ್ಷೆಗೆ ಸಿದ್ಧವಾಗುವವರೂ ಈ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೀಗೆ ಓದಿದರೆ ಸರಿಯೋ, ಹಾಗೆ ಓದಿದರೆ ಸರಿಯೋ ಎಂದು ಅಳೆದು ಸುರಿಯುವುದರಲ್ಲೇ ಸಮಯ ಕಳೆಯುವುದು ಜಾಣತನವಲ್ಲ. ಪರೀಕ್ಷಾ ತಯಾರಿಯಲ್ಲಿ ತೊಡಗಿರುವವರಿಗೆ ಸಮಯ ಬಹಳ ಮುಖ್ಯ; ಪರೀಕ್ಷೆ ಸಮೀಪಿಸಿದಾಗಲಂತೂ ಒಂದೊಂದು ನಿಮಿಷವೂ ಅಮೂಲ್ಯ.
ಟೈಂಟೇಬಲ್ ಇರಲಿ
ಹೀಗಾಗಿ ಯಾವ ಸಬ್ಜೆಕ್ಟನ್ನು ಎಷ್ಟೆಷ್ಟು ಹೊತ್ತು ಓದಬೇಕು, ಹೇಗೆ ಪ್ಲಾನ್ ಮಾಡಿಕೊಳ್ಳಬೇಕು ಎಂದು ಅರ್ಥ ಮಾಡಿಕೊಳ್ಳದೇ ಹೋದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಎಲ್ಲ ಸಬೆjಕೂr ಒಂದೇ ಥರ ಇರುವುದಿಲ್ಲ. ಕೆಲವರಿಗೆ ವಿಜ್ಞಾನ ಕಷ್ಟ, ಇನ್ನು ಕೆಲವರಿಗೆ ಗಣಿತ ಕಷ್ಟ. ಹೀಗಾಗಿ ಎಲ್ಲರಿಗೂ ಸರಿ ಬರುವಂತಹ ಒಂದು ಕಾಮನ್ ವೇಳಾಪಟ್ಟಿ ಹಾಕಿಕೊಳ್ಳಲಾಗದು. ಒಬ್ಬೊಬ್ಬರೂ ತಮ್ಮ ಪರಿಸ್ಥಿತಿಯನ್ನು ಗಮನಿಸಿಕೊಂಡು ಅದಕ್ಕೆ ತಕ್ಕುದಾದ ವೇಳಾಪಟ್ಟಿ ಮಾಡಿಕೊಳ್ಳಬೇಕು. ಅಂತೂ ಟೈಮ್‌ಟೇಬಲ್ ಹಾಕಿಕೊಳ್ಳದೆ ಓದುವುದೆಂದರೆ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗೆಯೇ ಸರಿ. ಎರಡು ರೀತಿಯ ವೇಳಾಪಟ್ಟಿ ಮಾಡಿಕೊಳ್ಳಬಹುದು. ಒಂದು ತರಗತಿಗಳು ನಡೆಯುತ್ತಿರುವಾಗ ಓದಿಕೊಳ್ಳುವುದಕ್ಕೆ; ಇನ್ನೊಂದು ಪರೀಕ್ಷೆಗಾಗಿಯೇ ಕೊಡುವ ರೀಡಿಂಗ್ ಹಾಲಿಡೇಸ್‌ನಲ್ಲಿ ಅಥವಾ ವಾರಾಂತ್ಯದಲ್ಲಿ ಓದಿಕೊಳ್ಳುವುದಕ್ಕೆ. ತರಗತಿಗಳಿನ್ನೂ ನಡೆಯುತ್ತಿರುವಾಗ ಓದುವುದಕ್ಕೆ ತಮ್ಮತಮ್ಮ ಶಾಲಾ/ಕಾಲೇಜು ಅವಧಿಯನ್ನು ಗಮನಿಸಿಕೊಂಡು ಟೈಮ್ ಟೇಬಲ್ ಸಿದ್ಧಪಡಿಸಿಕೊಳ್ಳಬೇಕು. ಉದಾಹರಣೆಗೆ, ಬೆಳಗ್ಗೆ 5ರಿಂದ 8ಗಂಟೆಯವರೆಗೆ, ಸಂಜೆ 8ರಿಂದ 11 ಗಂಟೆಯವರೆಗೆ ಓದುವ ಸಮಯ ಅಂತ ಮೀಸಲಿಡಬಹುದಾದರೆ, ಒಟ್ಟು ಐದು ಗಂಟೆ ಸಿಕ್ಕಹಾಗಾಯ್ತು.
ಕಷ್ಟದ ವಿಷಯಕ್ಕೆ ಪ್ರಾಖ್ಯತೆ ಕೊಡಿ
ಒಂದೇ ದಿನ ಎಲ್ಲ ಸಬ್ಜೆಕ್ಟಗಳನ್ನೂ ಒಂದಿಷ್ಟಿಷ್ಟು ಓದಿಕೊಳ್ತೀನಿ ಅಂತ ಹೊರಡುವುದಕ್ಕಿಂತ ಎರಡು ದಿನಗಳಲ್ಲಿ ಎಲ್ಲವನ್ನೂ ಕವರ್ ಮಾಡಿಕೊಳ್ಳುವುದು ಉತ್ತಮ. ಮೊದಲ ದಿನ ಬೆಳಗ್ಗೆ ದೊರೆಯುವ ಮೂರು ಗಂಟೆಗಳನ್ನು ನಿಮಗೆ ಅತ್ಯಂತ ಕಷ್ಟವೆನಿಸುವ ವಿಷಯಕ್ಕೆ ಮೀಸಲಿಡಿ. ಉದಾ: ಗಣಿತ ಅಥವಾ ವಿಜ್ಞಾನ. ಸಂಜೆಯ ವೇಳೆ, 7ರಿಂದ 8 ಗಂಟೆಯ ನಡುವೆ ಆಯಾ ದಿನ ಮಾಡಬೇಕಾದ ಹೋಂವರ್ಕ್ ಇತ್ಯಾದಿಗಳನ್ನು ಪೂರೈಸಿಕೊಳ್ಳಿ. ಆಮೇಲೆ ಒಂದರ್ಧ ಗಂಟೆ ಊಟದ ಬ್ರೇಕ್ ತೆಗೆದುಕೊಂಡರೆ 8-30ರಿಂದ 11 ಗಂಟೆಯವರೆಗೆ ಇನ್ನೊಂದು ಗನ್ನು ಓದಿಕೊಳ್ಳಬಹುದು. ಎರಡನೆಯ ದಿನ ಇದೇ ಸಮಯದ ಮಿತಿಯಲ್ಲಿ ಉಳಿದ ನಾಲ್ಕು ಗಳನ್ನು ಓದುವ ಪ್ಲಾನ್ ಮಾಡಿಕೊಳ್ಳಬೇಕು. ಅವರವರ ಆದ್ಯತೆಗನುಗುಣವಾಗಿ ಸಮಯವನ್ನು ಒಂದರಿಂದ ಒಂದೂವರೆಗಂಟೆವರೆಗೆ ಒಂದೊಂದು ವಿಷಯಕ್ಕೆ ಹಂಚಿಕೊಳ್ಳಬಹುದು. ಮರುದಿನದಿಂದ ಮತ್ತೆ ಇದೇ ಯೋಜನೆ ಪುನರಾವರ್ತನೆ ಆಗಬೇಕು.
ಇನ್ನು ರೀಡಿಂಗ್ ಹಾಲಿಡೇಸ್‌ನಲ್ಲಿ ಇಡೀ ದಿನಕ್ಕೆ ವೇಳಾಪಟ್ಟಿ ಹಾಕಿಕೊಳ್ಳುವುದು ತುಂಬ ಮುಖ್ಯ. ಇಲ್ಲವಾದರೆ ನಮಗೆ ಗೊತ್ತಿಲ್ಲದಂತೆಯೇ ಅಮೂಲ್ಯ ಸಮಯ ಎಲ್ಲೋ ಕಳೆದುಹೋಗಿಬಿಡಬಹುದು. ಸರಿಯಾಗಿ ಪ್ಲಾನ್ ಮಾಡಿಕೊಂಡರೆ ರಜಾದಿನದಲ್ಲಿ ಏನಿಲ್ಲವೆಂದರೂ 10-12 ಗಂಟೆ ಓದಿಗಾಗಿಯೇ ಬಳಸಿಕೊಳ್ಳಬಹುದು. ಉದಾಹರಣೆಗೆ, ಬೆಳಗ್ಗೆ 5ರಿಂದ 8ರವರೆಗೆ ನಿಮ್ಮ ಆಯ್ಕೆಯ ಪ್ರಮುಖ ವಿಷಯವನ್ನು ಅಭ್ಯಾಸ ಮಾಡುವುದು; 8ರಿಂದ 9ರವರೆಗೆ ಒಂದು ಬ್ರೇಕ್ ತೆಗೆದುಕೊಂಡು ಸ್ನಾನ, ತಿಂಡಿ ಪೂರೈಸಿಕೊಂಡರೆ 9ರಿಂದ 11ರವರೆಗೆ ಇನ್ನೊಂದು ಗ ತೆಗೆದುಕೊಳ್ಳಬಹುದು. ಆಮೇಲೆ ಒಂದರ್ಧ ಗಂಟೆ ಬ್ರೇಕ್ ತೆಗೆದುಕೊಂಡು ರಿಫ್ರೆಶ್ ಆದರೆ ಮತ್ತೆ ಮಧ್ಯಾಹ್ನ 1-30ರವರೆಗೂ ಓದಬಹುದು. ಅರ್ಧ ಗಂಟೆ ಲಂಚ್ ಬ್ರೇಕ್ ಎಂದುಕೊಂಡರೆ, ಇನ್ನೊಂದರ್ಧ ಗಂಟೆ ಸಣ್ಣ ನಿದ್ದೆ ಮಾಡಿ ರಿಫ್ರೆಶ್ ಆಗುವುದೂ ತಪ್ಪಲ್ಲ. ಬಳಿಕ 2-30ರಿಂದ 4-30ರವರೆಗೆ ಒಂದು ಸ್ಲಾಟ್, 5ರಿಂದ 8ರವರೆಗೆ ಇನ್ನೊಂದು ಸ್ಲಾಟ್, 8-30ರಿಂದ 10-30ರವರೆಗೆ ಅಂದಿನ ಕೊನೆಯ ಸ್ಲಾಟ್. ಅಂತೂ ಪ್ರತೀ ಸ್ಲಾಟಿನ ನಡುವೆಯೂ ಒಂದಿಷ್ಟು ಗ್ಯಾಪ್ ತೆಗೆದುಕೊಳ್ಳವುದು ತುಂಬ ಮುಖ್ಯ. ಇಲ್ಲಿ ಯಾವ ಯಾವ ಸಬೆjಕ್ಟ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬೇಕು. ಬೆಳಗ್ಗೆ 5ರಿಂದ 8 ಎಷ್ಟು ಪ್ರಮುಖವಾದ ಸಮಯವೋ, ಸಂಜೆ 5ರಿಂದ 8 ಕೂಡ ಅಷ್ಟೇ ಪ್ರಮುಖ ಸಮಯ. ಊಟದ ಬಳಿಕ ಕೆಲವರಿಗೆ ಒಂದಿಷ್ಟು ಬಳಲಿಕೆ ಕಾಡಬಹುದು, ಆದರೆ 5ರಿಂದ 8ರ ಅವಧಿ ಮನಸ್ಸು ತುಂಬ ಆಕ್ಟೀವ್ ಆಗಿರುವ ಅವಧಿ.
ತಾಳ್ಮೆ ಮುಖ್ಯ
ಇನ್ನೊಂದು ಪ್ರಮುಖ ಸಂಗತಿ ಎಂದರೆ, ಬೇಸಿಕ್ಸ್ ಅನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಫಾರ್ಮುಲಾ ಬಿಟ್ಟು ಬೇರೆ ಏನನ್ನೂ ಬೈಹಾರ್ಟ್‌ಮಾಡುವುದು ತುಂಬ ಕೆಟ್ಟದು. ಅರ್ಥವಾಗದ ಪ್ರಾಥಮಿಕ ವಿಷಯಗಳನ್ನು ಅಧ್ಯಾಪಕರು ಅಥವಾ ಸ್ನೇಹಿತರ ಸಹಾಯದಿಂದ ಆರಂಭದಲ್ಲೇ ಬಗೆಹರಿಸಿಕೊಳ್ಳಬೇಕು. ಗಣಿತದ ಓದಿನಲ್ಲಿ ತಾಳ್ಮೆ ತುಂಬ ಮುಖ್ಯ. ನಿಮ್ಮ ಮನಸ್ಥಿತಿಗೆ ಹೊಂದಿಕೊಳ್ಳುವ ಒಬ್ಬ ಅಥವಾ ಇಬ್ಬರು ಗೆಳೆಯರಿದ್ದರೆ ಅವರೊಂದಿಗೆ ಅಭ್ಯಾಸ ಮಾಡುವುದರಿಂದ ಅನುಕೂಲವಾಗಬಹುದು. ಅನೇಕ ಸಲ ಗಣಿತ ನಮ್ಮ ನಿಜ ಬದುಕಿಗೆ ತುಂಬ ಹತ್ತಿರವಾಗಿರುತ್ತದೆ. ದಿನನಿತ್ಯದ ಉದಾಹರಣೆಗಳೊಂದಿಗೆ ಅದನ್ನು ಸಮೀಕರಿಸಿಕೊಂಡಾಗ ಬೇಗ ಅರ್ಥವಾಗುತ್ತದೆ ಮತ್ತು ಮರೆತು ಹೋಗುವುದಿಲ್ಲ.
ಇನ್ನು ವಿಜ್ಞಾನಕ್ಕೆ ಬಂದರೆ, ಗೆಳೆಯನೊಬ್ಬನಿಗೆ ಪಾಠ ಮಾಡುವ ವಿಧಾನ ತುಂಬ ಉಪಯುಕ್ತ. ಇದರಿಂದ ವಿಷಯಗಳು ಮನಸ್ಸಿನಲ್ಲಿ ತುಂಬ ಗಟ್ಟಿಯಾಗಿ ನೆಲೆಯಾಗುತ್ತವೆ. ಓದುತ್ತಲೇ ಪಾಯಿಂಟ್ಸ್ ಮಾಡಿಕೊಳ್ಳುವುದು, ಈಕ್ವೇಶನ್‌ಗಳನ್ನು ಪ್ರತ್ಯೇಕ ಕಾರ್ಡ್‌ಗಳಲ್ಲಿ ಬರೆದಿಟ್ಟುಕೊಳ್ಳುವುದು, ಬೇಸಿಕ್ಸ್ ಯಾವುದನ್ನೂ ಬಿಡದೆ ಅರ್ಥ ಮಾಡಿಕೊಳ್ಳುವುದು, ಓದಿದ್ದನ್ನು ಆಗಾಗ ನೆನಪು ಮಾಡಿಕೊಳ್ಳಲು ಪ್ರಯತ್ನಿಸುವುದು, ಮಾಕ್ ಟೆಸ್ಟ್‌ಗಳನ್ನು ಬರೆಯುವುದು ಬಹಳ ಅಗತ್ಯ. ಕೊನೇ ಕ್ಷಣದಲ್ಲಿ ಹೊಸ ಟಾಪಿಕ್ ಅನ್ನು ಓದಲು ಹೊರಡದಿರುವುದೇ ಒಳ್ಳೆಯದು.
ಪ್ರಾಕ್ಟೀಸ್, ಪ್ರಾಕ್ಟೀಸ್, ಪ್ರಾಕ್ಟೀಸ್
ಎಲ್ಲ ಸಬೆjಕ್ಟ್ಗಳಿಗೂ ಒಂದೇ ಅಪೋ›ಚ್‌ನಿಂದ ಅನುಕೂಲವಾಗದು. ಆಯಾ ವಿಷಯಕ್ಕನುಗುಣವಾಗಿ ತಯಾರಿಯ ವಿಧಾನದಲ್ಲೂ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಗಣಿತವನ್ನೇ ತೆಗೆದುಕೊಳ್ಳಿ. ಅದಕ್ಕೆ ಪ್ರಾಕ್ಟೀಸ್, ಪ್ರಾಕ್ಟೀಸ್, ಪ್ರಾಕ್ಟೀಸ್ ಎಂಬುದೇ ಮೂಲಮಂತ್ರ. ಓದಿ, ಕೇಳಿ ಕಲಿಯುವ ಸಬ್ಜೆಕ್ಟ್ ಅದಲ್ಲ, ಮಾಡಿ ಕರಗತ ಮಾಡಿಕೊಳ್ಳಬೇಕಾದ ಸಬ್ಜೆಕ್ಟ್ ಅದು. ಜಗತ್ತಿನಲ್ಲಿ ಜೀನಿಯಸ್ ಎನಿಸಿದ ಐನ್‌ಸ್ಟಿàನ್ ಏನು ಹೇಳಿದ್ದಾನೆ ಗೊತ್ತಾ? ನಾನೇನೂ ತುಂಬ ಬುದ್ಧಿವಂತ ಅಲ್ಲ. ಸಮಸ್ಯೆಗಳೊಂದಿಗೆ ಸ್ವಲ್ಪ ಹೆಚ್ಚು ಹೊತ್ತು ಕಳೆಯುತ್ತೇನೆ ಅಷ್ಟೇ ಅಂತ. ಎಷ್ಟೇ ಕಠಿಣ ವಿಷಯವಾದರೂ ನಮ್ಮ ಸಮಯ ಹಾಗೂ ಪ್ರಾಕ್ಟೀಸಿನ ಎದುರು ಸೋಲಲೇ ಬೇಕು. ಈ ಹಂತದಲ್ಲಿ ಮಾಡಬೇಕಾದ ಎರಡನೇ ಕೆಲಸ ಅಂದ್ರೆ ತಪ್ಪುಗಳನ್ನು ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಒಂದು ಸ್ಟೆಪ್‌ನಲ್ಲಿ ತಪ್ಪಾದರೆ ಉಳಿದದ್ದೆಲ್ಲ ತಪ್ಪಾದಂತೆಯೇ ಅಲ್ಲವೇ? ಹಾಗಾಗಿ ಯಾವ ಹಂತದಲ್ಲಿ ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಗಮನಿಸಿಕೊಳ್ಳಬೇಕು.
– ಕೊನೇ ಕ್ಷಣದಲ್ಲಿ ಹೊಸ ಟಾಪಿಕ್ ಓದುವ ರಿಸ್ಕ್ ಬೇಡ
-ಗಣಿತದಲ್ಲಿ ಫಾರ್ಮುಲಾ ಬಿಟ್ಟು ಬೇರೇನನ್ನೂ ಉರುಹೊಡೆಯ ಬೇಡಿ
– ಕಷ್ಟದ ವಿಷಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಿ
ಸಿಬಂತಿ ಪದ್ಮನಾಭ ಕೆ. ವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.