ಅದಮಾರು ಮಠದ ಪರ್ಯಾಯ: ಭರದ ಸಿದ್ಧತೆ

Team Udayavani, Jan 14, 2020, 1:14 AM IST

adamaru-paryaya

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಉತ್ಸವಕ್ಕೆ ಕ್ಷಣಗಣನೆ ಯಾಗುತ್ತಿರುವಂತೆಯೇ ಅದಕ್ಕೆ ಬೇಕಾದ ಪೂರ್ವ ತಯಾರಿಗಳು ಭರದಿಂದ ನಡೆಯುತ್ತಿವೆ. ರಥಬೀದಿಯು ಸಂಪೂರ್ಣ ದೀಪಾಲಂಕೃತವಾಗಿದ್ದು, ಹಬ್ಬದ ವಾತಾವರಣ ಮೂಡಿದೆ. ನಗರದ ಎಲ್ಲ ಬೀದಿಗಳು ಸಂಪೂರ್ಣ ಸ್ವತ್ಛವಾಗಿವೆ, ಎಲ್ಲ ಬೀದಿ ದೀಪಗಳು ಸುಸ್ಥಿತಿಯಲ್ಲಿವೆ. ಅಂಗಡಿ ಮುಂಗಟ್ಟುಗಳು ಕೂಡ ನಾಡಹಬ್ಬಕ್ಕೆ ಅಲಂಕೃತವಾಗಿ ಹೊರ ಭಾಗಗಳಿಂದ ಬರುವ ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಮಹೋತ್ಸವದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಶ್ರೀಕೃಷ್ಣ ಸೇವಾ ಬಳಗವು ಈಗಾಗಲೇ ಹಲವಾರು ಪೂರ್ವಭಾವಿ ಸಭೆಗಳನ್ನು ನಡೆಸಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ಭಕ್ತಾದಿಗಳು ಉಡುಪಿಗೆ ಬರುವ ಸಂದರ್ಭದಲ್ಲಿ ಅವರಿಗೆ ಒದಗಿಸಲಾಗುವ ಮೂಲಸೌಕರ್ಯಗಳ ಬಗ್ಗೆ ಸರಕಾರ ಮತ್ತು ಜಿಲ್ಲಾಡಳಿತದ ಮಟ್ಟದಲ್ಲಿ ಸಭೆಗಳಾಗಿವೆ. ನೂತನ ಪೊಲೀಸ್‌ ವರಿಷ್ಠಾಧಿಕಾರಿ ಈಗಾಗಲೇ ಸುರಕ್ಷೆ, ವಾಹನ ನಿಲುಗಡೆ, ವಾಹನಗಳ ಓಡಾಟ ಇತ್ಯಾದಿಗಳ ಬಗ್ಗೆ ಪೂರ್ವಯೋಜಿತವಾಗಿ ಸಂಪೂರ್ಣ ಸಿದ್ಧತೆ ನಡೆಸಿರುವ ವರದಿಯನ್ನು ಜಿÇÉಾಡಳಿತದ ಮೂಲಕ ಶ್ರೀಕೃಷ್ಣ ಸೇವಾ ಬಳಗಕ್ಕೆ ಸಲ್ಲಿಸಿ¨ªಾರೆ.

ರಸ್ತೆ ಕಾಮಗಾರಿ
ಮೆರವಣಿಗೆ ಸಾಗುವ ಜೋಡುಕಟ್ಟೆಯಿಂದ ಕಲ್ಪನಾ ಟಾಕೀಸ್‌ ವರೆಗೆ ರಸ್ತೆ ಸಂಪೂರ್ಣ ಡಾಮರು ಕಾಮಗಾರಿ ನಡೆಸಲಾಗಿದೆ. ಹಾಗೆಯೇ ರಥಬೀದಿ ಮತ್ತು ಸುತ್ತಮುತ್ತಲಿನ ರಸ್ತೆ ಡಾಮರು ಕಾಮಗಾರಿಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ನಗರಸಭೆಯ ಅಧಿಕಾರಿಗಳು ಭರವಸೆ ನೀಡಿ¨ªಾರೆ. ಸುಮಾರು 400 ಕಂಬಗಳಲ್ಲಿ 800 ಗೂಡುದೀಪಗಳನ್ನು ಸಾಲು ಸಾಲಾಗಿ ಜೋಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಜಾನಪದ ತಂಡಗಳು ಉಡುಪಿಗೆ ಬರಲಿವೆ. ಶಾಸಕ ರಘುಪತಿ ಭಟ್‌ ಅವರ ಮುತುವರ್ಜಿಯಿಂದ ಉಡುಪಿಯ ವಿವಿಧ ಇಲಾಖೆಗಳಿಂದ ಆರು ಟ್ಯಾಬ್ಲೋಗಳು ಪರ್ಯಾಯ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಇತರ ಮೂಲ ಸೌಕರ್ಯಗಳಾದ ಸ್ವತ್ಛತೆ, ಕುಡಿಯುವ ನೀರಿನ ನಿರಂತರ ಸರಬರಾಜು, ಪ್ರವಾಸಿಗಳಿಗೆ ಮತ್ತು ಕಲಾವಿದರಿಗೆ ವಸತಿ ವ್ಯವಸ್ಥೆಗಳು ಪೂರ್ಣಗೊಂಡಿವೆ. ಜಿÇÉೆಯ ವಿವಿಧ ಭಾಗಗಳ ಸಂಘಟನೆಗಳ ಮುಖಾಂತರ ಸುಮಾರು 1,200ಕ್ಕೂ ಹೆಚ್ಚು ಸ್ವಯಂಸೇವಕರು ಸರ್ವಸನ್ನದ್ಧರಾಗಿದ್ದಾರೆ.

ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶಗಳನ್ನು ನೀಡಲಾಗುತ್ತಿದೆ. ಉಡುಪಿಯ ಬೈಲಕೆರೆ ಸೇರಿಗಾರ ಕುಟುಂಬಸ್ಥರು ಪ್ರಸಾದ ತಯಾರಿಕೆ ಮತ್ತು ವಿತರಣೆಗಾಗಿ ರಾಜಾಂಗಣದ ಕಾರು ಪಾರ್ಕಿಂಗ್‌ ಸಮೀಪ ಸುಮಾರು ಒಂದೂವರೆ ಎಕರೆ ಸ್ಥಳದಲ್ಲಿ ಅವಕಾಶವನ್ನು ಕಲ್ಪಿಸಿ¨ªಾರೆ.

ಆಮಂತ್ರಣ ಪತ್ರಿಕೆ ವಿತರಣೆ
ಪರ್ಯಾಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಗಳು ಉಡುಪಿಯ ನಾಗರಿಕರಿಗೆ ವಿತರಿಸುತ್ತಿದ್ದಾರೆ.

ಭೋಜನ ಪ್ರಸಾದ
ಜ. 17ರ ರಾತ್ರಿ 35ರಿಂದ 40 ಸಾವಿರ ಭಕ್ತರಿಗೆ ಅನ್ನಪ್ರಸಾದ, ಜ. 18ರಂದು ಮಧ್ಯಾಹ್ನ 40ರಿಂದ 50 ಸಾವಿರ ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆಯನ್ನು ಪಾಕತಜ್ಞ ವಿಷ್ಣುಮೂರ್ತಿ ಭಟ್‌ ಅವರ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಎಲ್ಲ ವ್ಯವಸ್ಥೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಅನೇಕ ಸಮಿತಿಗಳನ್ನು ರಚನೆ ಮಾಡಿ ಪ್ರತ್ಯೇಕ ಸಂಚಾಲಕರನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.