ಬುಧವಾರ ಸಂಜೆ ಜ್ಯೋತಿ ದರ್ಶನ: ಶಬರಿಮಲೆಯಲ್ಲಿ ಮಕರ ಸಂಕ್ರಮಣಕ್ಕೆ ಸಕಲ ಸಿದ್ಧತೆ
Team Udayavani, Jan 14, 2020, 11:12 AM IST
ಶಬರಿಮಲೆ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ಸ್ವಾಮೀ ಸನ್ನಿಧಾನದಲ್ಲಿ ಮಕರ ಸಂಕ್ರಮಣ ದಿಪೋತ್ಸವ ಹಾಗೂ ಮಕರ ಜ್ಯೋತಿ ದರ್ಶನ ಬುಧವಾರ ನಡೆಯಲಿದೆ.
ಸೋಮವಾರ ಭಾರಿ ಪೊಲೀಸ್ ಭದ್ರತೆಯೊಂದಿಗೆ ಪಂದಳ ಅರಮನೆಯಿಂದ ಶೋಭಾಯಾತ್ರೆಯ ಮೂಲಕ ಹೊರಟ ಅಯ್ಯಪ್ಪ ಸ್ವಾಮಿಯ ತಿರುವಾಭರಣಂ ಮೆರವಣಿಗೆ ಆರಂಭಗೊಂಡಿದ್ದು, ಮಕರ ಉತ್ಸವ ಪೂಜೆಯಂದು ಯೋಗಮುದ್ರೆಯಲ್ಲಿರುವ ಅಯ್ಯಪ್ಪ ಸ್ವಾಮಿಯ ವಿಗ್ರಹಕ್ಕೆ ತಿರುವಾಭರಣಗಳನ್ನು ತೊಡಿಸಿ ಪೂಜೆ ಮಾಡಲಾಗುತ್ತದೆ.
ಜ.12ವರೆಗೆ ಪಂದಳ ಅರಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ತಿರುವಾಭರಣವನ್ನು ಭಕ್ತರ ದರ್ಶನಕ್ಕಾಗಿ ಇಡಲಾಗಿತ್ತು. ಬಳಿಕ ಸೋಮವಾರ ಪೂಜೆ, ವೈಧಿಕ ಕಾರ್ಯಕ್ರಮ ಮುಗಿದ ಬಳಿಕ ಮೆರವಣಿಗೆಯ ಮೂಲಕ ಶಬರಿಮಲೆ ಸನ್ನಿಧಾನಕ್ಕೆ ತರಲಾಗುತ್ತಿದೆ. ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿಯ ತಿರುವಾಭರಣಂವನ್ನು ವಿಗ್ರಹಕ್ಕೆ ತೊಡಿಸಿ ದೀಪಾರಾಧನೆ ಹಾಗೂ ಪೂಜೆ, ಪುನಸ್ಕಾರ ಮತ್ತಿತರ ವೈಧಿಕ ಕ್ರಿಯೆಗಳು ನಡೆಯಲಿದೆ.
ಬುಧವಾರ ಜ್ಯೋತಿ ದರ್ಶನ
ಜ.15ರಂದು ಮುಂಜಾನೆ ಸೂರ್ಯ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಾದಾರ್ಪಣೆ ಮಾಡಿ ಧನುರಾಶಿಯಿಂದ ಮಕರ ರಾಶಿಗೆ ಬದಲಾಗುವ ಮಕರ ಜ್ಯೋತಿ ಶುಭದಿನವಾದ ಬುಧವಾರ ಮಕರ ಸಂಕ್ರಮಣ ಪೂಜೆ ನಡೆಯಲಿದೆ. ಸಂಜೆಯ ವೇಳೆ ಪೊನ್ನಂಬಲ ಮೇಡುವಿನಲ್ಲಿ ಮಕರ ಜ್ಯೋತಿ ದರ್ಶನವಾಗುತ್ತದೆ.
ಹೆಚ್ಚಿದ ಭಕ್ತಾದಿಗಳ ಸಂಖ್ಯೆ
ಈ ಬಾರಿ ಶಬರಿಮಲೆ ಸನ್ನಿಧಾನದಲ್ಲಿ ಅಯ್ಯಪ್ಪ ಭಕ್ತ ಸಂದಣಿಯು ಹೆಚ್ಚಿದ್ದು, ಕಳೆದ ವರ್ಷ ಈ ಅವಧಿಯಲ್ಲಿ ಭಕ್ತರ ದಟ್ಟನೆ ಕಡಿಮೆಯಾಗಿತ್ತು. ಕಳೆದ ವರ್ಷ ಮಹಿಳೆಯರ ಪ್ರವೇಶ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಈ ಬಾರಿ ಮಂಡಲ ಉತ್ಸವ ಸಮಯದಲ್ಲಿಯೇ ಭಕ್ತರ ಸಂಖ್ಯೆ ಹೆಚ್ಚಳವಾಗಿತ್ತು. ಅದೇ ಪ್ರಮಾಣದಲ್ಲಿ ಈಗಲೂ ಕ್ಷೇತ್ರದತ್ತ ಅಯ್ಯಪ್ಪ ಭಕ್ತರು ಆಗಮಿಸುತ್ತಿದ್ದು, ಹದಿನೆಂಟು ಮೆಟ್ಟಲು ಎದುರುಗಡೆ ಭಾರೀ ಸರದಿ ಸಾಲು ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಭಕ್ತರ ಜನ ಸಂದಣಿ ಹತ್ತುಪಟ್ಟು ಹೆಚ್ಚಳವಾಗಿದೆ ಎನ್ನಲಾಗಿದೆ.
21ರವರೆಗೆ ದರ್ಶನ ಅವಕಾಶ
ಮಕರ ವಿಳಕ್ಕು ಉತ್ಸವದ ಅಂಗವಾಗಿ ಜ.21ರ ತನಕ ಭಕ್ತರಿಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶವಿದೆ. ಅಂದು ಸಂಜೆ 5 ಗಂಟೆಗೆ ಪಂಪಾ ಗಣಪತಿ ಕ್ಷೇತ್ರದ ಬಳಿ ತಲುಪುವರಿಗೆ ದರ್ಶನ ಲಭಿಸುವುದು. ರಾತ್ರಿ 9.30ಕ್ಕೆ ಅತ್ತಾಳ ಪೂಜಾ ನಡೆದ ಬಳಿಕ ಗುಡಿ ಮುಚ್ಚಲಾಗುತ್ತದೆ.
* ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.