ಸರ್ಕಾರಿ ದಿನಗೂಲಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Jan 14, 2020, 3:04 PM IST
ಬೆಳಗಾವಿ: ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ದಿನಗೂಲಿ ನೌಕರರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ದಿನಗೂಲಿ, ಗುತ್ತಿಗೆ ಹಾಗೂ ಹಂಗಾಮಿ ನೌಕರರಿಗೆ ಸಹ ನ್ಯಾಯಾಲಯದ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ, ನಿಗಮಗಳಲ್ಲಿ, ಜಿಲ್ಲಾ ಪಂಚಾಯತಿಗಳಲ್ಲಿ ಜಾರಿಯಲ್ಲಿರುವ ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಿಸುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ಅಧ್ಯಕ್ಷ ಡಾ.ಕೆ. ಎಸ್. ಶರ್ಮಾ ದಿನಗೂಲಿ ನೌಕರರ ಎಲ್ಲ ಬೇಡಿಕೆಗಳನ್ನು ಮಾರ್ಚ್‌ದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಈಡೇರಿಸಬೇಕು. ಕಳೆದ ಜ.10 ರಂದು ಮುಖ್ಯಮಂತ್ರಿಗಳು ಹೊರಡಿಸಿರುವ ಆದೇಶಕ್ಕೆ ತಿದ್ದುಪಡಿ ತಂದು ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರಿಗೆ ಶೇ.100 ರಷ್ಟು ತುಟ್ಟಿಭತ್ಯೆ ಹಾಗೂ ಮನೆ ಬಾಡಿಗೆ ಭತ್ಯೆಯನ್ನು ನೀಡುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹ ಪಡಿಸಿದರು.
ಯಾವುದೇ ಇಲಾಖೆಯಲ್ಲಿ ವಜಾ ಮಾಡಿರುವ ಹೊರ ಗುತ್ತಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ಆದೇಶಿಸಬೇಕು. ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಎಲ್ಲ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಅವರು ಹೇಳಿದರು. ಪ್ರತಿಭಟನೆಯಲ್ಲಿ ವಿ.ಜಿ.ಸೊಪ್ಪಿನಮಠ, ರಮೇಶ ಕಾತರಕಿ, ಯಲ್ಲಪ್ಪ ಚನ್ನನವರ, ಐ.ಎಂ.ಸನದಿ, ಪ್ರಕಾಶ ಗಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.